ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೆ ಸರ್ಕಾರ ಬದ್ಧ

Team Udayavani, Jan 16, 2020, 3:08 AM IST

kannada

ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಶ್ರೀಮಂತ ಜಾನಪದ ಕಲೆಗಳು ರಾಜ್ಯವಷ್ಟೇ ಅಲ್ಲ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿವೆ. ಈ ಕಲೆಗಳನ್ನು ಉಳಿಸಿ ಬೆಳೆಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ನಾಡಿನ ಶ್ರೀಮಂತ ಜಾನಪ ಕ್ರೀಡೆ ಮತ್ತು ಕಲೆಗಳ ಉಳಿಗಾಗಿ ಹಾವೇರಿಯಲ್ಲಿ ಜಾನಪದ ವಿವಿ ಸ್ಥಾಪನೆ ಮಾಡಿದ್ದೆ. ಈಗಲೂ ಗುರುಶಿಷ್ಯ ಯೋಜನೆ, ಜಾನಪದ ಜಾತ್ರೆ ಸೇರಿ ಕಲಾವಿದರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಸಚಿವ ಆರ್‌.ಅಶೋಕ ಮಾತನಾಡಿ, ರೈತರಪರ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರೈತರಿಗಾಗಿ ಪ್ರತ್ಯೇಕ ಬಜೆಟ್‌ ಮಂಡನೆ ಮಾಡಿದ್ದರು. ಈಗ ಮತ್ತೆ ಜಾನಪದ ಜಾತ್ರೆ ಕಾರ್ಯಕ್ರಮ ಆರಂಭಿಸುವ ಮೂಲಕ ಜಾನಪದ ಕಲೆ ಮತ್ತು ಕಲಾವಿದರ ಉಳಿಕೆಗೆ ಮುಂದಾಗಿದ್ದಾರೆ ಎಂದರು. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದ ಅಭಿವೃದ್ಧಿ ಶ್ರಮಿಸಲಿದೆ.

ಶಿಕ್ಷಣ, ಆರೋಗ್ಯ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ತೋರಲಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಅವರ ಸರ್ಕಾರ ಜೋಡೆತ್ತಿನ ರೀತಿಯಲ್ಲಿ ಕೆಲಸ ಮಾಡಲಿದೆ. ಇನ್ನು ಐಟಿ ಬಿಟಿಯಲ್ಲಿ ಮುಳುಗಿ ಹೋಗುತ್ತಿರುವ ಬೆಂಗಳೂರಿಗೆ ಮತ್ತೆ ಹಳ್ಳಿ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಜಾನಪದ ಜಾತ್ರೆ ಹಮ್ಮಿ ಕೊಳ್ಳಲಾಗಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು. ಜತೆಗೆ ವಿವಿಧ ಜಾನಪದ ತಂಡಗಳ ಕಲಾಪ್ರದರ್ಶನ ಗಮನ ಸೆಳೆಯಿತು. ಸಚಿವ ಬಸವರಾಜ ಬೊಮ್ಮಾಯಿ, ಶಾಸಕರಾದ ಸತೀಶ್‌ ರೆಡ್ಡಿ, ಪ್ರೀತಂ ಗೌಡ, ಕನ್ನಡ ಮತ್ತು ಸಂಸ್ಕತಿ ಇಲಾಖೆ ನಿರ್ದೇಶಕ ಎಸ್‌.ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಜಾನಪದ ಕುಣಿತ ವೀಕ್ಷಿಸಿದ ಸಿಎಂ: ಬುಧವಾರ ರಿಲ್ಯಾಕ್ಸ್‌ ಮೂಡಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, 2 ಗಂಟೆಗೂ ಹೆಚ್ಚು ಕಾಲ ಸಿದ್ಧಿಕುಣಿತ, ಹಾಲಕ್ಕಿ ಸುಗ್ಗಿ ಕುಣಿತ ಸೇರಿದಂತೆ 500ಕ್ಕೂ ಹೆಚ್ಚು ಕಲಾವಿದರು ಪ್ರದರ್ಶಿಸಿದ ವಿವಿಧ ಜಾನಪದ ಕಲಾ ಪ್ರಕಾರಗಳ ಕುಣಿತ, ಜಾನಪದ ಸೊಗಡಿನ ಹಾಡು, ನೃತ್ಯ ವೀಕ್ಷಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.