ಇನ್ನೂ ಪುನರಾರಂಭವಾಗದ ಇ-ಕೆವೈಸಿ ಪ್ರಕ್ರಿಯೆ

ಮುಂದುವರಿದ ಸರ್ವರ್‌ ಸಮಸ್ಯೆ

Team Udayavani, Jan 23, 2020, 4:52 AM IST

led-22

ಮಹಾನಗರ: ಸರ್ವರ್‌ ಸಮಸ್ಯೆ ಮತ್ತು ಹೆಚ್ಚುವರಿ ಸರ್ವರ್‌ ಆವಶ್ಯಕತೆಯಿಂದಾಗಿ ಸ್ಥಗಿತಗೊಂಡಿದ್ದ ಪಡಿತರ ಚೀಟಿದಾರರಿಗೆ ಇ-ಕೆವೈಸಿ (ಬೆರಳಚ್ಚು) ಪ್ರಕ್ರಿಯೆ ಸದ್ಯಕ್ಕೆ ಪುನರಾರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಜನವರಿ 20ರಂದು ಆರಂಭವಾಗಬೇಕಿತ್ತಾದರೂ ಸರ್ವರ್‌ ಸಮಸ್ಯೆ ಮುಂದುವರಿದಿರುವುದರಿಂದ ಪ್ರಕ್ರಿಯೆ ಆರಂಭಕ್ಕೆ ತೊಡಕುಂಟಾಗಿದೆ.

ಇ-ಕೆವೈಸಿ ಪ್ರಕ್ರಿಯೆ ಮಾಡಲು ಸರಕಾರವು ಜ. 31ರ ಗಡುವು ವಿಧಿಸಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸಿದ್ದರಿಂದ ಸರ್ವರ್‌ ಸಮಸ್ಯೆ ತಲೆದೋರಿ ಜ. 6ರಿಂದ ಇ-ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಳಿಕ ಜ. 10ರಿಂದ ಪುನರಾರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಹೇಳಿದ್ದರಾದರೂ ಸಮಸ್ಯೆ ಸರಿಯಾಗದ ಕಾರಣ ಜ. 20ರಿಂದ ಇ-ಕೆವೈಸಿ ಪ್ರಕ್ರಿಯೆ ನಡೆಯಲಿದೆ ಎಂದಿದ್ದರು. ಆದರೆ ಸರ್ವರ್‌ ಸಮಸ್ಯೆ ಮುಂದುವರಿದಿರುವುದರಿಂದ ಇನ್ನೂ ಪ್ರಕ್ರಿಯೆ ಪುನರಾರಂಭವಾಗಿಲ್ಲ. ರಾಜ್ಯ ಕಚೇರಿಯಿಂದ ಮಾಹಿತಿ ಬಂದ ಬಳಿಕವಷ್ಟೇ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ ಎನ್ನುತ್ತಾರೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು.

ಶೇ. 38.76ರಷ್ಟು ನಡೆದ ಬೆರಳಚ್ಚು ಪ್ರಕ್ರಿಯೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 4ರ ವರೆಗೆ ಸುಮಾರು ಶೇ. 38.76ರಷ್ಟು ಕುಟುಂಬಗಳ ಸದಸ್ಯರು ಬಯೋಮೆಟ್ರಿಕ್‌ ನೀಡಿದ್ದರು. ಒಟ್ಟು 4,30,665 ಕುಟುಂಬಗಳ ಪೈಕಿ 1,54,469 ಮಂದಿಯಷ್ಟೇ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಇದರಲ್ಲಿ 23,209 ಅಂತ್ಯೋದಯ ಕುಟುಂಬಗಳ ಪೈಕಿ 4,311 ಕುಟುಂಬ, 2,48,385 ಬಿಪಿಎಲ್‌ ಕುಟುಂಬಗಳ ಪೈಕಿ 1,08,840 ಕುಟುಂಬ ಮತ್ತು 1,59,061 ಎಪಿಎಲ್‌ ಕುಟುಂಬಗಳ ಪೈಕಿ 41,318 ಕುಟುಂಬ ಇ-ಕೆವೈಸಿ ಪ್ರಕ್ರಿಯೆಯಡಿ ಬಯೋಮೆಟ್ರಿಕ್‌ ನೀಡಿವೆ. ಮಂಗಳೂರಿನಲ್ಲಿ 8,316 ಅಂತ್ಯೋದಯ ಕುಟುಂಬಗಳ ಪೈಕಿ 1,146 ಕುಟುಂಬಗಳು, 88,185 ಬಿಪಿಎಲ್‌ ಕುಟುಂಬಗಳ ಪೈಕಿ 39,091 ಕುಟುಂಬಗಳು, 87,254 ಎಪಿಎಲ್‌ ಕುಟುಂಬಗಳ ಪೈಕಿ 21,841 ಕುಟುಂಬಗಳು ಬೆರಳಚ್ಚು ನೀಡಿದ್ದು, ಇನ್ನೂ 1,21,678 ಕುಟುಂಬಗಳು ಬೆರಳಚ್ಚು ನೀಡಲು ಬಾಕಿ ಇವೆ.

ಮುಂದಿನ ದಿನಾಂಕ ತಿಳಿಸಲಾಗುವುದು
ಜ. 20ರಂದು ಇ-ಕೆವೈಸಿ ಪ್ರಕ್ರಿಯೆ ಆರಂಭಿಸಬೇಕಿತ್ತಾದರೂ ಸರ್ವರ್‌ ಸಮಸ್ಯೆ ಮುಂದುವರಿದ ಕಾರಣ ಸಾಧ್ಯವಾಗಿಲ್ಲ. ಮುಂದೆ ಪ್ರಕ್ರಿಯೆ ಆರಂಭವಾಗುವ ದಿನಾಂಕವನ್ನು ರಾಜ್ಯ ಕಚೇರಿಯಿಂದ ಮಾಹಿತಿ ಬಂದ ಅನಂತರ ತಿಳಿಸಲಾಗುವುದು. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು.
 -ಡಾ| ಮಂಜುನಾಥನ್‌, ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.