ಸರ್ವರೋಗಕ್ಕೂ ಮನೆಮದ್ದು ವೀಳ್ಯದೆಲೆ
Team Udayavani, Jan 21, 2020, 4:26 AM IST
ಕರಾವಳಿ ಕರ್ನಾಟಕದಲ್ಲಿ ತುಳುವರ ಎಲ್ಲ ಶುಭ ಕಾರ್ಯಗಳಿಗೂ ಅಡಿಕೆ ಎಲೆಬೇಕೆ ಬೇಕು. ದೇವರ ಪೂಜೆಯಿಂದ ಹಿಡಿದು ತಿನ್ನುವವರೆಗೂ ಅತಿ ಹೆಚ್ಚಿನ ಉಪಯೋಗ ದೊರೆಯುತ್ತದೆ. ಸಮಸ್ಯೆಗಳಿಲ್ಲದೆ ಮನುಷ್ಯ ಇರುವುದೇ ಇಲ್ಲ ಹಾಗಾಗಿ ಸರ್ವ ರೋಗಕ್ಕೂ ಮನೆ ಮದ್ದು ವೀಳ್ಯದೆಲೆ ಎನ್ನುವ ಮಾತಿದೆ.
ಒಂದು ವೀಳ್ಯದೆಲೆ, ಅದಕ್ಕೆ ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸುವುದರಿಂದ ಕೆಮ್ಮು ಕಡಿಮೆಯಾಗುವುದು.
ವೀಳ್ಯದೆಲೆಯಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದರಿಂದ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಜತೆಗೆ ಗ್ಯಾಸ್ಟ್ರಿಕ್ ಟ್ರಬಲ್ ಅನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ.
ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ, ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವಿಳ್ಯದೆಲೆಯನ್ನು ಎದೆಯ ಮೇಲಿಡುವುದರಿಂದ ಉಸಿರಾಟದ ತೊಂದರೆಗೆ ಮುಕ್ತಿ.
ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ನೀಡಿದರೆ ನೋವು ಮಾಯವಾಗುತ್ತದೆ.
ಮಕ್ಕಳಲ್ಲಿ ನೆಗಡಿ, ಕೆಮ್ಮು , ಕಫ ಇರುವವರಿಗೆ ವೀಳ್ಯದೆಲೆಯ ರಸ ಅದಕ್ಕೆ ಬಿಳಿ ಈರುಳ್ಳಿಯ ರಸ ಹಾಗೂ ಜೇನುತುಪ್ಪ ಬೆರೆಸಿ, ಅದರಲ್ಲಿ ಶುದ್ಧ ಇಂಗನ್ನು ಸೇರಿಸಿ ದಿನಕ್ಕೆ 3 ರಿಂದ 4 ಬಾರಿ ಸೇವಿಸಿದರೆ ತುಂಬಾ ಪರಿಣಾಮಕಾರಿ.
ಕೂದಲು ಉದುರುವಿಕೆಗೆ 2 ಕಪ್ ಕೊಬ್ಬರಿ ಎಣ್ಣೆಗೆ ಅರ್ಧ ಕಪ್ ವಿಳ್ಯದೆಲೆ ರಸ ಮತ್ತು ಅರ್ಧ ಕಪ್ ಒಂದೆಲಗ ರಸ ಬೆರೆಸಿ ಚೆನ್ನಾಗಿ ಕುದಿಸಿ ನಿತ್ಯ ಹಚ್ಚಿ ಮಾಲೀಸು ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.
ವೀಳ್ಯದೆಲೆಯನ್ನು ಕತ್ತರಿಸಿ ನೀರಿನಲ್ಲಿ ಹಾಕಿ ಕುದಿಸಿ, ಬಳಿಕ ಸೋಸಿ ಕಷಾಯಕ್ಕೆ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸಿದರೆ ವಸಡಿನ ನೋವು, ಊತ ಗುಣವಾಗುತ್ತದೆ.
ತೀವ್ರ ಹಲ್ಲು ನೋವಿದ್ದಾಗ ವೀಳ್ಯದೆಲೆಯ ರಸದಲ್ಲಿ ಲವಂಗದ ಹುಡಿಯನ್ನು ಬೆರೆಸಿ ಅದರಲ್ಲಿ ಅದ್ದಿದ ಹತ್ತಿಯನ್ನು ನೋವಿರುವ ಭಾಗದಲ್ಲಿ ಇರಿಸಿಬೇಕು.
ಗರ್ಭಿಣಿ ಸ್ತ್ರೀಯರಲ್ಲಿ ವಾಕರಿಕೆ ,ಬಿಕ್ಕಳಿಕೆ ಉಂಟಾದಾಗ 2 ವೀಳ್ಯದೆಲೆಯಲ್ಲಿ ಅಡಿಕೆಯ ಚೂರನ್ನು ಇಟ್ಟು ಜತೆಗೆ 4 ಏಲಕ್ಕಿ ಕಾಳು ಇಟ್ಟು ಜಗಿದು ರಸ ಹೀರಿದರೆ ಶಮನಕಾರಿ.
ಗಾಯ ಉಂಟಾದಾಗ ತುರಿಕೆ ಕಜ್ಜಿಗಳಿಗೆ ವಿಳ್ಯದೆಲೆಯ ರಸದಲ್ಲಿ ನಾಲ್ಕರಿಂದ ಆರು ಹನಿಯಷ್ಟು ನಿಂಬೆರಸ ಬೆರೆಸಿ ಹಚ್ಚಿದರೆ ಬೇಗ ಗುಣವಾಗುತ್ತದೆ.ವೀಳ್ಯದೆಲೆಯನ್ನು ಕಾವಲಿಯ ಮೆಲೆ ಬೆಚ್ಚಗೆ ಮಾಡಿ ಅದಕ್ಕೆ ಕರ್ಪೂರ ಬೆರೆಸಿ ಕೊಬ್ಬರಿ ಎಣ್ಣೆಯನ್ನು ಲೇಪಿಸಿ, ಹಣೆಗೆ ಶಾಖ ನೀಡಿದರೆ ತಲೆನೋವು ಕಡಿಮೆಯಾಗುತ್ತದೆ.
ವಿಜಿತಾ ಅಮೀನ್ ಬಂಟ್ವಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.