ಭೂ ಒತ್ತುವರಿ ವಿರುದ್ಧ ಕ್ರಮಕ್ಕೆ ಸುತ್ತೋಲೆ
Team Udayavani, Jan 22, 2020, 3:06 AM IST
ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ತೆರವು ಹಾಗೂ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮಂಗಳವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ. ಭೂ ಒತ್ತುವರಿದಾರರ ವಿರುದ್ಧ ನಿರೀಕ್ಷಿತ ಮಟ್ಟದಲ್ಲಿ ಕ್ರಮ ಆಗಿಲ್ಲ. ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿರುವವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದರಿಂದ ಕೋಟ್ಯಂತರ ರೂ. ಮೌಲ್ಯದ ಸಾರ್ವಜನಿಕ ಜಮೀನು ಸರ್ಕಾರದ ಕೈ ತಪ್ಪಿ ಹೋಗಿವೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳಿಗೆ ಸೂತ್ತೋಲೆ ಹೊರಡಿಸಿದ್ದಾರೆ. ಜತೆಗೆ, ಒತ್ತುವರಿ ತೆರವುಗೊಳಿಸುವಲ್ಲಿ ವಿಫಲರಾಗಿರುವ ಅಧಿಕಾರಿಗಳು, ಭೂ ಕಬಳಿಕೆಗೆ ಪ್ರೇರಣೆ ನೀಡಿ ನಕಲಿ ದಾಖಲೆ ಸೃಷ್ಟಿಸುವಲ್ಲಿ ಶಾಮೀಲಾಗಿರುವ ಅಧಿಕಾರಿ -ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಸರ್ಕಾರಿ ಭೂಮಿ ಒತ್ತು ವರಿ ನಿಯಂತ್ರಣ, ಒತ್ತು ವರಿ ತೆರವು ಸಂಬಂಧ ಜಿಲ್ಲಾ ಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯ ಪಡೆ ರಚಿಸಿ ಸೂಚನೆ ನೀಡಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ ಅನ್ವಯ ಒತ್ತುವರಿದಾರರಿಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನು ಒತ್ತುವರಿ ಹಾಗೂ ನಕಲಿ ದಾಖಲೆ ಸೃಷ್ಟಿ ಅಪರಾಧಕ್ಕಾಗಿ 3 ವರ್ಷ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಹೀಗಾಗಿ, ಜಿಲ್ಲಾಧಿಕಾರಿಗಳು ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಬಾಕಿ ಇರುವ ಪ್ರಕರಣ ಹಾಗೂ ಇದುವರೆಗೂ ಸ್ವೀಕೃತ ದೂರುಗಳನ್ನು 15 ದಿನಗಳಲ್ಲಿ ಪರಾಮರ್ಶೆ ಮಾಡುವುದು.
ನಗರ ಪ್ರದೇಶ, ವಾಣಿಜ್ಯ, ಕೈಗಾರಿಕೆ ಇನ್ನಿತರ ಉದ್ದಿಮೆಗಳಿಗೆ ಅನಧಿಕೃತವಾಗಿ ಸರ್ಕಾರಿ ಜಮೀನು ಬಳಸಿದ್ದರೆ ಒತ್ತುವರಿ ಪ್ರಕರಣ ಎಂದು ಪರಿಗಣಿಸಿ ತೆರವು ಮಾಡ ಬೇಕು. ಜಿಲ್ಲಾಧಿಕಾರಿಗಳು ನಿಗದಿಪಡಿಸುವ ಗಡುವಿನ ಒಳಗೆ ಕ್ರಮ ಕೈಗೊಳ್ಳದ ಅಧಿಕಾರಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ನಕಲಿ ದಾಖಲೆ ಆಧಾರದ ಮೇಲೆ ಭೂ ಕಬಳಿಕೆ ಆಗಿದೆ ಎಂದು ಬಂದಿರುವ ದೂರು ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಬೇಕು.
ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಲು ಸಹಕಾರ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಲ್ಲಿ ತಕ್ಷಣ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ನೀಡಿರುವ ಸರ್ಕಾರಿ ಜಮೀನುಗಳನ್ನು ಪ್ರಕರಣವಾರು ಪರಾಮರ್ಶೆ ಮಾಡಿ ಗುತ್ತಿಗೆ ಷರತ್ತು ಪಾಲನೆ ಬಗ್ಗೆ ಗಮನಹರಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.