ವಿಮಾನ ನಿಲ್ದಾಣ ಬಾಂಬ್ ಪ್ರಕರಣದಲ್ಲಿ ಗಲಭೆಕೋರರು ಭಾಗಿ ಸಾಧ್ಯತೆ : ಪ್ರಹ್ಲಾದ್ ಜೋಶಿ
Team Udayavani, Jan 21, 2020, 3:03 PM IST
ಹುಬ್ಬಳ್ಳಿ: ದೇಶದಲ್ಲಿ ಅಭದ್ರತೆ ಸೃಷ್ಟಿಸಲು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿಯೂ ಪ್ರಯತ್ನ ಮಾಡಿದ್ದರು. ಆ ಮಂಗಳೂರು ಗಲಭೆಯಲ್ಲಿ ಪಾಲ್ಗೊಂಡವರ ಪ್ರೇರಣೆಯಿಂದಲೇ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಪ್ರಕರಣವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ತೀವ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ ಒಂದು ಆತಂಕಕಾರಿ ವಿಷಯ. ಅವರು ದೇಶ ವಿರೋದಿಗಳು. ತಪ್ಪಿತಸ್ಥರನ್ನ ಬಂಧಿಸಬೇಕು. ರಾಜ್ಯದ ಎಲ್ಲಾ ವಿಮಾನ ಹಾಗೂ ರೈಲ್ವೆ ನಿಲ್ದಾಣಗಳಿಗೆ ಸೂಕ್ತ ಭದ್ರತೆ ನೀಡಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿಯವರದ್ದು ಬೇಜವಾಬ್ದಾರಿತನದ ಹೇಳಿಕೆ. ಇದೊಂದು ನಾಲಾಯಕತನದ ಪರಮಾವಧಿ. ಕುಮಾರಸ್ವಾಮಿಗೆ ಯಾರು ಬಾಂಬ್ ಇಟ್ಟಿದ್ದಾರೆ ಎನ್ನುವುದು ಗೊತ್ತಿದೆ ಅಂದ ಮೇಲೆ ದೂರು ದಾಖಲಿಸಲಿ ಎಂದ ಅವರು ಕುಮಾರಸ್ವಾಮಿಯದ್ದು ದೇಶದ್ರೋಹಿ ಹೇಳಿಕೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.