ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಸವಾಲು

2018-19ರ ಸಾಲಿನಲ್ಲಿ ಶೇ. 53.95 ಸಾಧನೆಜಿಲ್ಲೆಯಲ್ಲಿ 83 ತೀವ್ರ ನಿಗಾ ಕಲಿಕಾ ಕೇಂದ್ರ ಸ್ಥಾಪನೆ

Team Udayavani, Jan 17, 2020, 3:09 PM IST

17-January-9

ಯಾದಗಿರಿ: ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ 2020ರಲ್ಲಿಯಾದರೂ ಸುಧಾರಣೆಯಾಗುತ್ತದೆಯೇ ಎನ್ನುವ ನಿರೀಕ್ಷೆ ಹುಟ್ಟಿಸಿದೆ.

ಪ್ರತಿಬಾರಿಯೂ ಜಿಲ್ಲೆಯ ಹತ್ತನೇ ತರಗತಿ ಫಲಿತಾಂಶ ಸುಧಾರಣೆಯೇ ಶಿಕ್ಷಣ ಇಲಾಖೆಗೆ ತಲೆ ನೋವಾಗಿದ್ದು, ಫಲಿತಾಂಶ ಚೇತರಿಕೆ ದೊಡ್ಡ ಸವಾಲಾಗಿ ಕಾಡುತ್ತಿದೆ. ಫಲಿತಾಂಶದಲ್ಲಿ ಹೆಚ್ಚಿನ ಸಾಧನೆ ಮಾಡುವುದಕ್ಕೆ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷವೂ ಹಲವು ಆಯಾಮಗಳಲ್ಲಿ ಸಜ್ಜಾಗಿದೆ. ಪ್ರಮುಖವಾಗಿ ಜಿಲ್ಲೆಯ 227 ಪ್ರೌಢಶಾಲೆಗಳ ಮಕ್ಕಳನ್ನು ಮೂರು ವಿಧಗಳಲ್ಲಿ ವಿಂಗಡಿಸಿ ತೀರಾ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ 83 ತೀವ್ರ ನಿಗಾ ಕಲಿಕಾ ಕೇಂದ್ರ ಸ್ಥಾಪಿಸಲಾಗಿದ್ದು, ಇದರಲ್ಲಿ ಕಲಿಕೆಯಲ್ಲಿ ಹಿಂದುಳಿದ 2600ರಷ್ಟು ಮಕ್ಕಳನ್ನು ಗುರುತಿಸಲಾಗಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಸೇರಿದಂತೆ ಇತರೆ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗುತ್ತಿದೆ. ಪ್ರೌಢಶಾಲೆಗಳಲ್ಲಿ ಬೆಳಗ್ಗೆ ಒಂದು ಗಂಟೆ ಹೆಚ್ಚುವರಿ ಬೋಧನೆ ಹಾಗೂ ಸಂಜೆ ಒಂದು ಗಂಟೆ ಗುಂಪು ಚರ್ಚೆ, ಗಣಿತ, ವಿಜ್ಞಾನ, ಇಂಗ್ಲಿಷ್‌ ಹಾಗೂ ಸಮಾಜಶಾಸ್ತ್ರ ವಿಷಯಗಳ ಕುರಿತು ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ವಿಶೇಷ ಉಪನ್ಯಾಸ ಕೊಡಿಸಲಾಗುತ್ತಿದೆ. ತಿಂಗಳಿಗೊಮ್ಮೆ ಕಿರು ಪರೀಕ್ಷೆ, ವಿಷಯ ಮನದಟ್ಟಾಗುವಂತೆ ಮರಳಿ ಮರಳಿ ಕಲಿಸುವುದು ಅಲ್ಲದೇ ಬೀದರನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ 43 ಸ್ಥಳಗಳಲ್ಲಿ ಪರೀಕ್ಷಾಪೂರ್ವ ಸಿದ್ಧತೆ ಮತ್ತು ಭಯ ಹೋಗಲಾಡಿಸಲು ಪ್ರೇರಣಾ ಕಮ್ಮಟ ಶಿಬಿರ, ನಿವೃತ್ತ ನ್ಯಾ| ಶಿವರಾಜ ಪಾಟೀಲ ಸಹಯೋಗದಲ್ಲಿ ಹೋಬಳಿ ಮಟ್ಟದಲ್ಲಿ ನುರಿತ ತಜ್ಞರಿಂದ ಮಕ್ಕಳ ಮನೋಬಲ ಹೆಚ್ಚಿಸಲು ಉಪನ್ಯಾಸ, ಕೊನೆ ಹಂತದ ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆದು ಪುನರಾವರ್ತನೆ ಮಾಡಿಸುವುದು, ತಿಂಗಳಿಗೊಮ್ಮೆ ಮಕ್ಕಳ ಫಲಿತಾಂಶದ ಕುರಿತು ಶಿಕ್ಷಕರ ಕಾರ್ಯಾಗಾರ, ಹಾಜರಾತಿ ಕಡಿಮೆಯಾಗದಂತೆ ಮಕ್ಕಳ ಮನೆಗೆ ಭೇಟಿ ನೀಡಿ ಪಾಲಕರಲ್ಲಿ ಜಾಗೃತಿ ಹೀಗೆ ಹಲವು ಪ್ರಯೋಗಗಳ ಮೂಲಕ ಶಿಕ್ಷಣ ಮಟ್ಟ ಸುಧಾರಣೆಗೆ ಹಲವಾರು ಕ್ರಮ ವಹಿಸಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾ ಎಸ್‌ಎಸ್‌ಎಲ್‌ಸಿ ನೋಡಲ್‌ ಅಧಿಕಾರಿ ಡಾ| ಮಲ್ಲಪ್ಪ ಯರಗೋಳ.

