ಸದಸ್ಯರ ಆವೇಶಕ್ಕೆ ಜಿಪಂ ಸಭೆ ಬಲಿ
ಅಧಿಕಾರಿ ಅಗೌರವ-ಸರ್ಕಾರಕ್ಕೆ ವರದಿ ನೀಡಲು ಒತ್ತಾಯ ಯಾವ ವಿಷಯ ಚರ್ಚಿಸದೇ ಸಮಯ ವ್ಯರ್ಥ
Team Udayavani, Jan 18, 2020, 4:45 PM IST
ಯಾದಗಿರಿ: ಜಿಲ್ಲೆಯ ಅಭಿವೃದ್ಧಿಗೆ ಬೇಕಿರುವ ಅಗತ್ಯ ಕಾಮಗಾರಿಗಳ ಕುರಿತು ಚರ್ಚೆ ನಡೆಯಬೇಕಿದ್ದ ಜಿಪಂ ಸಾಮಾನ್ಯ ಸಭೆ ಅಧಿಕಾರಿಗಳ ಮೇಲಿದ್ದ ಜನಪ್ರತಿನಿಧಿಗಳ ಆವೇಶಕ್ಕೆ ಬಲಿಯಾಯಿತು.
ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಅಗೌರವ ತೋರಿದ್ದು, ಅವರ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದು ಸದಸ್ಯರು ಒತ್ತಾಯಿಸಿ ಸಭೆಯಿಂದ ಹೊರನಡೆದ ಪ್ರಸಂಗ ನಡೆಯಿತು.
ನಗರದ ಜಿಪಂ ಸಭಾಂಗಣದಲ್ಲಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ಆರಂಭವಾಗುತ್ತಿದ್ದಂತೆ ಸದಸ್ಯ ವಿನೋದ ಪಾಟೀಲ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕಾರಿಗಾರ ಅವರನ್ನು ತರಾಟೆಗೆ ತೆಗೆದುಕೊಂಡರು.
ಯಾವುದೋ ಟೆಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಸದಸ್ಯರು ಅಧಿಕಾರಿಗೆ ದೂರವಾಣಿ ಕರೆ ಮಾಡಿದ್ದರ ಬಗ್ಗೆ ಗೊತ್ತಿಲ್ಲ ಎಂದು ಅಧಿಕಾರಿ ಹಾರಿಕೆ ಉತ್ತರ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅದಕ್ಕೆ ಸಭೆಗೆ ಪ್ರತಿಕ್ರಿಯಿಸಿದ ಜಿಪಂ ಉಪಕಾರ್ಯದರ್ಶಿ, ನೀವೇನು ಅಧಿಕಾರಿಯೇ? ಎಂದು ಮಾತನಾಡಿದ್ದಾರೆ. ಅಧಿಕಾರಿಗಳಿಗೆ ಗೌರವಯಿಲ್ಲವೇ? ಏನು ಹೇಳಿದ್ದನ್ನು ಹೇಳಿಸಿಕೊಳ್ಳಬೇಕೇ? ಎಂದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಮರಿಲಿಂಗಪ್ಪ ಕಾರ್ನಾಳ, ಅಮರದೀಪ, ರಾಜಶ್ರೀ ಪಾಟೀಲ, ಬಸಣ್ಣಗೌಡ ಯಡಿಯಾಪುರ ಮಾತನಾಡಿ, ಸಭೆ ಸೂಚನಾ ಪತ್ರ ಕೆಲ ಸದಸ್ಯರಿಗೆ ಗುರುವಾರ ಸಂಜೆ ತಲುಪಿದೆ. ಸಭೆಯಲ್ಲಿ ಚರ್ಚೆಯಾಗಬೇಕಿರುವ ವಿಷಯಗಳ ಕುರಿತು ಸದಸ್ಯರಿಗೆ ಸರಿಯಾಗಿ ಮಾಹಿತಿಯೇ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನೀವು ನಮ್ಮ ಸೇವಕರು.
ಸರ್ಕಾರದ ಅನ್ನ ತಿನ್ನುತ್ತಿದ್ದೀರಿ. ಜನಪ್ರತಿನಿಧಿಗಳೊಂದಿಗೆ ಹೇಗೆ
ವರ್ತಿಸಬೇಕು ಎನ್ನುವುದು ತಿಳಿದಿಲ್ಲವೇ ಎಂದು ಮರಿಲಿಂಗಪ್ಪ ಕಾರ್ನಳ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಮಾತನಾಡಿ, ಸಾಮಾನ್ಯ ಸಭೆ ದಿನಾಂಕ 20 ದಿನದ ಹಿಂದೆ ನಿಗದಿಯಾಗಿದೆ. ಈವರೆಗೆ ಸದಸ್ಯರಿಗೆ ಏಕೆ ಮಾಹಿತಿ ತಲುಪಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಬಳಿಕ ಜಿಪಂ ಸದಸ್ಯ ಬಸರೆಡ್ಡಿ ಅನಪೂರ ಮಾತನಾಡಿ, ತಮ್ಮ ಪತ್ರದ ಸುಳ್ಳು ಉಲ್ಲೇಖ ನಮೂದಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಎಂ.ಎಸ್. ಪಾಟೀಲ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ. ತಾವು ಯಾರಿಗೂ ಯಾವುದೇ ಪತ್ರ ನೀಡಿಲ್ಲ. ಆದರೂ ತಮ್ಮ ಹೆಸರು ಹೇಗೆ ಉಲ್ಲೇಖವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ. ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ಕಾಮಗಾರಿಯೊಂದರ ಟೆಂಡರ್ ಕರೆದು ಆರು ತಿಂಗಳು ಕಳೆದರೂ ಇನ್ನೂ ತೆರೆದಿಲ್ಲ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಜಿಪಂ ಅಧ್ಯಕ್ಷರು 12:45ಕ್ಕೆ ಸಭೆಯನ್ನು ಅರ್ಧಗಂಟೆ ಮುಂದೂಡಿದರು.
ಪುನಃ 1:30ಕ್ಕೆ ಸಭೆ ಸೇರಿ ಸದಸ್ಯರಿಗೆ ಸರಿಯಾದ ಮಾಹಿತಿಯಿಲ್ಲದಿರುವುದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಹಿನ್ನೆಲೆಯಲ್ಲಿ ಕೆಲ ಅಧಿಕಾರಿಗಳು ಗೈರಾಗಿದ್ದರಿಂದ ಸಭೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ ಮುಂದಿನ
ದಿನಾಂಕವನ್ನು ತಿಳಿಸಲಾಗುವುದು ಎಂದು ಘೋಷಿಸಲಾಯಿತು. ಸಭೆಯಲ್ಲಿ ಯಾವುದೇ ವಿಷಯಗಳು ಚರ್ಚೆಯಾಗದೇ ಸಮಯ
ವ್ಯರ್ಥವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.