ಲೆಗಸಿ ಚಿತ್ರಕ್ಕೆ ದೀಪ್ತಿ ಸತಿ ನಾಯಕಿ
ಮತ್ತೆ ಬಂದಳು "ಜಾಗ್ವಾರ್' ಚೆಲುವೆ
Team Udayavani, Jan 23, 2020, 7:05 AM IST
ನಟ ನಿಖೀಲ್ ಕುಮಾರ್ ಅಭಿನಯದ “ಜಾಗ್ವಾರ್’ ಚಿತ್ರದಲ್ಲಿ ಬೋಲ್ಡ್ ಆಗಿ ಅಭಿನಯಿಸಿ ಸಿನಿ ಪ್ರಿಯರ ಗಮನ ಸೆಳೆದಿದ್ದ ನಾಯಕ ನಟಿ ದೀಪ್ತಿ ಸತಿ, ಈಗ ಮತ್ತೂಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, “ಜಾಗ್ವಾರ್’ ಚಿತ್ರದ ಬಳಿಕ ಕನ್ನಡದ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರದ, ದೀಪ್ತಿ ಸತಿ ಈಗ “ಲೆಗಸಿ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
“ಪಂಚತಂತ್ರ’ ಖ್ಯಾತಿಯ ವಿಹಾನ್ ಗೌಡ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ದೀಪ್ತಿ ಸತಿ ನಾಯಕಿಯಾಗಿ ತೆರೆ ಮೇಲೆ ಬರುತ್ತಿದ್ದಾರೆ. ಈ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕುರುಕ್ಷೇತ್ರ’ ಚಿತ್ರಕ್ಕೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿರುವ ಎಂ. ಸುಭಾಷ್ ಚಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಲೆಗಸಿ’ ಚಿತ್ರದಲ್ಲಿ ದೀಪ್ತಿ ಸತಿ ಮತ್ತೂಂದು ಬೋಲ್ಡ್ ಆ್ಯಂಡ್ ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚಿಗಷ್ಟೇ ತನ್ನ ಮುಹೂರ್ತ ನೆರವೇರಿಸಿಕೊಂಡಿರುವ “ಲೆಗಸಿ’ ಚಿತ್ರತಂಡ ಜನವರಿ ಕೊನೆಯಿಂದ ಚಿತ್ರದ ಚಿತ್ರೀಕರಣಕ್ಕೆ ಪ್ಲಾನ್ ಹಾಕಿಕೊಂಡಿದ್ದು, ಬೆಂಗಳೂರು, ಮದ್ದೂರು, ದೊಡ್ಡಬಳ್ಳಾಪುರ, ಮಡಿಕೇರಿ, ರಾಮನಗರದ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 1990 ರಿಂದ 2019ರವರೆಗೆ ನಡೆಯುವ ಬರಹಗಾರನೊಬ್ಬನ ಜೀವನ ಹಾಗೂ ಆತನ ಮುಂದಿನ ಪೀಳಿಗೆ ಸಮಾಜವನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ಆಕ್ಷನ್, ಥ್ರಿಲ್ಲರ್ ಕಥೆಯ ಮೂಲಕ ನಿರ್ದೇಶಕರು ಹೇಳಲಿದ್ದಾರೆ. ಪ್ರೀತಿಯ ಜೊತೆ ತಂದೆ-ಮಗನ ಸೆಂಟಿಮೆಂಟ್ ಕಥೆ ಕೂಡ ಈ ಚಿತ್ರದಲ್ಲಿದೆ.
ಈ ಚಿತ್ರದಲ್ಲಿ ದೀಪ್ತಿ ಸತಿ ಅವರ ಪಾತ್ರ ಏನು? “ಲೆಗಸಿ’ಯೊಳಗೆ ಇನ್ನೂ ಏನೇನಿದೆ ಎಂಬಿತ್ಯಾದಿ ವಿವರಗಳನ್ನು ಚಿತ್ರತಂಡ ಇನ್ನೂ ಬಿಟ್ಟುಕೊಟ್ಟಿಲ್ಲ. “ಗ್ರೇಟ್ ಬ್ರೋಸ್ ಪಿಕ್ಚರ್’ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ “ಲೆಗಸಿ’ ಚಿತ್ರಕ್ಕೆ ಸುರೇಶ್ ರಾಜ್ ಸಂಗೀತ, ಸುಂದರ್ ಪಿ ಛಾಯಾಗ್ರಹಣವಿದೆ. ಒಟ್ಟಾರೆ ಸುಮಾರು ಎರಡು ವರ್ಷಗಳ ನಂತರ ಸ್ಯಾಂಡಲ್‌ವುಡ್‌ಗೆ ಕಂ ಬ್ಯಾಕ್ ಆಗುತ್ತಿರುವ ದೀಪ್ತಿ ಸತಿ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಾರಾ ಅನ್ನೋದನ್ನ ಇನ್ನು ಮುಂದೆ ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.