ಕಾರ್ಮಿಕರ ಪಿಂಚಣಿ ನೋಂದಣಿ ನಡೆಸಿ
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಸೂಚನೆ
Team Udayavani, Jan 17, 2020, 3:36 PM IST
ಚಿಕ್ಕಮಗಳೂರು: ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್‌ಧನ್ ಯೋಜನೆಯಡಿ ಪಿಂಚಣಿಗಾಗಿ ಸಮರ್ಪಕವಾಗಿ ಕಾರ್ಮಿಕರ ನೋಂದಣಿ ಕಾರ್ಯ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪಿಎಂ-ಎಸ್‌ವೈಎಂ ಪಿಂಚಣಿಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇ.ಎಸ್.ಐ, ಪಿ.ಎಫ್, ಎನ್.ಪಿ.ಎಸ್ ಯೋಜನೆಗೆ ಪ್ರಯೋಜನ ಪಡೆಯದ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದು, 18-40 ವರ್ಷದೊಳಗಿನ ಕಾರ್ಮಿಕರೆಲ್ಲಾ ಪಿಂಚಣಿಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.
ಅಂಗಡಿ ಮಾಲಿಕರು, ಚಿಲ್ಲರೆ ವ್ಯಾಪಾರಿಗಳು, ಅಕ್ಕಿ ಗಿರಣಿ ಮಾಲಿಕರು, ಎಣ್ಣೆ ಗಿರಣಿ ಮಾಲಿಕರು, ವರ್ಕ್‌ಶಾಪ್ ಮಾಲಿಕರು, ಕಮಿಷನ್ ಏಜೆಂಟ್ಸ್, ರಿಯಲ್ ಎಸ್ಟೇಟ್ ಬ್ರೋಕರ್‌ಗಳು, ಸಣ್ಣ ಹೊಟೇಲ್ ಹಾಗೂ ರೆಸ್ಟೋರೆಂಟ್ ಮಾಲಿಕರು, ಸಣ್ಣ ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ ಎಂದು ತಿಳಿಸಿದರು.
ಮಾಸಿಕ ಆದಾಯ 15 ಸಾವಿರ ರೂ. ಅಥವಾ ಅದಕ್ಕಿಂತ ಕಡಿಮೆ
ಆದಾಯ ಹೊಂದಿರುವ, ಆದಾಯ ತೆರಿಗೆ ಪಾವತಿಸದವರು ಹಾಗೂ ಇತರೆ ಯಾವುದೇ ಪಿಂಚಣಿ ಯೋಜನೆಯ ಉಪಯೋಗ ಪಡೆಯುತ್ತಿರುವವರು ನೋಂದಣಿಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಅರ್ಹ ಫಲಾನುಭವಿಗಳು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೊತೆಗೆ ತಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್‌ಗೆ ತೆರಳಿ ನಿಗ ದಿಪಡಿಸಿದ ಮೊತ್ತವನ್ನು ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದರು.
ಎಲ್ಲಾ ಇಲಾಖೆಗಳು ಮತ್ತು ಸಂಘಟನೆಗಳು ಸಮನ್ವಯದಿಂದ ಕೆಲಸ ಮಾಡಿ ಅಸಂಟಿತ ವಲಯದ ಕಾರ್ಮಿಕರಲ್ಲಿ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಪಿ.ಎಂ-ಎಸ್.ವೈ.ಎಂ.ಪಿಂಚಣಿ ಯೋಜನೆಯ ಪ್ರಯೋಜನ ಪಡೆಯಲು
ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪಿ.ಎಂ-ಎಸ್.ವೈ.ಎಂ. ಪಿಂಚಣಿ ಯೋಜನೆಯಡಿ ಜಿಲ್ಲೆಯಲ್ಲಿ ಕೇವಲ 1800 ಕಾರ್ಮಿಕರು ನೋಂದಣಿಯಾಗಿದ್ದು, ಉಳಿದ ಕಾರ್ಮಿರನ್ನು ಶೀಘ್ರವಾಗಿ ಯೋಜನೆಗೆ ಸೇರಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಹಿರಿಯ ಕಾರ್ಮಿಕ ಇನ್ಸ್ಪೆಕ್ಟರ್ ರವಿ, ಕಾರ್ಮಿಕ ಅಧಿ ಕಾರಿ ಕೃಷ್ಣಮ್ಮ, ಕಾರ್ಮಿಕ ಆಯುಕ್ತ ಜಾನ್ಸನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.