ಪೃಥಿ ಶಾ ಮತ್ತೆ ಫಿಟ್: ಕಿವೀಸ್ ಪ್ರವಾಸಕ್ಕೆ ಸಿದ್ದ
Team Udayavani, Jan 16, 2020, 3:29 PM IST
ಮುಂಬೈ: ರಣಜಿ ವೇಳೆ ವಿಪರೀತ ಭುಜ ನೋವಿಗೆ ತುತ್ತಾಗಿದ್ದ ಪೃಥ್ವಿ ಶಾ ದೈಹಿಕ ಕ್ಷಮತೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಆದ್ದರಿಂದ ಅವರು ಮತ್ತೆ ಭಾರತ ತಂಡದಲ್ಲಿ ಆಡುವ ಕನಸಿಗೆ ಹತ್ತಿರವಾಗಿದ್ದಾರೆ.
ಅವರು ಶೀಘ್ರವೇ ನ್ಯೂಜಿಲೆಂಡಿಗೆ ತೆರಳಿ ಭಾರತ “ಎ’ ತಂಡವನ್ನು ಕೂಡಿ ಕೊಳ್ಳಲಿದ್ದಾರೆ. ಕರ್ನಾಟಕ ವಿರುದ್ಧದ ರಣಜಿ ಪಂದ್ಯದ ವೇಳೆ ಓವರ್ ಥ್ರೋ ಒಂದನ್ನು ತಡೆಯಲು ಡೈವ್ ಹೊಡೆದ ವೇಳೆ ಪೃಥ್ವಿ ಶಾ ಭುಜದ ನೋವಿಗೆ ಒಳಗಾಗಿದ್ದರು.
“ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಯೋ-ಯೋ ಟೆಸ್ಟ್ನಲ್ಲಿ ಪೃಥ್ವಿ ಶಾ ಉತ್ತೀರ್ಣರಾಗಿದ್ದಾರೆ. ಗುರುವಾರ ಅಥವಾ ಶುಕ್ರವಾರ ಅವರು ನ್ಯೂಜಿಲೆಂಡಿಗೆ ಪ್ರಯಾಣಿಸಲಿದ್ದಾರೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಪೃಥ್ವಿ ಶಾ 2 ಅಭ್ಯಾಸ ಪಂದ್ಯಗಳನ್ನು ತಪ್ಪಿಸಿಕೊಂಡರೂ ಜ. 22ರಂದು ನಡೆಯಲಿರುವ ಭಾರತ ನ್ಯೂಜಿಲೆಂಡ್ “ಎ’ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಲಭ್ಯರಿರುತ್ತಾರೆ. ಇದರಿಂದ ಅವರು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡದ 3ನೇ ಆರಂಭಿಕನಾಗಿಯೂ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.