ಸಂವಿಧಾನ ತಿದ್ದುಪಡಿಗೆ ಪುಟಿನ್ ಇಂಗಿತ! ರಷ್ಯಾ ಪಿಎಂ ರಾಜೀನಾಮೆ
Team Udayavani, Jan 15, 2020, 10:14 PM IST
ಮಾಸ್ಕೊ: ದೇಶದ ಸಂವಿಧಾನದಲ್ಲಿ ಆಮೂಲಾಗ್ರ ಬದಲಾವಣೆ ತರಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿರ್ಧರಿಸಿದ್ದಾರೆ. ಅದಕ್ಕೆ ಪೂರಕವಾಗಿ ಪ್ರಧಾನಿ ಡಿಮಿಟ್ರಿ ಮಡ್ವಡೇವ್ ರಾಜೀನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಅವರಿಗೆ ಈಗ ಅಧ್ಯಕ್ಷರ ಭದ್ರತಾ ಸಮಿತಿಯ ಉಪ ಮುಖ್ಯಸ್ಥ ಹುದ್ದೆಯ ಹೊಣೆ ನೀಡಲಾಗಿದೆ.
ಇದೇ ವೇಳೆ, ಸರ್ಕಾರಿ ವಾಹಿನಿ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪುಟಿನ್ ಹೊಸ ತಿದ್ದುಪಡಿ ಮೂಲಕ ಸಂಸದರು ಪ್ರಧಾನಿಯನ್ನು ಮತ್ತು ಸಂಪುಟ ಸದಸ್ಯರನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿರುತ್ತಾರೆ.
ಇದರಿಂದ ಆಡಳಿತ ಮತ್ತು ಅಧಿಕಾರದಲ್ಲಿ ಸಂಸತ್ತಿನ ಪಾತ್ರ ಮಹತ್ವ ಪಡೆಯಲಿದೆ ಎಂದು ಹೇಳಿದ್ದಾರೆ. ಪುಟಿನ್ ಅವರ ಹಾಲಿ ಅಧಿಕಾರದ ಅವಧಿ 2024ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ, ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಈಗಲೇ ಚರ್ಚೆಗಳು ಶುರುವಾಗಿವೆ.
ಹಾಲಿ ನಿರ್ಧಾರ ಪ್ರಕಟಗೊಂಡಿರುವ ಹಿನ್ನೆಯಲ್ಲಿ ಪುಟಿನ್ ತಮ್ಮ ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ ರಷ್ಯಾದ ಆಡಳಿತ ಚುಕ್ಕಾಣಿಯನ್ನು ತಮ್ಮ ಕೈಯಲ್ಲೇ ಹಿಡಿದಿಟ್ಟುಕೊಳ್ಳಲು ಸಂವಿಧಾನಿಕ ತಿದ್ದುಪಡಿ ತರಲು ಹೊರಟಿದ್ದಾರೆ ಎಂಬ ಟೀಕೆ ರಷ್ಯಾದಲ್ಲಿ ವ್ಯಕ್ತವಾಗಿದೆ. ಪ್ರಮುಖ ಪ್ರತಿಪಕ್ಷ ನಾಯಕ ಅಲೆಕ್ಸಿ ನವಾನ್ಲಿ ಟ್ವೀಟ್ ಮಾಡಿ ಅಧಿಕಾರದಲ್ಲಿ ಮುಂದುವರಿಯಬೇಕು ಎಂಬ ಇರಾದೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದಂತಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.