ಜಿಲ್ಲೆಯ ಗ್ರಾಮೀಣದಲ್ಲಿ 499 ರೌಡಿಗಳು


Team Udayavani, Jan 18, 2020, 11:54 AM IST

huballi-tdy-1

ಧಾರವಾಡ: ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯ 499 ಜನರ ವಿರುದ್ಧ ರೌಡಿಶೀಟ್‌ ತೆರೆಯಲಾಗಿದೆ ಎಂದು ಎಸ್ಪಿ ವರ್ತಿಕಾ ಕಟಿಯಾರ್‌ ಹೇಳಿದರು.

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪರೇಡ್‌ ಮೈದಾನದಲ್ಲಿ ಜಿಲ್ಲಾಮಟ್ಟದ ರೌಡಿಶೀಟರ್‌ ಗಳ ಪರೇಡ್‌ ಪೂರ್ವದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಇಷ್ಟು ಜನರ ವಿರುದ್ಧ ರೌಡಿಶೀಟರ್‌ ತೆರೆಯಲಾಗಿದ್ದು, ಈ ಪಟ್ಟಿಯನ್ನು ಅವರು ತೋರಿದ ಸನ್ನಡತೆ ಹಾಗೂ ಯಾವುದೇ ಪ್ರಕರಣಗಳಲ್ಲಿ ಮತ್ತೆ ಭಾಗಿಯಾಗದ ಕುರಿತು ವರದಿ ಪಡೆದು ಪರಿಶೀಲಿಸುತ್ತೇವೆ. ಇದರಲ್ಲಿ ಸನ್ನಡತೆ ತೋರಿದವರನ್ನು ಮಾತ್ರ ರೌಡಿಶೀಟರ್‌ ಪಟ್ಟಿಯಿಂದ ಕೈ ಬಿಡಲಾಗುವುದು ಎಂದರು.

ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗವಹಿಸದಂತೆ ರೌಡಿಗಳಿಗೆ ಎಚ್ಚರಿಕೆ ನೀಡುವುದು ಮತ್ತು ರೌಡಿಶೀಟರ್‌ ತೆರೆದ ಮೇಲೆ ಅಪರಾಧ ಕೃತ್ಯಗಳಿಂದ ದೂರವಿರುವ ಕುರಿತು ಪರಿಶೀಲಿಸುವುದು ಪರೇಡ್‌ನ‌ ಮುಖ್ಯ ಆಶಯವಾಗಿದೆ. ಒಬ್ಬ ರೌಡಿ ವಿರುದ್ಧ ರೌಡಿಶೀಟ್‌ ತೆರೆದು, ಹತ್ತು ವರ್ಷಗಳಾಗಿದ್ದಲ್ಲಿ, ಅವನು ಕಳೆದ ಹತ್ತು ವರ್ಷಗಳಿಂದ ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸಿರದಿದ್ದರೆ ಮತ್ತು ಸನ್ನಡತೆ ಹೊಂದಿದ್ದರೆ ಠಾಣಾಧಿಕಾರಿಯಿಂದ ವರದಿ ಪಡೆದು ರೌಡಿಶೀಟರ್‌ ಪಟ್ಟಿಯಿಂದ ಅವನ ಹೆಸರು ತೆಗೆಯಲಾಗುತ್ತದೆ. ಆದರೆ ರೌಡಿಶೀಟರ್‌ ಪಟ್ಟಿಯಿಂದ ಅವನ ಹೆಸರು ತೆಗೆದ ಮೇಲೆ ಮತ್ತೆ ಅಪರಾಧ ಕೃತ್ಯಕ್ಕೆ ಮುಂದಾದರೆ ಅಥವಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ ತಕ್ಷಣ ರೌಡಿ ಪಟ್ಟಿಗೆ ಅವನ ಹೆಸರು ಮರು ಸೇರಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ನ್ಯಾಯಾಲಯದಲ್ಲಿನ ಪ್ರಕರಣಗಳು

