ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ


Team Udayavani, Jan 22, 2020, 4:26 PM IST

hv-tdy-1

ಹಾನಗಲ್ಲ: ಅಖೀಲ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕು ತಹಸೀಲ್ದಾರ್‌ರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಗೃಹಭಾಗ್ಯ ಯೋಜನೆಯಲ್ಲಿ ನೀಡಲಾಗುತ್ತಿರುವ 2 ಲಕ್ಷ ರೂ.ಗಳೊಂದಿಗೆ 3 ಲಕ್ಷ ರೂ.ಗಳನ್ನು ಸಾಲದ ರೂಪದಲ್ಲಿ ನೀಡಬೇಕು. ಕಾರ್ಮಿಕರಿಗೆ ಉಪಕರಣ ಖರೀದಿಗೆ ನೀಡುವ 5 ಸಾವಿರ ಸಹಾಯಧನವನ್ನು 2 ಲಕ್ಷಕ್ಕೆ ಹೆಚ್ಚಿಸಬೇಕು. ಮಾಸಿಕ ಪಿಂಚಣಿಯನ್ನು 1 ಸಾವಿರದಿಂದ 3 ಸಾವಿರಕ್ಕೇರಿಸಬೇಕು. ಕಾರ್ಮಿಕ ಆರೋಗ್ಯಭಾಗ್ಯ ಯೋಜನೆಯ ವೈದ್ಯಕೀಯ ಸಹಾಯಧನವನ್ನು 25 ಸಾವಿರಕ್ಕೆ ಹೆಚ್ಚಿಸಬೇಕು. ತಕ್ಷಣಕ್ಕೆ ಬಿಡುಗಡೆಯಾಗಬೇಕು. ಕಾರ್ಮಿಕ ಚಿಕಿತ್ಸಾಭಾಗ್ಯವನ್ನು 2 ಲಕ್ಷದಿಂದ 5 ಲಕ್ಷಕ್ಕೇರಿಸಬೇಕು. ಅಪಘಾತ ಪರಿಹಾರ ಯೋಜನೆಯಲ್ಲಿ ಮೃತಪಟ್ಟ ಕಾರ್ಮಿಕನಿಗೆ ಎಫ್‌ಐಆರ್‌ನ್ನು ಅಂತಿಮವಾಗಿ ಪರಿಗಣಿಸದೇ ಮಧ್ಯಂತರವಾಗಿ ಪರಿಗಣಿಸಬೇಕು. ಕಾರ್ಮಿಕರಿಗೆ ಸರ್ಕಾರದ ಎಲ್ಲ ಸೌಲಭ್ಯಗಳೂ ಇಲಾಖೆ ವ್ಯಾಪ್ತಿಯಲ್ಲಿ ಸಕಾಲಕ್ಕೆ ಒದಗಿಸಬೇಕು.

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಕ್ರೀಡಾಕೂಟಗಳಿಗೆ ಹತ್ತು ಸಾವಿರ ರೂ. ಸಹಾಯಧನ ನೀಡಬೇಕು. ನರೇಗಾ ಯೋಜನೆಯಲ್ಲಿ ದುಡಿಯುವ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಬಾರದು. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ನೀಡಬೇಕು. ಕಾರ್ಮಿಕರ ಸಂಘದ ಕಲ್ಯಾಣ ಮಂಡಳಿಗೆ ಸದಸ್ಯರ ಆಯ್ಕೆಯಲ್ಲಿ ನಮ್ಮನ್ನೂ ಪರಿಗಣಿಸಬೇಕು. ಉದ್ಯೋಗ ಪ್ರಮಾಣ ಪತ್ರವನ್ನುಕಾರ್ಮಿಕ ಇಲಾಖೆ ನಿರೀಕ್ಷಕರು, ಮನೆಯ ಮಾಲೀಕರು, ಗುತ್ತಿಗೆದಾರ ನೀಡುವುದನ್ನು ರದ್ದುಗೊಳಿಸಬೇಕು. ಕಾರ್ಮಿಕರ ಸಂಘದ ಕಚೇರಿಗಾಗಿ ಜಿಲ್ಲಾ ಕೇಂದ್ರದಲ್ಲಿ 10 ಗುಂಟೆ ನಿವೇಶನ ನೀಡಬೇಕು. ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿ ಭಟ್ಟಿ, ಹಮಾಲಿಗರು, ಚಿಂದಿ ಆಯುವವರು, ಮನೆ ಕೆಲಸಗಾರರನ್ನು ಕಾರ್ಮಿಕ ಕಲ್ಯಾಣ ಮಂಡಳಿಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಅಜ್ಜಪ್ಪ ಹಡಪದ, ತಾಲೂಕು ಅಧ್ಯಕ್ಷ ರವಿ ಬಾರ್ಕಿ, ಪ್ರಧಾನ ಕಾರ್ಯದರ್ಶಿ ಹೇಮಗಿರಿ ಅಡಿಗಣ್ಣನವರ, ಪದಾಧಿ ಕಾರಿಗಳಾದ ಶಿವಕುಮಾರ ಹಡಪದ, ಷಣ್ಮುಖಗೌಡ ಪಾಟೀಲ, ನಿಂಗನಗೌಡ ಪಾಟೀಲ, ಜಯನುದ್ದೀನ್‌ ಮಯಜಾವರ, ಪ್ರೇಮಾ ತಂಬುಳಿ, ಪೂರ್ಣಿಮಾ ತೊಗರಳ್ಳಿ, ಸುಭಾಸ ಬಾರ್ಕಿ, ಪುಟ್ಟಪ್ಪ ಕೋಳೂರ, ಪರಶುರಾಮ ಕುಂಟನಹೊಸಳ್ಳಿ, ಬಸನಗೌಡ ಪಾಟೀಲ, ಚಂದ್ರಕಾಂತ ಗೊದಮನಿ, ವೀರಭದ್ರಪ್ಪ ಅಪ್ಪಾಜಿ, ಗಣೇಶ ಕುಮಚಗಿ ಇತರರಿದ್ದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.