ಪೌರ ಸೇವಾ ನೌಕರರನ್ನಾಗಿಸಲು ಸರ್ಕಾರದ ಸಮ್ಮತಿ: ಪಾಟೀಲ
Team Udayavani, Jan 20, 2020, 3:08 PM IST
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಗ್ರಾಪಂ ವತಿಯಿಂದ ಮೇಲ್ದರ್ಜೆಗೇರಿದ ಪಟ್ಟಣ ಪಂಚಾಯತಿ ಮತ್ತು ಪುರಸಭೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಪಂ ನೌಕರರನ್ನು ಪೌರ ಸೇವಾ ನೌಕರರೆಂದು ರಾಜ್ಯ ಸರ್ಕಾರ ಪರಿಗಣಿಸಿದೆ ಎಂದು ಬೋರಗಾಂವ ಪಟ್ಟಣ ಪಂಚಾಯತಿ ಮುಖಂಡ ಉತ್ತಮ ಪಾಟೀಲ ತಿಳಿಸಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬೆಳಗಾವಿಜಿಲ್ಲೆಯ ನಾಲ್ಕು ಪುರಸಭೆ ಮತ್ತು 10 ಪಟ್ಟಣದ ಪಂಚಾಯತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ 74 ಜನ ಗ್ರಾಪಂ ನೌಕರರಿಗೆ ಪೌರಾಡಳಿತ ಇಲಾಖೆಯು ಪೌರಸೇವಾ ನೌಕರರೆಂದು ಪರಿಗಣಿಸಿ ಅವರಿಗೆ ಆಯಾ ಹುದ್ದೆಗೆ ಅನ್ವಯವಾಗುವಂತೆ ವೇತನ ಶ್ರೇಣಿ, ರಜೆ ಸೌಲಭ್ಯ, ಇನ್ನಿತರ ಸೌಲಭ್ಯಗಳನ್ನು ನೀಡಲು ಅನುಮತಿ ನೀಡಿದೆ ಎಂದು ತಿಳಿಸಿದರು.
ಬೋರಗಾಂವ ಪಟ್ಟಣ ಪಂಚಾಯತಿ ಸದಸ್ಯ ಜೀವಂಧರ ಪಾಟೀಲ ಮಾತನಾಡಿ, ಗ್ರಾಪಂ ವತಿಯಿಂದ ಮೇಲ್ದಜೇìಗೇರಿದ ಜಿಲ್ಲೆಯ ಎಲ್ಲ ಪಪಂ ಮತ್ತು ಪುರಸಭೆಯಲ್ಲಿ ಗ್ರಾಪಂ ನೌಕರರಿಗೆ ಸಮರ್ಪಕ ವೇತನ ಇಲ್ಲದೇ ಕಳೆದ ವರ್ಷ ಐದು ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದ್ದರು. ಬೋರಗಾಂವ ಪಟ್ಟಣ ಒಂದು ದಿನ ಬಂದ್ ಮಾಡಿ ನೌಕರರಿಗೆ ಬೆಂಬಲ ನೀಡಲಾಗಿತ್ತು. ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ, ಸಚಿವರಿಗೆ ಮತ್ತು ಶಾಸಕರಿಗೆ ಅನೇಕ ಬಾರಿ ಮನವಿ ಮಾಡಿದರೂ ಕೂಡಾ ಪ್ರಯೋಜನವಾಗಿರಲಿಲ್ಲ. ಆದರೂ ನಾವು ನಮ್ಮ ಹೋರಾಟ ಬಿಡದೇ ಸತತ ಪ್ರಯತ್ನ ಮಾಡಿ ನೌಕರರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ನಮ್ಮ ಪ್ರಯತ್ನಕ್ಕೆ ಜಿಲ್ಲೆಯ ಎಲ್ಲ ಶಾಸಕರು, ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ,ಚೆನ್ನಮ್ಮ ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ, ಕುಡಚಿ ಶಾಸಕ ಪಿ.ರಾಜೀವ ಸಹಾಯ ಸಹಕಾರನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸುಭಾಷ ಜಗರಿ, ಪಪಂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಯಶವಂತ ಕರಬನ್ನವರ, ಉಪಾಧ್ಯಕ್ಷ ಲಕ್ಮಣ ಕೇಲಗುಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.