ಪರೀಕ್ಷೆಯಲ್ಲಿ ಚಿತ್ರ ಬಿಡಿಸುವುದು ಸರಳವಾಗಲಿ ಎನ್ನುವ ಉದ್ದೇಶದಿಂದ ಮಕ್ಕಳಿಗೆ ರಸಪ್ರಶ್ನೆ ಹಾಗೂ ಸಮಾಜ ವಿಷಯದ ಚಿತ್ರಕಲೆ ಬಿಡಿಸುವ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಯಾದಗಿರಿ ಜಿಪಂ ಮುಖ್ಯಕಾರ್ಯನಿರ್ವಹಣಾ ಧಿಕಾರಿಗಳು ಸಹ ಫಲಿತಾಂಶ ವೃದ್ಧಿಗೆ ಕಾಳಜಿವಹಿಸಿ ಪಾಠ ಬೋಧನೆ ಸೇರಿದಂತೆ ಫಲಿತಾಂಶ ವೃದ್ಧಿಗೆ ಕೈಗೊಂಡ ಕ್ರಮಗಳು ಶಾಲೆಗಳಲ್ಲಿ ಅನುಷ್ಠಾನವಾಗುತ್ತಿವೆಯೇ ಎನ್ನುವುದರ ಮೇಲೆ ನಿಗಾವಹಿಸಲು 9 ಜನ ವಿಶೇಷ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ ಎನ್ನಲಾಗಿದೆ.

ಕಲಿಕೆಯಿಂದ ತೀರಾ ಹಿಂದುಳಿದ ಮಗುವೂ ಧೈರ್ಯದಿಂದ ಪರೀಕ್ಷೆ ಎದುರಿಸಿ ಕನಿಷ್ಠ 40ರಿಂದ 50 ಅಂಕ ಪಡೆಯುವ ಸಾಮರ್ಥ್ಯ ಬೆಳೆಸಲಾಗುತ್ತಿದೆ. ಜಿಲ್ಲೆಯ ಈ ಹಿಂದಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಗಮನಿಸುವುದಾದರೆ, 2018-19ರಲ್ಲಿ ಜಿಲ್ಲೆಯ 54 ಪರೀಕ್ಷಾ ಕೇಂದ್ರಗಳಲ್ಲಿ 12153 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ 6670 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 6617 ಬಾಲಕರು, 5536 ಬಾಲಕಿಯರಲ್ಲಿ ಕ್ರಮವಾಗಿ 3467 ಮತ್ತು 3203 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 53.95ರಷ್ಟು ಫಲಿತಾಂಶ ಲಭಿಸಿದೆ. 34ನೇ ಸ್ಥಾನಕ್ಕೆ ತೃಪ್ತಿಪಟ್ಟು ಒಟ್ಟಾರೆ ಶೇ.16.90 ರಷ್ಟು ಚೇತರಿಕೆಯಾಗಿತ್ತು.

