ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆಗೆ ಒತ್ತು
Team Udayavani, Jan 21, 2020, 3:07 AM IST
ಬೆಂಗಳೂರು: 2016ರಲ್ಲಿ “ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ’ ಎಂದು ಘೋಷಿಸಿಕೊಂಡಿರುವ ಬೆಂಗಳೂರು ನಗರ ಜಿಪಂ ಇದೀಗ ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸುವಲ್ಲಿ ನಿರತವಾಗಿದೆ. ಆ ಹಿನ್ನೆಲೆಯಲ್ಲಿ ಗ್ರಾಪಂ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಮತ್ತು ಪೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸ್ತ್ರೀ ಶಕ್ತಿ ಸಂಘಟನೆಗಳಿಗೆ ಶುಚಿತ್ವದ ಬಗ್ಗೆ ಅರಿವಿನ ಪಾಠ ಹೇಳಿಕೊಡಲು ಮುಂದಾಗಿದೆ.
ಬೆಂಗಳೂರು ನಗರ ಜಿಪಂ ವ್ಯಾಪ್ತಿಯಲ್ಲಿ ಸುಮಾರು 96 ಗ್ರಾಪಂಗಳಿವೆ. ಈ ಎಲ್ಲಾ ಗ್ರಾಪಂಗಳಲ್ಲಿ ಹಂತ-ಹಂತವಾಗಿ ಮಾರ್ಚ್ ಅಂತ್ಯದ ಒಳಗೆ ಸ್ವಚ್ಛತೆಗೆ ಸಂಬಂಧಿಸಿದ ಕಾರ್ಯಕ್ರಗಳನ್ನು ರೂಪಿಸಲಿದೆ. ನೀರು ನೈರ್ಮಲೀಕರಣ, ಘನ ಮತ್ತು ದ್ರವ್ಯ ತ್ಯಾಜ್ಯಗಳ ನಿರ್ವಹಣೆ, ಮನೆ ಆವರಣ ಸುಂದರವಾಗಿ ಇಟ್ಟುಕೊಳ್ಳುವುದು ಸೇರಿದಂತೆ ಶುಚಿತ್ವಕ್ಕೆ ಸಂಬಂಧಿಸಿದಂತೆ ಹಲವು ತಿಳಿವಳಿಕೆ ನೀಡಲಿದೆ.
ಸರ್ಕಾರ ಈಗಾಗಲೇ ಸ್ವಚ್ಛತೆಗೆ ಸಂಬಂಧಿಸಿದಂತೆ ಮಕ್ಕಳನ್ನೇ ರಾಯಬಾರಿಯನ್ನಾಗಿ ಮಾಡಲು ಮುಂದಾ ಗಿದೆ. ಆ ಹಿನ್ನೆಲೆಯಲ್ಲಿ ಮಕ್ಕಳಿಗೆ ಸಂಬಂ ಧಿಸಿದ ಹಲವು ಕಾರ್ಯಕ್ರಮಗಳನ್ನು ರೂಪಿಸಲು ಬೆಂಗಳೂರು ನಗರ ಜಿಪಂ “ಸ್ವಚ್ಛ ಭಾರತ್ ಮಿಷನ್’ ವಿಭಾಗದ ಹಿರಿಯ ಅಧಿಕಾರಿಗಳು ಹೆಜ್ಜೆ ಇರಿಸಿದ್ದಾರೆ. ಪ್ರತಿಯೊಂದು ದಿನ ಒಂದೊಂದು ಗ್ರಾಪಂಗೆ ಭೇಟಿ ನೀಡಿಲಿರುವ ಅಧಿಕಾರಿಗಳು ಶಾಲಾ ಮಕ್ಕಳಿಗೆ ಶುಚಿತ್ವದ ಪಾಠ ಹೇಳಲಿದ್ದಾರೆ.
ಮನೆಯಲ್ಲಿರುವ ಶೌಚಾಲಯಗಳನ್ನು ಶುಚಿತ್ವದಿಂದ ಕಾಪಿಟ್ಟುಕೊಳ್ಳು ವುದು. ಶಾಲೆಗಳಲ್ಲಿ ನಿರ್ಮಿಸಲಾಗಿರುವ ಶೌಚಾ ಲಯ, ಅಡುಗೆ ಕೋಣೆ, ಶಾಲೆಯ ಸುತ್ತಮುತ್ತಲಿನ ಆವರಣ ಸೇರಿದಂತೆ ಇನ್ನಿತರ ಪ್ರದೇಶಗಳನ್ನು ಸುಂದರವಾಗಿಟ್ಟು ಕೊಳ್ಳುವ ಬಗ್ಗೆ ಅರಿವಿನ ಪಾಠವನ್ನು ವಿದ್ಯಾರ್ಥಿ ಸಮೂಹಕ್ಕೆ ನೀಡಲಾಗುವುದು ಎಂದು ನಗರ ಜಿಪಂ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.
