ಹಾಸ್ಟೆಲ್‌ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಕಡ್ಡಾಯ


Team Udayavani, Jan 22, 2020, 3:00 AM IST

hostel

ಮೈಸೂರು: ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳ ಕಟ್ಟಡಗಳಲ್ಲಿ ಕಡ್ಡಾಯ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿ, ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ದೊರೆಯದಿದ್ದರೆ ಮಂಜೂರಾದ ಹಣವನ್ನು ಸರ್ಕಾರಕ್ಕೆ ವಾಪಸ್‌ ಮಾಡಿ, ಸಂಪೂರ್ಣ ಭೂ ಸ್ವಾಧೀನವಾಗುವವರೆಗೆ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಂಡು ಸರ್ಕಾರದ ಹಣ ಪೋಲು ಮಾಡಬೇಡಿ ಎಂದು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎರಡೂ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳ ಸ್ವಂತ ಕಟ್ಟಡಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ನೆಪ ಬೇಡ: ನಿವೇಶನ ಸಿಗುತ್ತಿಲ್ಲ ಎಂಬ ನೆಪ ಹೇಳಿಕೊಂಡು ಹಾಸ್ಟೆಲ್‌ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವಿಳಂಬ ಮಾಡಬೇಡಿ. ಕಟ್ಟಡ ಇಲ್ಲದೇ ಮಕ್ಕಳು ಒದ್ದಾಡುತ್ತಿದ್ದಾರೆ. ಕೂಡಲೇ ಕಟ್ಟಡ ಕಾಮಗಾರಿಗಳನ್ನು ಶುರು ಮಾಡಿ ಎಂದು ಸೂಚಿಸಿದರು.

ಫ‌ಲಿತಾಂಶ: ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ 633 ವಿದ್ಯಾರ್ಥಿಗಳಲ್ಲಿ 541 ಮಂದಿ ಉತ್ತೀರ್ಣರಾಗಿದ್ದು, ಶೇ.85.46 ಫ‌ಲಿತಾಂಶ ಬಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 480 ವಿದ್ಯಾರ್ಥಿಗಳ ಪೈಕಿ 459 ಮಂದಿ ಉತ್ತೀರ್ಣರಾಗಿದ್ದು, ಶೇ.95.53 ಫ‌ಲಿತಾಂಶ ಬಂದಿದೆ.

ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯದ ಪಿಯುಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆಗೆ ಹಾಜರಾದ 591 ಮಂದಿಯಲ್ಲಿ 452 ಮಂದಿ ಉತ್ತೀರ್ಣರಾಗಿದ್ದು, ಶೇ.76.48 ಫ‌ಲಿತಾಂಶ ಬಂದಿದೆ. ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳ 105 ಪರೀಕ್ಷಾರ್ಥಿಗಳ ಪೈಕಿ 92 ಮಂದಿ ಉತ್ತೀರ್ಣರಾಗಿದ್ದು, ಶೇ.78.85 ಫ‌ಲಿತಾಂಶ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರತ್ಯೇಕ ಟ್ಯೂಷನ್‌: ಫ‌ಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಪರವಾಗಿಲ್ಲ. ಆದರೆ, ಪಿಯುಸಿ ಫ‌ಲಿತಾಂಶ ಉತ್ತಮವಾಗಿಲ್ಲ. ಹಾಸ್ಟೆಲ್‌, ವಸತಿ ಶಾಲೆಗಳ ಹೆಚ್ಚಿನ ಮಕ್ಕಳು ಪಾಸಾಗುವಂತಾಗಬೇಕು. ಇದಕ್ಕಾಗಿ ಅವರಿಗೆ ಪ್ರತ್ಯೇಕ ಟ್ಯೂಷನ್‌ ಕೊಡಿಸುವಂತೆ ಹೇಳಿದರು.

