ಸಾಗರ ಮಾಲಾ ಯೋಜನೆ ವಿರೋಧಿಸಿ ಪ್ರತಿಭಟನೆ


Team Udayavani, Jan 14, 2020, 4:03 PM IST

uk-tdy-1

ಕಾರವಾರ: ಇಲ್ಲಿನ ಸರ್ವಋತು ಬಂದರು ಎರಡನೇ ಹಂತದ ವಿಸ್ತರಣೆಗೆ ಕೇಂದ್ರ ಸರ್ಕಾರ ರೂಪಿಸಿ ಜಾರಿ ಮಾಡುತ್ತಿರುವ ಸಾಗರ ಮಾಲಾ ಯೋಜನೆ ವಿರೋಧಿಸಿ ಸಾವಿರಾರು ಮೀನುಗಾರರು ಕಡಲತೀರದಲ್ಲಿ ಪ್ರತಿಭಟನೆ ನಡೆಸಿದರು. ಕಾರವಾರ ಬೀಚ್‌ನಲ್ಲಿ 125 ಕೋಟಿ ವೆಚ್ಚದ ಅಲೆತಡೆ ಗೋಡೆ ಕಾಮಗಾರಿಗೆ ಅಡ್ಡಿಪಡಿಸಿದರು.

ಕಾಮಗಾರಿಗೆ ಅಡ್ಡಿಪಡಿಸಿದ ಮೀನುಗಾರ ಮುಖಂಡರು ಹಾಗೂ ಯುವಕರು, ಮಹಿಳೆಯರನ್ನು ಪೊಲೀಸರು ಬಂಧಿಸಿ ಬಸ್‌ನಲ್ಲಿ ಪೊಲೀಸ್‌ ಪರೇಡ್‌ ಮೈದಾನಕ್ಕೆ ಕರೆದೊಯ್ದರು. ಬೆಳಗಿನಿಂದ ಅಲೆತಡೆಗೋಡೆ ಕಾಮಗಾರಿ ಗುತ್ತಿಗೆ ಪಡೆದ ಏಜೆನ್ಸಿ ಪ್ರಾರಂಭಿಸಿತು. ಇದನ್ನು ಮೀನುಗಾರರು ಪ್ರತಿರೋಧಿಸುತ್ತಲೇ ಇದ್ದರು. ಪರಿಸರ ಇಲಾಖೆ ಅನುಮತಿ ಇಲ್ಲ. ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಮೀನುಗಾರಿಕೆಗೆ ತೊಂದರೆಯಾಗಲಿದೆ. ಕಾರವಾರ ಕಡಲತೀರ ಪ್ರವಾಸಿಗರಿಗೆ ಮತ್ತು ಜನತೆಗೆ ಉಳಿಯುವುದಿಲ್ಲ. ಇದು ಅವೈಜ್ಞಾನಿಕ ಕಾಮಗಾರಿ ಎಂದು ಅಧಿಕಾರಿಗಳು ಹಾಗೂ ಪೊಲೀಸರ ಜತೆ ಮುಖಂಡರು ಹಾಗೂ ಯುವಕರು ವಾಗ್ವಾದಕ್ಕೆ ಇಳಿದರು.

ಬೆಳಗಿನ 11:29ರ ಹೊತ್ತಿಗೆ ಪರಿಸ್ಥಿತಿ ಕೈ ಮೀರುವ ಸುಳಿವು ಅರಿತ ಪೊಲೀಸರು ಪ್ರತಿಭಟನಾಕಾರರ ಬಂಧನಕ್ಕೆ ಎರಡು ಬಸ್‌ ತರಿಸಿದರು. ಆರಂಭದಲ್ಲಿ ಮುಖಂಡರಾದ ಗಣಪತಿ ಮಾಂಗ್ರೆ ಹಾಗೂ ರಾಜು ತಾಂಡೇಲ ಹಾಗೂ ಯುವಕರನ್ನು, ಮಹಿಳೆಯರನ್ನು ಬಂಧಿಸಲಾಯಿತು.

ಕಾಮಗಾರಿ ತಡೆಯಲು ಯುವಕರ ಪಡೆ ನುಗ್ಗುತ್ತಿದ್ದಂತೆ ಅವರನ್ನು ಸುತ್ತುವರಿದ ಪೊಲೀಸ ಪಡೆಗಳು, ಪ್ರತಿಭಟನಾಕಾರರನ್ನು ಬಂಧಿಸಿ, ಬಸ್‌ಗಳಿಗೆ ತುಂಬಿದರು. ಪ್ರತಿಭಟಿಸುತ್ತಲೇ ಬಸ್‌ ಏರಿದ ಮೀನುಗಾರರು ಸರ್ಕಾರದ ವಿರುದ್ಧ, ಅಧಿಕಾರಿಗಳ ವಿರುದ್ಧ  ಕ್ಕಾರ ಕೂಗಿದರು. ಈ ವೇಳೆಗೆ ಎರಡು ಬಸ್‌ಗಳಲ್ಲಿ ತುಂಬಿದ್ದ ನೂರಕ್ಕೂ ಹೆಚ್ಚು ಜನರನ್ನು ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನಕ್ಕೆ ಕರೆತಂದು ಪೊಲೀಸ್‌ ಬ್ಯಾರೆಕ್‌ನಲ್ಲಿ ಇಡಲಾಯಿತು. ನಂತರ ಅವರ ಹೆಸರು ನಮೂದಿಸಿಕೊಂಡು ಬಿಡುಗಡೆ ಮಾಡಲಾಯಿತು. ಈ ವೇಳೆಗೆ ಎರಡು ತಾಸು ಕಳೆದಿತ್ತು. ಅಲೆ ತಡೆಗೋಡೆ ಕಾಮಗಾರಿಗೆ ಬುನಾದಿ ಹಾಕುವ ಕ್ರಿಯೆ ನಡೆದಿತ್ತು. ಇದನ್ನು ಸ್ಥಳದಲ್ಲಿದ್ದ ಮೀನುಗಾರರು ವಿರೋಧಿಸುತ್ತಲೇ ಇದ್ದರು. ಮಧ್ಯಾಹ್ನ ಊಟದ ವಿರಾಮದ ವೇಳೆಗೆ ಬಿಡುಗಡೆ ಹೊಂದಿದ್ದ ಮೀನುಗಾರರ ಮಹಿಳೆಯರು ಮತ್ತು ಯುವಕರು ಮತ್ತೆ ಕಾಮಗಾರಿ ತಡೆಯಲು ಪ್ರತಿಭಟನೆ ಆರಂಭಿಸಿದರು.

ಕಾಮಗಾರಿ ನಡೆವ ಸ್ಥಳಕ್ಕೆ ನುಗ್ಗಿದಾಗ ಘರ್ಷಣೆ ಉಂಟಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟು ಪೊಲೀಸರು ಕಾಮಗಾರಿ ನಡೆವ ಸ್ಥಳದಲ್ಲಿ ಕೋಟೆ ರಚಿಸಿದರು. ಇದನ್ನು ಪ್ರತಿಭಟಿಸಿದ ಈರ್ವರು ಮೀನುಗಾರ ಮಹಿಳೆಯರು, ಒಬ್ಬ ಯುವಕ ಸಮುದ್ರಕ್ಕೆ ಇಳಿದು ಅಸ್ವಸ್ಥರಾದರು. ತಕ್ಷಣ ಅವರನ್ನು ಅಂಬ್ಯುಲೆನ್ಸ್‌ ಮೂಲಕ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಕಾರವಾರ ಬೀಚ್‌ನಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.