ಇತ್ಯರ್ಥವಾಗಿರುವ ಮತ್ತು 60 ವರ್ಷ ಮೇಲ್ಪಟ್ಟವರ, ಕಳೆದ ಹತ್ತು ವರ್ಷಗಳಲ್ಲಿ ಅಪರಾಧಗಳಿಂದ ದೂರವಿದ್ದು ಸನ್ನಡತೆ ತೋರಿರುವ ರೌಡಿಗಳ ಮೇಲಿರುವ ರೌಡಿಶೀಟರ್‌ ಪಟ್ಟಿ ತೆಗೆಯಲು ಶೀಘ್ರದಲ್ಲಿ ವರದಿ ಪಡೆದು, ಅಧಿಕಾರಿಗಳ ಸಭೆ ಜರುಗಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.

ಉಪಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ನಾಯ್ಕ ಮಾತನಾಡಿ, ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಾದ ಅಳ್ನಾವರದಲ್ಲಿ 45, ಅಣ್ಣಿಗೇರಿಯಲ್ಲಿ 55, ಧಾರವಾಡ ಗ್ರಾಮೀಣ ಠಾಣೆಯಲ್ಲಿ 43, ಗರಗದಲ್ಲಿ 53, ಗುಡಗೇರಿಯಲ್ಲಿ 34, ಕಲಘಟಗಿಯಲ್ಲಿ 95, ಕುಂದಗೋಳದಲ್ಲಿ 40, ನವಲಗುಂದದಲ್ಲಿ 69, ಹುಬ್ಬಳ್ಳಿ ಗ್ರಾಮೀಣದಲ್ಲಿ 64 ಮತ್ತು ಮಹಿಳಾ ಪೊಲೀಸ್‌ ಠಾಣೆಯಲ್ಲಿ 1 ಹೀಗೆಒಟ್ಟು ಹತ್ತು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ 499 ಜನರ ವಿರುದ್ಧ ರೌಡಿಶೀಟ್‌ ತೆರೆಯಲಾಗಿದೆ ಎಂದು ತಿಳಿಸಿದರು.

ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳಾದ ಶಿವಾನಂದ ಕಮತಗಿ, ವಿಜಯ ಬಿರಾದರ, ಬಸವರಾಜ ಕಲ್ಲಮ್ಮನವರ, ರಂಗನಾಥ ನೀಲಮ್ಮನವರ, ಬಸವರಾಜ ಕಾಮನಬೈಲ್‌ ಹಾಗೂ ಠಾಣಾಧಿಕಾರಿಗಳಾದ ಪಿಎಸ್‌ಐ ಮಹೇಂದ್ರಕುಮಾರ ನಾಯಕ, ನವೀನ ಜಕ್ಕಲಿ, ಪ್ರಸಾದ ಫಣೆಕರ, ಎಸ್‌. ದೇವಾನಂದ, ಎಸ್‌.ಬಿ. ಚಲವಾದಿ, ಲಾಲಸಾಬ ಜುಲಕಟ್ಟಿ ಹಾಗೂ ಎಸ್‌.ಆರ್‌. ಕಣವಿ ಪರೇಡ್‌ ಮೈದಾನದಲ್ಲಿದ್ದು, ರೌಟಿಶೀಟರ್‌ಗಳ ಅಪರಾಧ ಕೃತ್ಯ ಹಾಗೂ ಅವರ ಹಿನ್ನೆಲೆಯನ್ನು ಎಸ್ಪಿಗೆ ವಿವರಿಸಿದರು. ಈ ವೇಳೆ ಅಪರಾಧ ಕೃತ್ಯಗಳಿಂದ ದೂರ ಇರುವ ಕೆಲವರು ತಮ್ಮ ಸನ್ನಡತೆ ಗಮನಿಸಿ, ರೌಡಿಶೀಟರ್‌ ಪಟ್ಟಿಯಿಂದ ಕೈ ಬಿಡುವಂತೆ ಎಸ್‌ಪಿಗೆ ಮನವಿ ಮಾಡಿದರು. ಜಿಲ್ಲಾ ವಿಶೇಷ ವಿಭಾಗದ ಇನ್ಸ್‌ಪೆಕ್ಟರ್‌ ಪುಲಕೇಶ ನೀಲಗಾರ ಇದ್ದರು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.