2013ರಿಂದ 2015ರ ವರೆಗಿನ 3 ವರ್ಷಗಳಲ್ಲಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಹತ್ತು ಸ್ಥಾನ ಕುಸಿಯುತ್ತಲೇ ಆತಂಕ ಸೃಷ್ಟಿಸಿತ್ತು. ಆದರೆ 2016ರಲ್ಲಿ ಚೇತರಿಸಿಕೊಂಡಿತ್ತು. 2013-14ರಲ್ಲಿ 9972 ವಿದ್ಯಾರ್ಥಿಗಳಲ್ಲಿ 8631 ಮಕ್ಕಳು ಉತ್ತೀರ್ಣರಾಗಿ ಶೇ. 86.55ರಷ್ಟಿ ಫಲಿತಾಂಶ ತರುವ ಮೂಲಕ ಜಿಲ್ಲೆ 11ನೇ ಸ್ಥಾನದಲ್ಲಿತ್ತು. 2014-15ರಲ್ಲಿ 10600 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. 9016 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.85.06 ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಜಿಲ್ಲೆಯು 22ನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿತ್ತು. ಇದಾದ ಬಳಿಕ 2015-16ರಲ್ಲಿ ಪರೀಕ್ಷೆ ಬರೆದ 11778 ಮಕ್ಕಳಲ್ಲಿ 8187 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.69.51 ಫಲಿತಾಂಶ ಪಡೆದು 32ನೇ ಸ್ಥಾನಕ್ಕೆ ಕುಸಿದಿತ್ತು. ಇದರಿಂದ ಅ ಧಿಕಾರಿಗಳಿಗೆ ತೀವ್ರ ಅಸಮಾಧಾನವಾಗಿತ್ತು. ಬಳಿಕ 2016-17ರಲ್ಲಿ ಶಿಕ್ಷಣ ಇಲಾಖೆ ಅ ಧಿಕಾರಿಗಳು ಸವಾಲಾಗಿ ಸ್ವೀಕರಿಸಿದ್ದರು.

ಆವರ್ಷದಲ್ಲಿ ಶೇ.74.84ರಷ್ಟು ಫಲಿತಾಂಶ ಬಂದಿದ್ದರಿಂದ ಜಿಲ್ಲೆ 16ನೇ ಸ್ಥಾನಕ್ಕೆ ಂದಿತ್ತು. ಆದರೆ, 2017-18ರ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಗೆ 12776 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ ಕೇವಲ 4734 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರಿಂದ ಜಿಲ್ಲೆಯ ಫಲಿತಾಂಶ ಶೇ. 37.05ರಷ್ಟಾಗಿ 34ನೇ ಸ್ಥಾನಕ್ಕೆ ಕುಸಿದಿತ್ತು. ಪ್ರಸ್ತುತ 2019-20ರಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಆದ್ಯತೆ ನೀಡಿದೆ. ಅದಕ್ಕೆ ತಕ್ಕಂತೆ ಶಿಕ್ಷಕರು ಶ್ರಮಪಡುತ್ತಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಸುವ ದೃಷ್ಟಿಯಿಂದ ಸಾಕಷ್ಟು
ಕಾರ್ಯ ಯೋಜನೆ ಹಾಕಿಕೊಳ್ಳಲಾಗಿದೆ. 10ನೇ ತರಗತಿ ಮಕ್ಕಳನ್ನು 3 ಹಂತಗಳಲ್ಲಿ ವಿಂಗಡಿಸಲಾಗಿದೆ. ಕೊನೆ ಹಂತದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನಿತ್ಯ ವಿಶೇಷ ತರಗತಿ, ಸಂಜೆ ಗುಂಪು ಚರ್ಚೆ ಸೇರಿದಂತೆ ಹಲವು ಕ್ರಮ ಕೈಗೊಂಡು ಶ್ರಮಿಸಲಾಗುತ್ತಿದೆ. ಈ ಬಾರಿ ಕನಿಷ್ಠ 20ರಿಂದ 25ರಷ್ಟು ಫಲಿತಾಂಶ ಚೇತರಿಕೆಯಾಗುವ ಗುರಿಯಿಟ್ಟುಕೊಂಡು ಶ್ರಮಿಸಲಾಗುತ್ತಿದೆ. ಸಕ್ರೆಪ್ಪಗೌಡ,
ಸಾರ್ವಜನಿಕ ಶಿಕ್ಷಣ
ಇಲಾಖೆ ಉಪನಿರ್ದೇಶಕರು

„ಅನೀಲ ಬಸೂದೆ

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.