ಜಾತಿ, ಧರ್ಮದ ಹೆಸರಿನಲ್ಲಿ ದೇಶ ಒಡೆಯುವುದು ಬೇಡ

Team Udayavani, Jan 15, 2020, 3:00 AM IST

jaati-dharma

ಯಳಂದೂರು: ಧರ್ಮ ನಿರಪೇಕ್ಷತೆ ಹಾಗೂ ಜಾತ್ಯತೀತತೆ ಭಾರತ ಸಂವಿಧಾನದ ಆತ್ಮವಾಗಿದೆ. ದೇಶದಲ್ಲಿ ಎನ್‌ಆರ್‌ಸಿ, ಸಿಎಎ ಜಾರಿಯಾದರೆ ಇದಕ್ಕೆ ಅಪಚಾರವೆಸಗಿದಂತಾಗುತ್ತದೆ. ಈ ನಿಟ್ಟಿನಲ್ಲಿ ದೇಶವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದು ತರವಲ್ಲ ಎಂದು ನಿವೃತ್ತ ಪ್ರಾಂಶುಪಾಲ ಜೀತವನದ ಮನೋರಖೀತ ಬಂತೇಜಿ ತಿಳಿಸಿದರು.

ತಾಲೂಕಿನ ಮಲಾರಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮದ ಜನರು ಸಾವಿರಾರು ವರ್ಷಗಳಿಂದಲೂ ವಾಸವಾಗಿದ್ದಾರೆ. ಇಡೀ ವಿಶ್ವಕ್ಕೆ ಐಕ್ಯತೆಯ ಸಂದೇಶ ಸಾರಿದ್ದು, ನಮ್ಮ ದೇಶವಾಗಿದೆ. ಇದನ್ನು ಮುಂದುವರಿಸಿಕೊಳ್ಳುವ ಅಗತ್ಯತೆ ಪ್ರಸ್ತುತಕ್ಕೆ ಹೆಚ್ಚಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಅಂತಃಕರಣ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳು ಅಂತಃಕರಣ ಹಾಗೂ ಆತ್ಮ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ನೈತಿಕ ನೆಲೆಗಟ್ಟಿನಲ್ಲಿ ಬದುಕು ರೂಪಿಸಿಕೊಳ್ಳಬೇಕು. ಬುದ್ಧನ ಪಂಚಶೀಲಗಳ ಪಾಲನೆ ರೂಢಿಸಿಕೊಳ್ಳಬೇಕು. ಕ್ಷಮಾಗುಣವನ್ನು ಬೆಳೆಸಿಕೊಳ್ಳಬೇಕು. ಹೆಣ್ಣು ಮಕ್ಕಳು ಮನೆಯಲ್ಲಿ ಹಿರಿಯ ಅನುಮತಿ ಪಡೆದುಕೊಂಡು ವಿವಾಹ ಮಾಡಿಕೊಳ್ಳಬೇಕು. ಇದರಿಂದ ಎರಡೂ ಸಂಬಂಧಗಳು ಬಲಗೊಳ್ಳುತ್ತವೆ. ದಾಂಪತ್ಯ ಪಾವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ಹಿರಿಯರನ್ನು ಗೌರವಿಸುವ ಮನೋಭಾವನೆ ರೂಢಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ:
ಕಾಲೇಜಿನ ಪ್ರಾಂಶುಪಾಲ ಜೆ. ಸುರೇಂದ್ರ ಮಾತನಾಡಿ, ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ ಹಾಗೂ ಅವರಲ್ಲಿನ ಪ್ರತಿಭೆಗಳನ್ನು ಅನಾವರಣಕ್ಕೆ ಸಹಕಾರ ನೀಡುತ್ತದೆ. ಇಂತಹ ಕಾರ್ಯಕ್ರಮದ ಪ್ರಯೋಜನ ಭವಿಷ್ಯದಲ್ಲಿ ಸತಜೆಗಳಾಗಿ ರೂಪುಗೊಳ್ಳಲು ಸಹಕಾರ ನೀಡುತ್ತದೆ. ಪ್ರತಿಯೊಬ್ಬರೂ ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕನ್ನಡ ಭಾಷಾ ವಿಭಾಗದ ಸಹ ಪ್ರಾಧ್ಯಪಕ ಥಿಯೋಡರ್‌ ಲೂಥರ್‌ ಮಾತನಾಡಿ, ಎನ್‌ಎಸ್‌ಎಸ್‌ನಲ್ಲಿ ರಾಷ್ಟ್ರ ಸೇವೆ ಸಲ್ಲಿಸುವ ಒಂದು ನೆಪವಾಗಬಾರದು. ಇದು ರೂಢಿಯಾಗಬೇಕು. ವ್ಯಕ್ತಿಗತವಾಗಿ ದೇಶಪ್ರೇಮ, ದೇಶಸೇವೆಯನ್ನು ಬೆಳೆಸಿಕೊಳ್ಳುವ ಮನೋಭಾವ ವೃದ್ಧಿಯಾಗಬೇಕು ಎಂದು ಹೇಳಿದರು. ಈ ವೇಳೆ ಶಿಬಿರಾಧಿಕಾರಿ ಗಿರಿಜಾ, ಹಾಲು ಉತ್ಪಾದಕರ ಸಂಘದ ಲಿಂಗರಾಜು, ಉಪನ್ಯಾಸಕರಾದ ಸತೀಶ್‌, ಮಹಾಂತೇಶ್‌, ಚೇತನ್‌, ಮಹಾದೇವ ಕುಮಾರ್‌, ಸಿದ್ದರಾಜೇಗೌಡ, ಸುರೇಂದ್ರ, ನಂಜೇಶ್‌, ಶೋಭಾ ಹಾಗೂ ಎನ್‌ಎಸ್‌ಎಸ್‌ ಶಿಬಿರಾರ್ಥಿಗಳು ಹಾಜರಿದ್ದರು

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.