ಸಮಾಜದ ಅಭಿವೃದ್ಧಿಗೆ ಸಂಘಟಿತ ಪ್ರಯತ್ನಅಗತ್ಯ
Team Udayavani, Jan 20, 2020, 4:50 PM IST
ದಾವಣಗೆರೆ: ನಾಯಕ ಸಮಾಜದ ಅಭಿವೃದ್ಧಿಗೆ ನಮ್ಮ ಸಮಾಜದ ಅಧಿಕಾರಿಗಳು, ನೌಕರರು ಸಂಘಟಿತರಾಗಬೇಕು ಎಂದು ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಆಶಿಸಿದ್ದಾರೆ.
ಭಾನುವಾರ ದಾವಣಗೆರೆಯ ನಾಯಕರ ಹಾಸ್ಟೆಲ್‌ನಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾ ಫಟಕ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾಕಷ್ಟು ಹಿಂದಿರುವ ನಾಯಕ ಸಮಾಜದ ಅಭಿವೃದ್ಧಿಗೆ ಅಧಿಕಾರಿಗಳು, ನೌಕರರು ಒಂದಾಗಬೇಕು. ಸಹಾಯ, ಸಹಕಾರ, ನೆರವು ನೀಡಬೇಕು ಎಂದರು.
ಬೇರೆ ಬೇರೆ ಸಮಾಜದ ಯಾವುದೇ ಅಧಿಕಾರಿ, ನೌಕರರು, ಸಿಬ್ಬಂದಿಗೆ ಸಮಸ್ಯೆಯಾದರೆ ಆಯಾಯ ಸಮಾಜದ ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಜನರು ನೆರವಿಗೆ ಬರುತ್ತಾರೆ. ಆದರೆ, ನಮ್ಮ ಸಮಾಜದವರು ಆ ರೀತಿ ನೆರವಿಗೆ ಬರುತ್ತಿಲ್ಲ ಎಂದರು.
ಕುರುಬ ಸಮಾಜದ ಅಧಿಕಾರಿಗಳು, ನೌಕರರಿಗೆ ಏನಾದರೂ ಆದರೆ ಸಿದ್ದರಾಮಯ್ಯ, ಒಕ್ಕಲಿಗರಿಗೆ ಆದರೆ ದೇವೇಗೌಡರು, ಕುಮಾರಸ್ವಾಮಿ ನೆರವಿಗೆ ಬರುತ್ತಾರೆ. ನಮ್ಮಲ್ಲಿ 17 ಜನರು ಶಾಸಕರಿದ್ದಾರೆ. ಏನಾದರೂ ಆದಲ್ಲಿ ನಮ್ಮವರ ಪರವಾಗಿ ನಿಲ್ಲುವಂತಾಗಬೇಕು ಎಂದರು. ನಾಯಕ ಸಮಾಜದವರು ಯಾವುದೇ ಸಮಸ್ಯೆ ಬಂದರೂ ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು. ಸಮಾಜದ ಸಭೆ, ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಇತರರಲ್ಲೂ ವಿಶ್ವಾಸ ತುಂಬಬೇಕು. ಸಮಾಜದ ಸಮಸ್ಯೆಗೆ ಪ್ರತಿಯೊಬ್ಬರು ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ನಾಯಕ ಸಮಾಜಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.7.5 ಮೀಸಲಾತಿ ನೀಡಬೇಕು ಎಂದು ಹೋರಾಟ ನಡೆಯುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಳ್ಳಲಿದ್ದಾರೆ. ಖಂಡಿತವಾಗಿಯೂ ವರದಿ ಸಲ್ಲಿಕೆ ಬಳಿಕ ಮೀಸಲಾತಿ ದೊರೆಯುತ್ತದೆ ಎಂದು ತಿಳಿಸಿದರು.
ನಾನೂ ಸಹ ದಾವಣಗೆರೆಯ ನಾಯಕರ ಹಾಸ್ಟೆಲ್ ವಿದ್ಯಾರ್ಥಿ. ದಾವಣಗೆರೆಯಲ್ಲಿ ನಾಯಕ ಸಮಾಜದ ಮಹಿಳಾ ಹಾಸ್ಟೆಲ್ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ. ನಮ್ಮ ಸಮಾಜದ ಯಾವುದೇ ಕೆಲಸ-ಕಾರ್ಯಕ್ಕೆ ಸದಾ ಬೆನ್ನಲುಬಾಗಿ ಇರುತ್ತೇನೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಬಿ. ಆನಂದ್ ಮಾತನಾಡಿ, ನಾಯಕ ಸಮಾಜದವರು ಹಕ್ಕುಗಳಿಗೆ ಹೋರಾಟ ಮಾಡಬೇಕು. ಅನೇಕರಿಗೆ ಸರ್ಕಾರದಿಂದ ದೊರೆಯುವಂತಹ ಸೌಲಭ್ಯಗಳ ಬಗ್ಗೆ ಗೊತ್ತೇ ಇಲ್ಲ. ಸಮಾಜದ ಮುಖ್ಯವಾಹಿನಿಗೆ ಬರದೇ ಇರುವರನ್ನು ಗುರುತಿಸಿ, ಸೌಲಭ್ಯ ಒದಗಿಸಿಕೊಡುವತ್ತ ಎಲ್ಲರೂ ಗಮನ ಹರಿಸಬೇಕು ಎಂದು ತಿಳಿಸಿದರು.
ಇಂದಿನ ಆಧುನಿಕ ಜಗತ್ತಿನಲ್ಲಿ ಶಿಕ್ಷಣದಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ. ಹಾಗಾಗಿ ನಮ್ಮ ಸಮಾಜದವರು ಚೆನ್ನಾಗಿ ಓದಬೇಕು. ಅಭಿವೃದ್ಧಿ ಹೊಂದಬೇಕು. ಕೆಲವಾರು ಕಾರಣದಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟವರ ಗುರುತಿಸಿ, ಮತ್ತೆ ಶಿಕ್ಷಣ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ರಾಜ್ಯ ಘಟಕದ ಅಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಶ್ರೀನಿವಾಸನಾಯಕ, ಟಿ. ರಾಜಣ್ಣ, ಡಾ| ಎ.ಬಿ. ರಾಮಚಂದ್ರಪ್ಪ, ಮಹಾನಗರ ಪಾಲಿಕೆ ಸದಸ್ಯ ವಿನಾಯಕ ಪೈಲ್ವಾನ್, ಡಾ| ನಂದಕುಮಾರ್, ಎಂ. ಗದಿಗೆಪ್ಪ, ಶ್ರೀನಿವಾಸ್ ದಾಸಕರಿಯಪ್ಪ, ವಿಜಯಲಕ್ಷ್ಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.