ಜಾತಿ ನಿಂದನೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಯಾವುದೋ ಕಾರಣಕ್ಕೆ ಪ್ರಕರಣ ದಾಖಲಿಸಿ ನಂತರ ರಾಜೀ ಆಗಿಬಿಡುತ್ತಾರೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಶಿಕ್ಷೆ ಯಾರಿಗೂ ಆಗುತ್ತಿಲ್ಲ. ಹೀಗಾಗಿ ಬೋಗಸ್‌ ಪ್ರಕರಣಗಳು ದಾಖಲಾಗದಂತೆ ಎಚ್ಚರಿಕೆವಹಿಸಿ ಎಂದ ಅವರು, ನಿಜವಾಗಿ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದರೆ, ಅಂತವರಿಗೆ ಕ್ರಮ ಆಗಬೇಕು ಎಂದರು. ಸಿಂಧುತ್ವ ಪ್ರಮಾಣ ಪತ್ರ ನೀಡಿಕೆಯೂ ಬೋಗಸ್‌ ಆಗುತ್ತಿದ್ದು, ಈ ಬಗ್ಗೆಯೂ ಎಚ್ಚರಿಕೆವಹಿಸಿ ಎಂದು ಹೇಳಿದರು.

ನರೇಗಾ ಹಣ ಬಳಸಿ: ಐಟಿಡಿಪಿ ಯೋಜನೆಯಡಿ ಬುಡಕಟ್ಟು ಸಮುದಾಯದವರ ಮನೆ ನಿರ್ಮಾಣಕ್ಕೆ 3.50 ಲಕ್ಷ ರೂ. ನಿಗದಿಪಡಿಸಲಾಗಿದೆ. ಇವತ್ತಿನ ದರದಲ್ಲಿ ಈ ಹಣಕ್ಕೆ ಮನೆ ಕಟ್ಟಲಾಗಲ್ಲ ಎಂದು ಎಂಜಿನಿಯರಿಂಗ್‌ ವಿಭಾಗದವರು ಹೇಳುತ್ತಾರೆ ಎಂದು ಜಿಲ್ಲಾಧಿಕಾರಿ, ಸಚಿವರಿಗೆ ತಿಳಿಸಿದರು. ಈ ಯೋಜನೆಗೆ ಶೌಚಾಲಯ, ಮೆಟೀರಿಯಲ್‌, ಲೇಬರ್‌ ಕಾಂಪೋನೆಂಟ್‌ ಜೋಡಿಸಿ, ಎಲ್ಲವೂ ಸೇರಿದರೆ ಒಳ್ಳೆಯ ಮನೆ ಕಟ್ಟಿಸಬಹುದು ಎಂದು ಸಚಿವರು ಹೇಳಿದರು.

ಬುಡಕಟ್ಟು ಸಮುದಾಯದ ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಕೌಶಲ್ಯ ತರಬೇತಿ ಕೊಡಿಸಿ, ಉದ್ಯೋಗ ಕಂಡುಕೊಳ್ಳಲು ದಾರಿ ತೋರಿಸಿ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಸೇರಿದಂತೆ ಸಮಾಜಕಲ್ಯಾಣ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹಣ ವಾಪಸ್‌ ಮಾಡಿ: ರಾಜ್ಯದಲ್ಲಿ 2008-09ನೇ ಸಾಲಿನಿಂದ 6900 ಅಂಬೇಡ್ಕರ್‌ ಸಮುದಾಯ ಭವನಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿ, 1400 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ಈವರೆಗೆ ಕೇವಲ 2,700 ಸಮುದಾಯ ಭವನಗಳು ನಿರ್ಮಾಣವಾಗಿವೆ. ಸರ್ಕಾರ ಬಿಡುಗಡೆ ಮಾಡಿದ ಹಣ ಜಿಲ್ಲಾಧಿಕಾರಿ, ಲ್ಯಾಂಡ್‌ ಆರ್ಮಿ, ನಿರ್ಮಿತಿ ಕೇಂದ್ರದ ಖಾತೆಗಳಲ್ಲಿ ಉಳಿದಿದೆ. ಪ್ರಗತಿಯೇ ಆಗುತ್ತಿಲ್ಲ. ಜನ ಸಮುದಾಯ ಭವನ ಬೇಡ ಅಂದರೆ, ನಿವೇಶನ ಕೊರತೆ ಇದ್ದರೆ ಹಣ ಇಟ್ಟುಕೊಂಡು ಏನು ಮಾಡ್ತೀರಾ? ಹಣವನ್ನು ಸರ್ಕಾರಕ್ಕೆ ವಾಪಸ್‌ ಮಾಡಿ ಎಂದು ಗೋವಿಂದ ಕಾರಜೋಳ ಸೂಚಿಸಿದರು.

