ಇಂದಿನಿಂದ ಸುತ್ತೂರು ಜಾತ್ರೆ ಆರಂಭ
Team Udayavani, Jan 21, 2020, 3:04 AM IST
ಮೈಸೂರು: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ, ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರದಲ್ಲಿ ಜ.21ರಿಂದ 26ರವರೆಗೆ ವಿಜೃಂಭಣೆಯಿಂದ ಜರುಗಲಿದೆ. ಆರು ದಿನಗಳವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಸುಮಾರು 15 ರಿಂದ 20 ಲಕ್ಷ ಭಕ್ತರು ಬರುವ ನಿರೀಕ್ಷೆಯಿದೆ.
ಜ.21ರಂದು ವೀರಭದ್ರೇಶ್ವರ ಕೊಂಡೋತ್ಸವ, 23ರಂದು ರಥೋತ್ಸವ, 24ರಂದು ಮಹದೇಶ್ವರ ಕೊಂಡೋತ್ಸವ, 25ರಂದು ತೆಪ್ಪೋತ್ಸವಗಳ ಜತೆಗೆ ಲಕ್ಷ ದೀಪೋತ್ಸವ, ಹಾಲರವಿ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರುಗಲಿವೆ.
ಮಂಗಳವಾರ ಬೆಳಗ್ಗೆ 4 ಗಂಟೆಗೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ ವರಿಂದ ಕತೃ ಗದ್ದುಗೆ ಅನುಜ್ಞೆ, ಮಹಾ ಸಂಕಲ್ಪಪೂರ್ವಕ ಮಹಾ ರುದ್ರಾಭಿಷೇಕದೊಂದಿಗೆ ಪೂಜಾ ಉತ್ಸವ ಆರಂಭಗೊಳ್ಳಲಿದೆ. ಜ.26ರಂದು ಬೆಳಗ್ಗೆ 10.30ಕ್ಕೆ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ
ಆದಿಚುಂಚನ ಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಸಮ್ಮುಖದಲ್ಲಿ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.