ಮತ್ತೊಂದು ಬೆಳವಣಿಗೆ: ನಿರ್ಭಯಾ ಹಂತಕರು ಜ.22ರಂದು ನೇಣುಗಂಬಕ್ಕೆ ಏರಲ್ಲ!
ಜನವರಿ 22ರಂದು 7ಗಂಟೆಗೆ ಅಪರಾಧಿಗಳನ್ನು ಗಲ್ಲಿಗೇರಿಸಬಾರದು ಎಂದು ದಿಲ್ಲಿ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ
Team Udayavani, Jan 15, 2020, 2:59 PM IST
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ದಿನಗಣನೆ ಆರಂಭವಾಗಿದೆ ಎಂಬ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೊಂದು ಬೆಳವಣಿಗೆ ನಡೆದಿದ್ದು, ಜನವರಿ 22ರಂದು ಬೆಳಗ್ಗೆ 7ಗಂಟೆಗೆ ನಾಲ್ವರನ್ನು ಗಲ್ಲಿಗೇರಿಸುವ ಪ್ರಕ್ರಿಯೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ನಿರ್ಭಯಾ ಪ್ರಕರಣದ ನಾಲ್ವರಲ್ಲಿ ಒಬ್ಬ ಅಪರಾಧಿ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಜನವರಿ 22ರಂದು 7ಗಂಟೆಗೆ ಅಪರಾಧಿಗಳನ್ನು ಗಲ್ಲಿಗೇರಿಸಬಾರದು ಎಂದು ದಿಲ್ಲಿ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ.
ವಿನಯ್ ಶರ್ಮಾ, ಮುಖೇಶ್ ಕುಮಾರ್, ಅಕ್ಷಯ್ ಕುಮಾರ್ ಸಿಂಗ್ ಹಾಗೂ ಪವನ್ ಗುಪ್ತಾನನ್ನು ತಿಹಾರ್ ಜೈಲಿನಲ್ಲಿ ಜ.22ರಂದು ಬೆಳಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿ ಕೋರ್ಟ್ ಕಳೆದ ವಾರ ಡೆತ್ ವಾರಂಟ್ ಹೊರಡಿಸಿತ್ತು.
ಇದೀಗ ಮುಖೇಶ್ ಸಿಂಗ್ ಮಂಗಳವಾರ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಅದು ವಜಾಗೊಂಡ ನಂತರವೂ ಅಪರಾಧಿಗೆ ಗಲ್ಲಿಗೇರಿಸುವ ಮೊದಲು 14 ದಿನಗಳ ಕಾಲಾವಕಾಶದ ನೋಟಿಸ್ ನೀಡಬೇಕು ಎಂದು ವರದಿ ವಿವರಿಸಿದೆ.
ಕ್ಷಮಾದಾನ ಅರ್ಜಿ ಕುರಿತು ರಾಷ್ಟ್ರಪತಿಗಳು ನಿರ್ಧಾರ ಕೈಗೊಂಡ ನಂತರ ಅಪರಾಧಿಗೆ 14 ದಿನಗಳ ಕಾಲಾವಕಾಶ ನೀಡಬೇಕಾಗಿದೆ ಎಂದು ಅಡಿಷನಲ್ ಸಾಲಿಸಿಟರ್ ಜನರಲ್ ಮತ್ತು ದೆಹಲಿ ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ಮತ್ತೊಂದೆಡೆ ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮುಖೇಶ್ ಸಿಂಗ್ ನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಕ್ಷಣವೇ ವಜಾಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಭಾಯಿಜಲ್ ಅವರಿಗೆ ಕಳುಹಿಸಬೇಕೆಂದು ತಿಳಿಸಿದ್ದಾರೆ. ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಮಿಂಚಿನ ವೇಗದಲ್ಲಿ ತಿರಸ್ಕರಿಸಬೇಕಾಗಿದೆ ಎಂದು ಸಿಸೋಡಿಯಾ ತಿಳಿಸಿದ್ದಾರೆ.
ಕ್ಷಮಾದಾನ ಅರ್ಜಿ ಇತ್ಯರ್ಥವಾಗುವವರೆಗೆ ತಿಹಾರ್ ಜೈಲು ಅಧಿಕಾರಿಗಳು ಡೆತ್ ವಾರಂಟ್ ಜಾರಿಗೊಳಿಸಲು ಕಾಯಬೇಕಾಗುತ್ತದೆ. ಅಪರಾಧಿಗಳ ಗಲ್ಲುಶಿಕ್ಷೆ ಕೊನೆಗೂ ಜಾರಿಯಾಗುವುದು ರಾಷ್ಟ್ರಪತಿ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದ ನಂತರ ಎಂದು ದಿಲ್ಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.