ಸೂರು ವಂಚಿತ ದುರ್ಗಿಮುರ್ಗಿ ಜನಾಂಗ!
ನಾಗರಹಾಳದಲ್ಲಿ 20 ವರ್ಷದಿಂದ ವಾಸ ಮತದಾರರ ಚೀಟಿ ಮಾತ್ರ ಇದೆ ಶಿಕ್ಷಣ ವಂಚಿತ ಮಕ್ಕಳು
Team Udayavani, Jan 17, 2020, 1:42 PM IST
ಮುದಗಲ್ಲ: ಸಮೀಪದ ನಾಗರಹಾಳ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ವಾಸಿಸುತ್ತಿರುವ ದುರ್ಗಿಮುರ್ಗಿ ಜನಾಂಗದವರು ಇದುವರೆಗೂ ಸೂರು ವಂಚಿತರಾಗಿದ್ದು, ಖಾಸಗಿ ವ್ಯಕ್ತಿಗಳ ಖಾಲಿ ನಿವೇಶನದಲ್ಲಿ ಜೋಪಡಿಗಳಲ್ಲಿ ವಾಸಿಸುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕಮತಗಿ ಗ್ರಾಮದ ಹತ್ತಾರು ಕುಟುಂಬಗಳು ನಾಗರಹಾಳ ಗ್ರಾಮಕ್ಕೆ ಬಂದು ನೆಲೆಸಿವೆ. ಹಲವು ವರ್ಷಗಳಿಂದ ವಾಸಿಸುತ್ತಿರುವ ಇವರಿಗೆ ಚುನಾವಣೆ ಗುರುತಿನ ಚೀಟಿ ಹೊರತುಪಡಿಸಿ, ಬೇರ್ಯಾವ ದಾಖಲೆಗಳನ್ನು ಸರ್ಕಾರ ಇದುವರೆಗೆ ಒದಗಿಸಿಲ್ಲ. ಇದರಿಂದ ಸರ್ಕಾರದ ನಾನಾ ಯೋಜನೆಗಳಿಂದ ವಂಚಿತರಾಗಿದ್ದಾರೆ. ದೊಡ್ಡವರು ಜೀವನೋಪಾಯಕ್ಕಾಗಿ ಗ್ರಾಮೀಣ ಪ್ರದೇಶಕ್ಕೆ ತೆರಳಿ ಕೂದಲುಗಳನ್ನು ಸಂಗ್ರಹಿಸುವುದು, ಪಿನ್, ಪ್ಲಾಸ್ಟಿಕ್ ಇತರೆ ವಸ್ತುಗಳನ್ನು ಮಾರುತ್ತಾರೆ. ಸ್ವಂತ ನಿವೇಶನ, ಮನೆ ಇಲ್ಲದ ಇವರು ಮಳೆ, ಗಾಳಿ, ಬಿಸಿಲು, ಚಳಿ ಎನ್ನದೇ ಬಯಲಲ್ಲಿ ಜೋಪಡಿ ಹಾಕಿಕೊಂಡು ಬದುಕಿನ ಬಂಡಿ ದೂಡುತ್ತಿದ್ದಾರೆ.
ಶಿಕ್ಷಣ ವಂಚಿತರು: ದುರ್ಗಿಮುರ್ಗಿ ಜನಾಂಗದವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ದೊಡ್ಡವರು ಗ್ರಾಮೀಣ ಪ್ರದೇಶಕ್ಕೆ ತೆರಳಿ ಪಿನ್, ಪ್ಲಾಸ್ಟಿಕ್, ಆಟಿಕೆ ಸಾಮಾನ ಮಾರಿದರೆ, ಮಕ್ಕಳು ಭಿಕ್ಷಾಟನೆ ಮಾಡುತ್ತಾರೆ. ಈ ಮಕ್ಕಳಿಗೆ ಕನಿಷ್ಠ ಶಿಕ್ಷಣವನ್ನಾದರೂ ಕೊಡಿಸಲು ಸರ್ಕಾರ, ಅಧಿಕಾರಿಗಳು ವಿಫಲರಾಗಿದ್ದಾರೆ. ಇಂತಹ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಸರ್ಕಾರ ಸಾಕಷ್ಟು ಹಣ ವ್ಯಯಿಸುತ್ತಿದೆ. ಆದರೂ ಅದು ಅರ್ಹರಿಗೆ ತಲುಪುತ್ತಿಲ್ಲ. ವಾಸ್ತವವಾಗಿ ಸರ್ಕಾರದ ಹಣ, ಯೋಜನೆ ಸದ್ಬಳಕೆ ಆಗುವ ಬದಲು ಸರ್ಕಾರೇತರ ಸಂಸ್ಥೆ, ಅಧಿಕಾರಿಗಳ ಪಾಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಇಂತಹ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡುತ್ತದೆ. ಆದರೆ ಅ ಧಿಕಾರಿಗಳ ಬೇಜವಬ್ದಾರಿಯಿಂದ ಈ ಸಮುದಾಯಕ್ಕೆ ಮೂಲ ಸೌಲಭ್ಯಗಳು ಮರೀಚಿಕೆಯಾಗಿವೆ. ಇನ್ನಾದರೂ ಸರ್ಕಾರ, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇವರಿಗೆ ನಿವೇಶನ ಒದಗಿಸಿ, ಮನೆ ನಿರ್ಮಿಸಿಕೊಡಬೇಕು. ಸರ್ಕಾರದ ಯೋಜನೆ ತಲುಪಿಸಬೇಕು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದೆ.
ಕಳೆದ 20 ವರ್ಷಗಳಿಂದ ಇದೇ ಗ್ರಾಮದಲ್ಲಿ ವಾಸವಿದ್ದು, ಸರಕಾರದಿಂದ ಯಾವುದೇ ಯೋಜನೆಗಳು ನಮ್ಮ ಪಾಲಿಗೆ ಇಲ್ಲದಂತಾಗಿವೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.
ಜಂಬಣ್ಣ, ಬಂಡೆಪ್ಪ,
ದುರ್ಗಿಮುರ್ಗಿ ಜನಾಂಗದವರು
ದುರ್ಗಿಮುರ್ಗಿ ಜನಾಂಗದ ಕೆಲವರಿಗೆ ವಸತಿ ವ್ಯವಸ್ಥೆ ನೀಡಲಾಗಿದೆ. ಇನ್ನೂ ಕೆಲವರಿಗೆ ಮೂಲ ದಾಖಲಾತಿ ಕೊರತೆಯಿಂದ ಸೌಲಭ್ಯ ಕಲ್ಪಿಸಲಾಗಿಲ್ಲ. ಮುಂದಿನ ದಿನಗಳಲ್ಲಿ ವಸತಿ ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು.
ಸೋಮನಗೌಡ ಪಾಟೀಲ,
ಪಿಡಿಒ ನಾಗರಹಾಳ ಗ್ರಾಪಂ
ದೇವಪ್ಪ ರಾಠೊಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.