ಗುಬ್ಬಿ-ಕಾಗೆ ಲೆಕ್ಕ ನಡೆಯಲ್ಲ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ ಮಾಹಿತಿ ಅಪ್‌ಡೇಟ್‌ ಮಾಡದಿದ್ರೆ ಮೀಟಿಂಗ್‌ಗೆ ಬರಬಾರದು. ಗುಬ್ಬಿ-ಕಾಗೆ ಲೆಕ್ಕ ಬರೆಯೋದಲ್ಲ. ಅದೆಲ್ಲ ನನ್ನ ಹತ್ತಿರ ನಡೆಯಲ್ಲ ಎಂದು ಅಧಿಕಾರಿಯನ್ನು ಸಚಿವ ಗೋವಿಂದ ಕಾರಜೋಳ ತರಾಟೆಗೆ ತೆಗೆದುಕೊಂಡರು. ಸರ್ಕಾರ ಬಿಡುಗಡೆ ಮಾಡಿದ ಹಣ ಇಟ್ಕೊಂಡು ಕುಳಿತುಕೊಂಡ್ರೆ ಏನು ಪ್ರಯೋಜನ, ಯೋಜನೆ ಅನುಷ್ಠಾನ ಮಾಡಿದರೆ ಅಸೆಟ್‌ ನಿರ್ಮಾಣವಾಗುತ್ತೆ ಎಂದರು. 30 ವರ್ಷದಿಂದ ಸರ್ವೀಸ್‌ ಮಾಡ್ತಿದ್ದೀರಿ, ಮಂತ್ರಿಗಳ ರಿವ್ಯೂ ಮೀಟಿಂಗ್‌ ಹೇಗಿರುತ್ತೆ ಗೊತ್ತಿರಲ್ವಾ ಎಂದು ತರಾಟೆಗೆ ತೆಗೆದುಕೊಂಡರು.

ಬ್ರಿಟಿಷರಂತೆ ಬ್ರೆಡ್‌ ಕೊಡಬೇಡಿ!: ಅಂಡಮಾನ್‌-ನಿಕೋಬಾರ್‌ ದ್ವೀಪದ ಬುಡಕಟ್ಟು ಜನರು ಬೇಟೆಯಾಡಿ, ಗೆಡ್ಡೆ ಗೆಣಸು ಕಿತ್ತು ತಿಂದು ಬದುಕುತ್ತಿದ್ದರು. ಅಲ್ಲಿಗೆ ಬ್ರಿಟಿಷರು ಬ್ರೆಡ್‌ ಕಳುಹಿಸುವ ವ್ಯವಸ್ಥೆ ಮಾಡಿದ ಮೇಲೆ ಅಲ್ಲಿನ ಬುಡಕಟ್ಟು ಜನರು ಬೇಟೆಯಾಡುವುದು, ಗೆಡ್ಡೆ ಗೆಣಸು ಕಿತ್ತು ತಿನ್ನುವುದನ್ನೇ ಬಿಟ್ಟು, ಬ್ರೆಡ್‌ ಹೊತ್ತು ತರುವ ಬ್ರಿಟಿಷರ ಬೋಟ್‌ ಕಾಯುತ್ತಾ ಕೂರುವಂತಾಯಿತು. ನಮ್ಮಲ್ಲಿನ ಬುಡಕಟ್ಟು ಜನರಿಗೂ ಅಧಿಕಾರಿಗಳು ಇಂತಹ ಸ್ಥಿತಿ ತರಬೇಡಿ. ಅವರಿಗೆ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಕಂಡುಕೊಳ್ಳಲು ನೆರವಾಗಿ ಎಂದು ಸಚಿವ ಗೋವಿಂದ ಕಾರಜೋಳ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.