ಸ್ವಸಹಾಯ ಸಂಘಗಳಿಂದ ಸ್ವಾವಲಂಬಿ ಬದುಕು: ಡಾ| ಹೆಗ್ಗಡೆ

ಅನಂತಪುರದಲ್ಲಿ ನವಜೀವನ ಸಮಿತಿ ಸದಸ್ಯರ ಸಮಾವೇಶ

Team Udayavani, Jan 19, 2020, 5:22 AM IST

18-KBLM-1

ಕುಂಬಳೆ:ತುಳುನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸ್ವಸಹಾಯ ಸಂಘಗಳು ಸಹಕಾರಿಯಾಗಲಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅನಂತಪುರದಲ್ಲಿ ಶನಿವಾರ ಜರಗಿದ ಕಾಸರಗೋಡು ಜಿಲ್ಲೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ2,701ನೇ ಸ್ವಸಹಾಯ ಸಂಘದ ಉದ್ಘಾಟನೆ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಪುರುಷರಿಗೆ ಮತ್ತು ಮಹಿಳೆಯರಿ ಗಾಗಿ ಸ್ವಸಹಾಯ ಸಂಘಗಳನ್ನು ರಚಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ದುರ್ಬಲರು ಸಶಕ್ತರಾಗಿ ದ್ದಾರೆ. ಕೇರಳದಲ್ಲಿ ಸಕ್ರಿಯವಾಗಿರುವ ಕುಟುಂಬಶ್ರೀಯಂತೆ ಶ್ರೀ ಧರ್ಮಸ್ಥಳ ಸ್ವಸಹಾಯ ಸಂಘವು ರಾಜ್ಯಾದ್ಯಂತ ಜನಪ್ರಿಯವಾಗಿದೆ. ಹಲವಾರು ಜನ ಪರ ಯೋಜನೆಗಳನ್ನು ಸಂಘದ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದರು.

ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕುನ್ನು, ಮಾಜಿ ಶಾಸಕ ಸಿ.ಎಚ್‌. ಕುಂಞಂಬು, ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ, ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ, ಪ್ರಮುಖರಾದ ಡಾ| ಬಿ.ಎಸ್‌. ರಾವ್‌, ವಸಂತ ಸಾಲ್ಯಾನ್‌ ಉಡುಪಿ, ರಿಜಿ ಆರ್‌.ಆರ್‌., ಅರುಣಾ ಜೆ., ಅಶ್ವತ್ಥ ಪೂಜಾರಿ ಲಾಲ್‌ಬಾಗ್‌, ಮಹಾಲಿಂಗೇಶ್ವರ ಭಟ್‌,
ಉದಯ ಗಟ್ಟಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಾಸಾಶನ, ಸ್ವಸಹಾಯ ಸಂಘದ ಸದಸ್ಯರಿಗೆ ದಾಖಲಾತಿ ವಿತರಣೆ, ನವಜೀವನ ಸಮಿತಿ ಸದಸ್ಯರಿಗೆ ಪ್ರಶಸ್ತಿ ಪತ್ರ ವಿತರಣೆ, ಸುಜ್ಞಾನ ನಿಧಿ, ಕೃಷಿ ಆನುದಾನ, ಮೈಕ್ರೋ ಬಾಂಡ್‌ ವಿತರಣೆ, ಜಾಗೃತಿ ಅಣ್ಣ – ಜಾಗೃತಿ ಪ್ರಶಸ್ತಿ ಪ್ರದಾನ ನಡೆಯಿತು.

ಸತೀಶ್‌ ಶೆಟ್ಟಿ ಪ್ರಸ್ತಾವನೆಗೈದು ಸ್ವಾಗತಿಸಿದರು. ಚೇತನ ಎಂ. ಮತ್ತು ದೇವಿ ಪ್ರಸಾದ್‌ ಶೆಟ್ಟಿ ಬೆಜ್ಜ ಕಾರ್ಯಕ್ರಮ ನಿರೂಪಿಸಿದರು. ಕೆ.ಎನ್‌. ವೆಂಕಟ್ರಮಣ ಹೊಳ್ಳ ವಂದಿಸಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.