ನಕ್ಷೆ ಉಲ್ಲಂಘನೆಗೆ ದುಪ್ಪಟ್ಟು ದಂಡ!
Team Udayavani, Jan 18, 2020, 11:23 AM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕ್ಷೆ ಹಾಗೂ ಬೈಲಾ ನಿಯಮಾವಳಿ ಉಲ್ಲಂಘಿಸಿ ನಿರ್ಮಾಣವಾಗಿರುವ ಕಟ್ಟಡಗಳ ಮಾಲೀಕರಿಂದ ಆಸ್ತಿ ತೆರಿಗೆಯ ಎರಡು ಪಟ್ಟು ದಂಡ ವಸೂಲಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ನಕ್ಷೆ ಹಾಗೂ ನಿಯಮಾವಳಿ ಉಲ್ಲಂ ಸಿ ನಿರ್ಮಿಸಿರುವ ಹೆಚ್ಚುವರಿ ಕಟ್ಟಡಗಳನ್ನು ತೆರವುಗೊಳಿಸುವವರೆಗೂ ಪ್ರತಿ ವರ್ಷ ಆಸ್ತಿ ತೆರಿಗೆ ಜತೆ ಎರಡು ಪಟ್ಟು ದಂಡ ಕಟ್ಟಿಸಿಕೊಳ್ಳಲಾಗುವುದು. ಈ ನಿಯಮ ತಕ್ಷಣದಿಂದಲೇ ಅನ್ವಯವಾಗಲಿದೆ.
ಉದಾಹರಣೆಗೆ 1200 ಚದರಡಿ ಜಾಗದಲ್ಲಿ ಎರಡು ಅಂತಸ್ತು ವಸತಿ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆದು ಮೂರು ಅಥವಾ ನಾಲ್ಕು, ಅದಕ್ಕಿಂತ ಹೆಚ್ಚು ಅಂತಸ್ತು ನಿರ್ಮಾಣ ಮಾಡಿರುವುದು, ನಿಯಮಾವಳಿ ಪ್ರಕಾರ ಸೆಟ್‌ಬ್ಯಾಕ್ ಬಿಡದೆ ಹೆಚ್ಚುವರಿ ಕಟ್ಟಡ ನಿರ್ಮಾಣವಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ಜತೆಗೆ ಎರಡು ಪಟ್ಟು ದಂಡ ಪಾವತಿಸಬೇಕಾಗುತ್ತದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದ ಇತರೆ ಮಹಾನಗರ ಪಾಲಿಕೆಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದ್ದು, ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಬಿಬಿಎಂಪಿ ವ್ಯಾಪ್ತಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ದಂಡ ಕಟ್ಟುವುದು ಎಂದ ಮಾತ್ರಕ್ಕೆ ನಕ್ಷೆ ಮಂಜೂರಾತಿ ನಿಯಮಾವಳಿ ಉಲ್ಲಂ ಸಿ ಕಟ್ಟಡ ಕಟ್ಟಿಕೊಳ್ಳಬಹುದು ಎಂದಲ್ಲ. ದಂಡ ಕಟ್ಟುವುದು ಈಗಾಗಲೇ ನಿರ್ಮಿಸಿರುವ ಕಟ್ಟಡಗಳಿಗೆ ಮಾತ್ರ ಅನ್ವಯ. ನಕ್ಷೆ ಉಲ್ಲಂಘನೆ ಪ್ರಕರಣಗಳಿಗೆ ಮುಂದೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ರಾ.ಪಂಗಳು ಮೇಲ್ದರ್ಜೆಗೆ: ಬೆಂಗಳೂರು ನಗರ ಜಿಲ್ಲೆಯ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಮಾದಾವರ, ಸಿದ್ದನಹೊಸಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ಪುರಸಭೆಗೆಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಸಭೆಒಪ್ಪಿಗೆ ನೀಡಿದೆ ಎಂದು ಸಚಿವ ಜೆ.ಮಾಧು ಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.