ಏಳು ತಿಂಗಳಿಂದ ಬಂದಿಲ್ಲ ವೃದ್ಧಾಪ್ಯ ವೇತನ
Team Udayavani, Jan 17, 2020, 3:42 PM IST
ಗಂಗಾವತಿ: ಸಾಮಾಜಿಕ ಭದ್ರತಾ ಯೋಜನೆಯಲ್ಲಿ ವಯೋವೃದ್ಧರು ಹಾಗೂ ಹಿರಿಯರಿಗೆ ನೀಡಲಾಗುತ್ತಿದ್ದ ಪಿಂಚಣಿ ಮಾಶಾಸನ ಕಳೆದ 7 ತಿಂಗಳಿಂದ ನಿಲುಗಡೆಯಾಗಿದ್ದು, ತಹಸೀಲ್ದಾರ್ ಕಚೇರಿ ಹಾಗೂ ತಾಲೂಕು ಖಜಾನಾಧಿಕಾರಿಗಳ ಕಚೇರಿಗೆ ಪ್ರತಿದಿನ ಸುತ್ತಿದರೂ ಪ್ರಯೋಜನವಾಗುತ್ತಿಲ್ಲ.
ಸಾಮಾಜಿಕ ಭದ್ರತಾ ಯೋಜನೆಯ ಮಾಶಾಸನ ಹಾಗೂ ವೃದ್ಧಾಪ್ಯ ವೇತನ ಯೋಜನೆಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಅಗತ್ಯ ದಾಖಲಾತಿ ಪಡೆದು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗಳಿಗೆ ಜಮಾ ಮಾಡಲು ಸಾಮಾಜಿಕ ಭದ್ರತಾ ನಿರ್ದೇಶನಾಲಯ ತೀರ್ಮಾನಿಸಿ ಮಾಶಾಸನವನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ.
ಗಂಗಾವತಿ ಸೇರಿದಂತೆ ಜಿಲ್ಲೆಯ 32 ಸಾವಿರಕ್ಕೂ ಅಧಿಕ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲರ ಮಾಸಾಶನ ಕಳೆದ 7 ತಿಂಗಳಿಂದ ಮಂಜೂರಿಯಾಗಿಲ್ಲ. ಇದರಿಂದ ವೃದ್ಧರು ಅಗತ್ಯಕ್ಕೆ ಹಣವಿಲ್ಲದೆ ಪರಿತಪಿಸುವಂತಾಗಿದೆ. ಪ್ರತಿದಿನ ಮನೆ ಹತ್ತಿರ ಬರುವ ಪೋಸ್ಟ್‌ಮ್ಯಾನ್ ಅವರನ್ನು ವೇತನಕ್ಕಾಗಿ ಕೇಳುವ ಸ್ಥಿತಿ ಬಂದಿದೆ.
ಇನ್ನು ತಹಸೀಲ್ದಾರ್ ಕಚೇರಿಯಲ್ಲಿ ವಿಚಾರಿಸಿದರೆ ಕೆ2 ತೊಂದರೆ ಸರಿಪಡಿಸಿದ ನಂತರ ವೇತನ ಬರುತ್ತದೆ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಇನ್ನೂ ಕೆಲವರು ವೇತನ ಮಂಜೂರಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್, ಪಾನ್‌ಕಾರ್ಡ್, ಮತದಾರರ ಯಾದಿ, ಅಂಚೆಕಚೇರಿ ಪಾಸ್ ಬುಕ್ ನೀಡುವಂತೆ ಕೇಳುತ್ತಿದ್ದಾರೆ. ಕೆಲವು ಮಧ್ಯವರ್ತಿಗಳು ನಗರ ಮತ್ತು ತಾಲೂಕಿನ ಬಸಾಪಟ್ಟಣ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಅನರ್ಹರಿಗೂ ವೃದ್ಧಾಪ್ಯ ಸಂಧ್ಯಾ ಸುರಕ್ಷಕ, ಅಂಗವಿಕಲ, ವಿಧವಾ ವೇತನ ಮಂಜೂರು ಮಾಡಿಸಿರುವುದು ಕೆಲ ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಕಂಡು ಬಂದಿದೆ. ಇದರಿಂದ ಸರಕಾರ ಮೇಲಿನ ಹೊರೆ ತಪ್ಪಿಸಲು ಸಾಮಾಜಿಕ ಭದ್ರತಾ ಯೋಜನೆಯ ನಿರ್ದೇಶನಾಲಯ ಪುನಃ ರಾಜ್ಯದ ಎಲ್ಲಾ ತಾಲೂಕಿನಿಂದ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಫಲಾನುಭವಿಗಳ ದಾಖಲಾತಿ ಪರಿಶೀಲನೆ ನಡೆಸಿ ಪ್ರತಿಯೊಬ್ಬ ಸಾಮಾಜಿಕ ಭದ್ರತಾ ಯೋಜನೆಯ ವೇತನವನ್ನು ಬ್ಯಾಂಕ್ ಮತ್ತು ಅಂಚೆ ಕಚೇರಿ ಖಾತೆಗಳಿಗೆ ಜಮಾ ಮಾಡಲು ಯೋಜಿಸಿದೆ.
ಸಾಮಾಜಿಕ ಭದ್ರತಾ ಯೋಜನೆಯ ಮಾಶಾಸನವನ್ನು ನೇರವಾಗಿ ಬ್ಯಾಂಕ್ ಮತ್ತು ಅಂಚೆ ಕಚೇರಿ ಖಾತೆಗಳಿಗೆ ಜಮಾ ಮಾಡಲು ದಾಖಲಾತಿ ಜೋಡಣೆ ಕಾರ್ಯ(ಕೆ2) ಮಾಡಲಾಗುತ್ತಿದೆ. ಇನ್ನು ಸ್ವಲ್ಪ ಫಲಾನುಭವಿಗಳ ಖಾತೆ ಜೋಡಣೆ ಬಾಕಿ ಇದೆ. ಶೀಘ್ರ ಸಮಸ್ಯೆ ಬಗೆಹರಿಯಲಿದೆ. ಗಂಗಾವತಿ ತಾಲೂಕಿನಲ್ಲಿ ಶೀಘ್ರವೇ ಪಿಂಚಣಿ ಪಡೆಯುವವರ ಅದಾಲತ್ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ.– ಎಲ್.ಡಿ.ಚಂದ್ರಕಾಂತ, ತಹಸೀಲ್ದಾರ್.
-ಕೆ.ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.