ಮನೆ ಮನೆಗೆ ತೆರಳಿ ಡೀಸಿಯಿಂದ ಮತದಾರರ ಪಟ್ಟಿ ಪರಿಶೀಲನೆ
Team Udayavani, Jan 22, 2020, 6:28 PM IST
ದೇವನಹಳ್ಳಿ : ನಾವು ಹಾಕುವ ಮತ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ನಾಗರೀಕರಲ್ಲಿ ಜಾಗೃತಿ ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸುವ ಜವಾಬ್ದಾರಿ ಯುವ ಜನರ ಮೇಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ತಾಲೂಕಿನ ಯರ್ತಿಗಾನ ಹಳ್ಳಿಯಲ್ಲಿ ಮನೆ ಮನೆಗೆ ತೆರಳಿ, ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮದ ಪ್ರತಿ ಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿರುವ ಲೋಪಗಳು ಬೂತ್ ಮಟ್ಟದ ಅಧಿ ಕಾರಿಗಳ ಕಾರ್ಯವೈಖರಿ, ನಮೂನೆ 6ರಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರಿಸಿರುವ ಯುವಕ ಮತ್ತು ಯು ವತಿಯರ ವಿಳಾಸ ಮತ್ತು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದೇವೆ. ಯಾರಾದರೂ ಸತ್ತು ಹೋಗಿದ್ದರೆ ಅಂತಹವರ ಹೆಸರನ್ನು ನಮೂನೆ 7ರ ಪಟ್ಟಿಯಿಂದ ತೆಗೆಯುವ ಕಾರ್ಯವನ್ನು ಸ್ಥಳದಲ್ಲಿಯೇ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ನಮೂನೆ 6 (ಸೇರ್ಪಡೆ), ನಮೂನೆ 7 (ತೆಗೆದು ಹಾಕಿರುವುದು) , ನಮೂನೆ 8(ತಿದ್ದು ಪಡಿ ಮಾಡುವುದು). ನಮೂನೆ 8ಎ (ವರ್ಗಾವಣೆ ) ಅರ್ಜಿಗಳನ್ನು ಸಲ್ಲಿಸಬಹುದು. ಕರಡು ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಯನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಮದ ಜನರಿಗೆ ಮತದಾನದ ಹಕ್ಕಿನ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. 18 ವರ್ಷ ತುಂಬಿದ ಯುವ ಜನರು ಮತ ಪಟ್ಟಿಗೆ ಸೇರ್ಪಡೆಯಾಗಬೇಕು. ತಮ್ಮ ಹಕ್ಕನ್ನು ಚಲಾಯಿಸದೆ, ನಿರ್ಲಕ್ಷ್ಯ ವಹಿಸುವುದು ಸಹ ದೇಶ ಅಭದ್ರತೆಗೆ ಶಕ್ತಿ ತುಂಬಿದಂತೆ ಆಗುತ್ತದೆ.ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು. ಈ ವೇಳೆಯಲ್ಲಿ ತಹಶೀಲ್ದಾರ್ ಅಜಿತ್ ಕುಮಾರ್ ರೈ, ಚುನಾವಣಾ ಶಿರಸ್ಥೆದಾರ್ ಮಂಜುನಾಥ್, ರಾಜಸ್ವ ನಿರೀಕ್ಷಕ ಚಂದ್ರಶೇಖರ, ಹಾಗೂ ಬೂತ್ ಮಟ್ಟದ ಅಧಿಕಾರಿ ಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.