ಕೃಷಿ ಸಮ್ಮಾನ ಸದ್ಬಳಕೆಯಾಗಲಿ
ಆಯುಷ್ಮಾನ್-ಆರೋಗ್ಯ ಭಾಗ್ಯ ಯೋಜನೆ ಸದುಪಯೋಗ ಮಾಡಿಕೊಳ್ಳಿ
Team Udayavani, Jan 20, 2020, 4:18 PM IST
ವಿಜಯಪುರ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ರೈತರ ಖಾತೆಗೆ ವರ್ಷಕ್ಕೆ 6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ 4 ಸಾವಿರ ಒಟ್ಟು 10 ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ. ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ಈ ಸೌಲಭ್ಯವನ್ನು ಅನ್ನದಾತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸುರೇಶಗೌಡ ಬಿರಾದಾರ ಹೇಳಿದರು.
ವಿಜಯಪುರ ತಾಲೂಕಿನ ತೊರವಿ ಜಾನುವಾರು ಜಾತ್ರೆಯಲ್ಲಿ ವಾರ್ತಾ ಇಲಾಖೆಯಿಂದ ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ನಾಟಕ ಪ್ರದರ್ಶನವನ್ನು ಡೋಲು ಬಾರಿಸಿ ಚಾಲನೆ ನೀಡಿದ ಅವರು ಮಾತನಾಡಿದರು.
ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆದ ರೈತರಿಗೆ 1 ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ, ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಗೆ ತುಂತುರು ನೀರಾವರಿ ಧನ ಸಹಾಯ, ಕೃಷಿ ಭಾಗ್ಯಯೋಜನೆಯಡಿ ಕೃಷಿಹೊಂಡ ಹಾಗೂ
ಘಟಕಕ್ಕೆ ಧನ ಸಹಾಯ ನೀಡಲಾಗುತ್ತಿದೆ. ಸರ್ಕಾರದ ಈ ಎಲ್ಲ ಯೋಜನೆಗಳು ರೈತರಿಗೆ ತಲುಪುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕಿದೆ ಎಂದರು.
ಆಯುಷ್ಮಾನ್- ಆರೋಗ್ಯ ಭಾಗ್ಯ ಯೋಜನೆಯು ದೇಶದ ಜನರಿಗೆ ಅತ್ಯುತ್ತಮ ಆರೋಗ್ಯ ಯೋಜನೆಯಾಗಿದೆ. ಎಲ್ಲ ವರ್ಗದ ಜನ ಸಾಮಾನ್ಯರಿಗೆ ತಲುಪುವ ಯೋಜನೆಯಾಗಿದ್ದು ಸರ್ಕಾರದ ಎಲ್ಲ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ರೈತರು ಈ ಯೋಜನೆಗಳ ಲಾಭ ಪಡೆದು ಕೃಷಿಯಲ್ಲಿ ಮತ್ತಷ್ಟು ಹೆಚ್ಚಿನ ಆಸಕ್ತಿ ವಹಿಸಲು ಮುಂದಾಗಬೇಕು. ಅಲ್ಲದೆ ಕೃಷಿ ಯಂತ್ರಧಾರೆ ಯೋಜನೆಯಡಿ ಕೃಷಿ ಚಟುವಟಿಕೆಗೆ ಬೇಕಾದ ಆಧುನಿಕ ಸಾಮಗ್ರಿಗಳು ಕೈಗೆಟಕುವ ದರದಲ್ಲಿ ಸಿಗುತ್ತಿವೆ. ಕೃಷಿ ಅಧಿ ಕಾರಿಗಳನ್ನ ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದ ಸವಲತ್ತುಗಳನ್ನು ಪಡೆಯಬೇಕು ಎಂದು ಅವರು ಕರೆ ನೀಡಿದರು.
ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಲಾವಿದರು “ನೇಗಿಲ ಯೋಗಿ’ ನಾಟಕ ಪ್ರದರ್ಶಿಸಿದರು. ಕೃಷಿ ಸಮ್ಮಾನ ಯೋಜನೆ, ನೇಕಾರರ ಸಾಲಮನ್ನಾ, ಮೀನುಗಾರರ ಸಾಲ ಮನ್ನಾ ಹಾಗೂ ಕೃಷಿ ಭಾಗ್ಯ ಕುರಿತು ಬೀದಿನಾಟಕ ಪ್ರದರ್ಶಿಸಿ ಜನರ ಮೆಚ್ಚುಗೆ ಪಡೆಯಿತು. ಶಿರಬೂರದ ಸರಸ್ವತಿ ಗಾಯನ ಸಂಘದ ಕಲಾವಿದರು ಜಾನಪದ ಸಂಗೀತದ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಎಪಿಎಂಸಿ ಸದಸ್ಯರಾದ ಸುರೇಶ ತಳವಾರ, ಚಂದ್ರಶೇಖರ ಪಾಟೀಲ, ಸಾಹೇಬಗೌಡ ಪಾಟೀಲ, ಹಣಮಂತ ಲೊಕುರಿ, ವಿಶ್ವನಾಥ ಪಾಟೀಲ,ಅಣ್ಣರಾಯ ದಶ್ಯಾಳ, ಪೀರಗೊಂಡ ಗದ್ಯಾಳ, ಎಪಿಎಂಸಿ ಕಾರ್ಯದರ್ಶಿ ಆರ್. ಎಂ. ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.