ಸ್ವಚ್ಛತೆ ಕುರಿತ ವಿಡಿಯೋ: ನಮ್ಮ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ವಿದ್ಯಾ ರ್ಥಿಗಳಿಗೆ ಮಾಹಿತಿ ನೀಡಿದರೆ ಅವರು ತಮ್ಮ ಪೋಷಕರಿಗೆ ಸ್ವಚ್ಛತೆಯ ಬಗ್ಗೆ ತಿಳಿ ಹೇಳುತ್ತಾರೆ. ಆ ಹಿನ್ನೆಲೆಯಲ್ಲೆ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಜತೆಗೆ ಗ್ರಾಮಾಂತರ ಪ್ರದೇಶಗಳಲ್ಲಿ ಹಸಿ-ಕಸ ಮತ್ತು ಒಣಕಸ ನಿರ್ವಹಣೆ ಬಗ್ಗೆ ಸಮರ್ಪಕ ತಿಳಿವಳಿಕೆ ಇರುವುದಿಲ್ಲ.
ವಿದ್ಯಾರ್ಥಿಗಳಿಗೆ ಈ ಬಗ್ಗೆ ಪೂರಕ ಮಾಹಿತಿ ನೀಡಿದರೆ ಮತ್ತಷ್ಟು ಅನುಕೂಲವಾಗ ಲಿದೆ ಎಂದು ಸ್ವಚ್ಛ ಸರ್ವೇಕ್ಷಣ್ ಮಿಷನ್‌ನ ಅಧಿಕಾರಿಗಳು ಹೇಳಿದರು. ಶುಚಿತ್ವಕ್ಕೆ ಸಂಬಂಧಿಸಿದಂತೆ ಈಗಾಗಲೇ ಜನ ಜಾಗೃತಿ ವಿಡಿಯೋಗಳನ್ನು ಸಿದ್ಧಪಡಿಸಲಾಗಿದೆ. ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಲಿ ಎಂಬ ಕಾರಣದಿಂದ ಶಾಲೆಗಳಲ್ಲಿ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ಸ್ತ್ರೀಶಕ್ತಿ ಸಂಘಟನೆಗಳಿಗೂ ಶುಚಿತ್ವದ ಪಾಠ: ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ. ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಸ್ತ್ರೀ ಶಕ್ತಿ ಸಂಘಟನೆಗಳಿಗೂ ಕೂಡ ಮನೆ ಸುತ್ತಮುತ್ತಲಿನ ಆವರಣ ಮತ್ತು ಹೊರಗಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ತಿಳಿ ಹೇಳಲಾಗುವುದು. ಈ ಸಂಬಂಧ ಸ್ತ್ರೀಶಕ್ತಿ ಸಂಘಟನೆಗಳಿಗೂ ಮಾಹಿತಿ ನೀಡಲಾಗುವುದು ಎಂದು ನಗರ ಜಿಪಂ ಉಪ ಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್‌ನ ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಿದ್ದರಾಮಯ್ಯ ಹೇಳಿದ್ದಾರೆ.
ಈ ಹಿಂದೆ 2016ರಲ್ಲಿ ಬೆಂಗಳೂರು ನಗರ ಜಿಪಂ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಎಂದು ಘೋಷಿಸಿಕೊಂಡಿತ್ತು. ಬರೀ ಘೋಷಣೆ ಮಾಡಿ ಕೊಂಡರೆ ಸಾಲದು, ಅದರ ಸುಸ್ಥಿರತೆಗೂ ಆದ್ಯತೆ ನೀಡಬೇಕು. ಆ ಹಿನ್ನೆಲೆಯಲ್ಲಿ ನಗರ ಜಿಪಂ ಸ್ವಚ್ಛ ಭಾರತ್ ಮಿಷನ್ ವಿಭಾಗದ ಅಧಿಕಾರಿಗಳು ಶುಚಿತ್ವಕ್ಕೆ ಸಂಬಂಧಿಸಿದ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.
ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಿದ ಬಳಿಕ ನಿರಂತರವಾಗಿ ನೈರ್ಮಲ್ಯತೆಗೆ ಸಂಬಂಧಿಸಿದಂತೆ ಮಾಹಿತಿ, ಶಿಕ್ಷಣ-ಸಂವಹನ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಇದೀಗ ಮತ್ತೆ ಗ್ರಾಪಂ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸ್ತ್ರೀಶಕ್ತಿ ಸಂಘಟನೆಗಳಿಗೆ ಶುಚಿತ್ವದ ಪಾಠ ಹೇಳಿ ಕೊಡಲಾಗುವುದು.
-ಕೆ.ಶಿವರಾಮೇಗೌಡ, ಬೆಂಗಳೂರು ನಗರ ಜಿಪಂ ಸಿಇಒ
* ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.