ಮಾ.5ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಯಡಿಯೂರಪ್ಪ
ಅಮಿತ್ ಶಾ ಭೇಟಿ ಬಳಿಕ ಸಂಪುಟ ವಿಸ್ತರಣೆ
Team Udayavani, Jan 15, 2020, 9:55 PM IST
ಶಿಕಾರಿಪುರ/ದಾವಣಗೆರೆ: ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದ ಸ್ವಗೃಹದಲ್ಲಿ ಕುಟುಂಬದವರೊಂದಿಗೆ ಸಂಕ್ರಾಂತಿ ಪೂಜೆ ಸಲ್ಲಿಸಿ ಬೇವು-ಬೆಲ್ಲ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.18ರಂದು ಹುಬ್ಬಳ್ಳಿಗೆ ಅಮಿತ್ ಶಾ ಬರಲಿದ್ದು ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ನಡೆಸಲಾಗುವುದು. ಮಾ. 5ರಂದು ರಾಜ್ಯ ಬಜೆಟ್ ಮಂಡಿಸಲಿದ್ದು, ಇದಕ್ಕಾಗಿ ಒಂದು ತಿಂಗಳ ಕಾಲ ತಯಾರಿ ನಡೆಯಲಿದೆ ಎಂದರು.
ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಸಾರ್ವಜನಿಕರ ಮನವಿ ಸ್ವೀಕರಿಸಿದ ಸಿಎಂ ಆಬಳಿಕ ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆ ಬಳಿಕ ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾ.5ರಂದು ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ನಾನು ಸಹ ರೈತನ ಮಗ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವ ಬಗ್ಗೆ ಇನ್ನೂ ಆಲೋಚಿಸಿಲ್ಲ ಆದರೆ ಬಜೆಟ್ನಲ್ಲಿ ಕೃಷಿ ಕ್ಷೇತ್ರ ಹಾಗೂ ರೈತರ ಹಿತ ಕಾಯಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.