ಜೆಫ್ ಬಗ್ಗೆ ಬಿಜೆಪಿ ಮುನಿಸು ; ಸರಕಾರದ ವಿರುದ್ಧ ಸುದ್ದಿ ಪ್ರಕಟಕ್ಕೆ ಆಕ್ರೋಶ
Team Udayavani, Jan 18, 2020, 8:24 AM IST
ಹೊಸದಿಲ್ಲಿ: ಒಂದು ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡುವ ಮೂಲಕ ಅಮೆಜಾನ್ ಭಾರತಕ್ಕೆ ಯಾವುದೇ ಅನುಕೂಲವನ್ನು ಕಲ್ಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ವಿದೇಶಾಂಗ ವ್ಯವಹಾರಗಳ ವಿಭಾಗದ ಮುಖ್ಯಸ್ಥ ವಿಜಯ್ ಚೌತೆವಾಲಾ ಅವರೂ ಅಮೆಜಾನ್ ಸಿಇಒ ಜೆಫ್ ಬೆಝೋಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಜೆಫ್ ಮಾಲಕತ್ವದ ‘ವಾಷಿಂಗ್ಟನ್ ಪೋಸ್ಟ್’ ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ ಎನ್ನುವುದೇ ಇವರ ಆಕ್ರೋಶಕ್ಕೆ ಕಾರಣ. ‘ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯ ಸಂಪಾದಕೀಯ ನೀತಿಯು ತಾರತಮ್ಯದಿಂದ ಕೂಡಿದೆ’ ಎಂದು ವಿಜಯ್ ಆರೋಪಿಸಿದ್ದಾರೆ. ಇತ್ತೀಚೆಗೆ ಈ ಪತ್ರಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಲೇಖನವೂ ಪ್ರಕಟವಾಗಿತ್ತು.
ಭೇಟಿಗೆ ನಿರಾಕರಣೆ
ಒಂದು ತಿಂಗಳ ಹಿಂದಷ್ಟೇ, ಜೆಫ್ ಅವರ ಭಾರತ ಪ್ರವಾಸ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿತ್ತು. ಆದರೆ, ಪ್ರಧಾನಿ ಕಾರ್ಯಾಲಯವು ದಿನಾಂಕ ನಿಗದಿಗೆ ನಿರಾಕರಿಸಿತ್ತು ಎಂದು ಮೂಲಗಳು ಹೇಳಿವೆ.
10 ಲಕ್ಷ ಉದ್ಯೋಗ: ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಜೆಫ್ ಅವರು 2025ರೊಳಗೆ ಭಾರತದಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದಾರೆ.
ಮೂರು ದಿನಗಳ ಪ್ರವಾಸ ಮುಗಿಸಿ ಅಮೆರಿಕಕ್ಕೆ ಶುಕ್ರವಾರ ವಾಪಸಾದ ಜೆಫ್, ಅಮೆಜಾನ್.ಇನ್‌ನಲ್ಲಿ ಪ್ರಕಟಿಸಿದ ಪತ್ರದಲ್ಲಿ ಈ ವಿಚಾರ ತಿಳಿಸಿದ್ದಾರೆ. ಜತೆಗೆ, ನಾನು ಪ್ರತಿ ಬಾರಿ ಭಾರತಕ್ಕೆ ಹೋಗಿ ಬಂದಾಗಲೂ ನನಗೆ ಭಾರತ ದೊಂದಿಗಿನ ಪ್ರೀತಿ ಹೆಚ್ಚುತ್ತಲೇ ಇರುತ್ತದೆ. ಭಾರತೀಯರ ಸಾಮರ್ಥ್ಯ, ನಾವೀನ್ಯತೆ ನನಗೆ ಸ್ಫೂರ್ತಿ ಎಂದೂ ಅವರು ಪತ್ರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.