ಅಕ್ಕಿ ಪ್ರಮಾಣ ಕತ್ತರಿ ಪ್ರಸ್ತಾಪಕ್ಕೆ ಸಿದ್ದು ಗರಂ
Team Udayavani, Jan 16, 2020, 3:07 AM IST
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡು ತ್ತಿರುವ ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವ ದೆಹಲಿಯಲ್ಲಿ ಮಾತನಾಡಿ, ಅನ್ನಭಾಗ್ಯ ಯೋಜನೆ ಬಡವರಿಗಾಗಿ ಮಾಡಿರುವ ಯೋಜನೆ. 2.40 ಲಕ್ಷ ಕೋಟಿ ಬಜೆಟ್ನಲ್ಲಿ 4 ಸಾವಿರ ಕೋಟಿ ವೆಚ್ಚ ಮಾಡಲು ಸಾಧ್ಯವಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಅಕ್ಕಿ ಕಡಿತ ಮಾಡಿದರೆ, ರಾಜ್ಯದ ಬಡವರು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ನಮ್ಮ ಸರ್ಕಾರ ಬಂದಿದ್ದರೆ 10 ಕೆ.ಜಿ. ಅಕ್ಕಿ ಕೊಡುತ್ತಿದ್ದೆವು. ಬಡವರಿಗೆ ಉಚಿತ ಅಕ್ಕಿ ನೀಡಿದ್ದರಿಂದಲೇ ಪ್ರವಾಹ ಬಂದರೂ ಬಡವರು ಗುಳೆ ಹೋಗಲಿಲ್ಲ ಎಂದು ಹೇಳಿದರು.
ಅನ್ಯಭಾಗ್ಯ ಅಕ್ಕಿ 5 ಕೆ.ಜಿ.ಗೆ ಇಳಿಕೆ?: ಆಹಾರ ಇಲಾಖೆಯಿಂದ ಅನ್ನಭಾಗ್ಯ ಯೋಜನೆಯಲ್ಲಿ ನೀಡು ತ್ತಿರುವ ಅಕ್ಕಿ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಸರ್ಕಾರ ವಿಸ್ತೃತ ಮಾಹಿತಿ ಪಡೆದುಕೊಂಡಿದ್ದು, ಅಕ್ಕಿ ಬದಲು ಎಣ್ಣೆ ಹಾಗೂ ತೊಗರಿ ಬೇಳೆ ಮತ್ತು ಉಪ್ಪು ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ತಕ್ಷಣ ಘೋಷಣೆ ಮಾಡಿ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಕಾರ್ಡ್ದಾರರಿಗೆ ಪ್ರತಿ ವ್ಯಕ್ತಿಗೂ 7 ಕೆ.ಜಿ.ಯಂತೆ ಕುಟುಂಬದ ಎಲ್ಲ ಸದಸ್ಯರಿಗೂ ಉಚಿತ ಅಕ್ಕಿ ನೀಡಲಾಗುತ್ತಿದೆ.
ಉಳಿತಾಯದ ಲೆಕ್ಕಾಚಾರ: ರಾಜ್ಯ ಸರ್ಕಾರ ಉಚಿತ ವಾಗಿ ಏಳು ಕೆ.ಜಿ. ನೀಡುವ ಅಕ್ಕಿಯಲ್ಲಿ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿಯನ್ನು 3 ರೂ. ದರದಲ್ಲಿ ನೀಡುತ್ತದೆ. ಉಳಿದ 2 ಕೆ.ಜಿ. ಅಕ್ಕಿಯನ್ನು ರಾಜ್ಯ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ 23 ರೂ. ನಂತೆ ಖರೀದಿಸಿ ಫಲಾನುಭವಿಗಳಿಗೆ ಉಚಿತವಾಗಿ ನೀಡುತ್ತಿದೆ.
ರಾಜ್ಯ ಸರ್ಕಾರ ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸುವ 2 ಕೆ.ಜಿ. ಅಕ್ಕಿಯನ್ನು ಕಡಿಮೆ ಮಾಡಿದರೆ ರಾಜ್ಯ ಸರ್ಕಾರಕ್ಕೆ ವಾರ್ಷಿಕ ಸುಮಾರು 2 ಸಾವಿರ ಕೋಟಿ ರೂ. ಉಳಿಯಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ರಾಜ್ಯದಲ್ಲಿ 1.18 ಕೋಟಿ ಬಿಪಿಎಲ್ ಕಾರ್ಡ್ದಾ ರ ರಿದ್ದು, 7 ಕೆ.ಜಿ. ಅಕ್ಕಿ ನೀಡಿದರೆ ಪ್ರತಿ ವರ್ಷ 3,800 ಕೋಟಿ ರೂ. ವೆಚ್ಚವಾಗುತ್ತದೆ.
ಐದು ಕೆ.ಜಿ. ಅಕ್ಕಿ ನೀಡಿದರೆ ಇಲಾಖೆಗೆ ಪ್ರತಿ ತಿಂಗಳು 63 ಕೋಟಿ ರೂ. ವೆಚ್ಚವಾಗುತ್ತಿದ್ದು, ವಾರ್ಷಿಕ ಸುಮಾರು 756 ಕೋಟಿ ಮಾತ್ರ ವೆಚ್ಚವಾಗುತ್ತದೆ. ಅಕ್ಕಿ ಜತೆಗೆ ತೊಗರಿ ನೀಡಲು ತೀರ್ಮಾನಿಸಿದರೆ ಪ್ರತಿ ಕೆ.ಜಿ. ತೊಗರಿಗೆ ಮಾರುಕಟ್ಟೆಯಲ್ಲಿ 80 ಕೆ.ಜಿ. ದೊರೆಯುತ್ತಿದ್ದರೂ, ಪಡಿತರ ವ್ಯವಸ್ಥೆಯಡಿ ಸರ್ಕಾರ ತೊಗರಿ ಬೇಳೆ 38 ರೂ.ಗೆ ನೀಡುವ ಬಗ್ಗೆ ಆಲೋಚನೆ ನಡೆಸಿದೆ.
ಈ ಯೋಜನೆಗೆ ಸುಮಾರು ವಾರ್ಷಿಕ 600 ಕೋಟಿ ರೂ. ಹೆಚ್ಚುವರಿ ಹೊರೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ತಾಳೆ ಎಣ್ಣೆ ಹಾಗೂ ಉಪ್ಪು ನೀಡುವ ಬಗ್ಗೆಯೂ ಚಿಂತಿಸಿದ್ದು, ಪ್ರತಿ ಲೀಟರ್ ಎಣ್ಣೆಗೆ 45 ರೂ. ಹಾಗೂ ಪ್ರತಿ ಕೆ.ಜಿ. ಉಪ್ಪಿಗೆ 6 ರೂ.ದರದಲ್ಲಿ ನೀಡುವ ಬಗ್ಗೆ ಆಹಾರ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.