“ಯುವಜನಾಂಗ ಸಮಾಜದ ಬೆನ್ನೆಲುಬು’

ಎಂ.ಜಿ.ಎಂ. ಕಾಲೇಜು: "ಆ್ಯಪ್‌ ನೋಟಿಫೈ ಎಂ.ಜಿ.ಎಂ' ಆ್ಯಪ್‌ ಲೋಕಾರ್ಪಣೆ

Team Udayavani, Jan 23, 2020, 12:28 AM IST

22012020ASTRO01

ಉಡುಪಿ: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನಾಂಗದ ಪಾತ್ರ ಹಿರಿದಾದುದು. ಹಿಂದಿನ ಕಾಲವು ಕೆಟ್ಟದಲ್ಲ, ಈಗಿನ ಕಾಲವು ಕೆಟ್ಟದಲ್ಲ. ಇಂದಿನ ಯಾಂತ್ರಿಕೃತ ಬದುಕಿನಲ್ಲಿ ಮೊಬೈಲ್‌ನಂತಹ ಆಧುನಿಕ ತಂತ್ರಜ್ಞಾನಗಳ ಬಳಕೆ ಅನಿವಾರ್ಯ. ಅವುಗಳನ್ನು ವಿದ್ಯಾರ್ಥಿಗಳು ಆರೋಗ್ಯಯುತವಾಗಿ ಬಳಸಿಕೊಳ್ಳಬೇಕು. ಇಂದಿನ ಯುವ ಜನಾಂಗ ಸಮಾಜದ ಬೆನ್ನೆಲುಬು ಎಂದು ನಾಗಾಲ್ಯಾಂಡಿನ ಮಾಜಿ ರಾಜ್ಯಪಾಲ ಪದ್ಮನಾಭ ಆಚಾರ್ಯ ಹೇಳಿದರು.

ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವತಿಯಿಂದ ವಿದ್ಯಾರ್ಥಿಗಳು ತಯಾರಿಸಿದ ಕಾಲೇಜಿನ ಅಧಿಕೃತ “ಆ್ಯಪ್‌ ನೋಟಿಫೈ ಎಂ.ಜಿ.ಎಂ’ ಅನ್ನು ಗುರುವಾರ ಬಿಡುಗಡೆ ಮಾಡಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಭಾರತ ದೇಶ ಬಹಳಷ್ಟು ಮುಂದು ವರಿದಿದೆ. ಮೇಕ್‌ ಇನ್‌ ಇಂಡಿಯಾವಾಗಿ ದೇಶ ಪರಿವರ್ತನೆ ಗೊಳ್ಳುತ್ತಿದೆ. ಸಾಮಾಜಿಕ ಜಾಲತಾಣ, ಡಿಜಿಟಲ್‌ ಸಾಧನಗಳ ಸದ್ಭಳಕೆಯಾಗಬೇಕು. ಶಿಕ್ಷಣ, ಆರೋಗ್ಯ ಕ್ಷೇತ್ರದ ಸುಧಾರಣೆಗೆ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದರು.

ಮಾಧವ ಪೈ ಕೊಡುಗೆ ಅಪಾರ
ಉನ್ನತ ಗುಣಮಟ್ಟದ ಶಿಕ್ಷಣ ಒದಗಿಸಿಸುವುದರೊಂದಿಗೆ ಶಿಕ್ಷಣ ರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ ಮಣಿಪಾಲ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮಾಧವ ಪೈಗಳ ಕೊಡುಗೆ ಅಪಾರ. ಸಾಮಾಜಿಕ ಮತ್ತು ಶೈಕ್ಷಣಿಕ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡುವ ಮೂಲಕ ಅವಿಭಜಿತ ದ.ಕ.ಜಿಲ್ಲೆ ರಾಷ್ಟ್ರ ಕಾರ್ಯದಲ್ಲಿ ತೊಡಗಿವೆ. ಜನರಲ್ಲಿ ಜ್ಞಾನವೂ ವೃದ್ಧಿಯಾಗಿದೆ. ಈ ಮೂಲಕ ಜಿಲ್ಲೆ ಮಹತ್ತರ ಸಾಧನೆ ಮಾಡುತ್ತಿದೆ ಎಂದರು.

ಬಾಲ್ಯದ ನೆನಪು ಮಧುರ
1949ರ ಆಸುಪಾಸಿನಲ್ಲಿ ಇದೇ ಶಿಕ್ಷಣ ಸಂಸ್ಥೆಯಲ್ಲಿ ತಾನು ವಿದ್ಯಾಭ್ಯಾಸ ಪಡೆದಿದ್ದೆ. ಕೇವಲ ಎರಡು ಕೊಠಡಿಗಳಿತ್ತು. ಮೂಲ ಸೌಕರ್ಯಗಳ ಕೊರತೆಯಿತ್ತು. ಶಿಕ್ಷಣಕ್ಕೆ ಪೂರಕ ವ್ಯವಸ್ಥೆಗಳಿರಲಿಲ್ಲ. ಹೆಚ್ಚಿನ ಶಿಕ್ಷಣಕ್ಕಾಗಿ ಮೂರು ನದಿಗಳನ್ನು ದಾಟಿ ದೂರದೂರಿಗೆ ತೆರಳಬೇಕಿತ್ತು. ಉನ್ನತ ಶಿಕ್ಷಣಕ್ಕೆ ಮುಂಬಯಿ, ಚೆನ್ನೈನಂತಹ ನಗರಗಳಿಗೆ ಅಲೆದಾಡುವ ಕಷ್ಟ ಈಗ ಇಲ್ಲ. ಎಲ್ಲವೂ ಕಾಲ ಬುಡದಲ್ಲೆ ಸಿಗುತ್ತಿದೆ. ಕಲಿತ ಶಾಲೆಯ ಬಾಲ್ಯದ ದಿನಗಳನ್ನು ನೆನೆಪಿಸಿಕೊಳ್ಳುವುದು ಮಧುರ ಅನುಭವ ಎಂದು ತಮ್ಮ ಬಾಲ್ಯದ ಕ್ಷಣಗಳನ್ನು ಹಂಚಿಕೊಂಡರು.

ನಾಗಾಲ್ಯಾಂಡ್‌ನ‌ಲ್ಲಿ
ನೈತಿಕ ಶಿಕ್ಷಣದ ಕೊರತೆ
ಭಾರತ ಶ್ರೀಮಂತವಾಗಿದೆ. ಭಾರ ತೀಯರು ಮಾತ್ರ ಬಡವರಾಗಿದ್ದಾರೆ. ಅದರಲ್ಲೂ ಕರಾವಳಿ ಮಣ್ಣಿಗೆ ವಿಶಿಷ್ಟ ಗುಣವಿದೆ. ಬುದ್ಧಿವಂತರು, ಸುಶಿಕ್ಷಿತರು, ಸುಸಂಸ್ಕೃರು, ಹೃದಯ ಶ್ರೀಮಂತಿಕೆ ಉಳ್ಳವರು ಇಲ್ಲಿದ್ದಾರೆ. ನಾಗಾಲ್ಯಾಂಡ್‌ನ‌ ಜನತೆಗೆ ನೈತಿಕ ಶಿಕ್ಷಣ ಕೊರತೆಯಿದೆ. ಹೀಗಾಗಿ ಅಲ್ಲಿ ಕ್ರಾಂತಿಕಾರಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಮಾಜಿ ಗವರ್ನರ್‌ ಕಳವಳ ವ್ಯಕ್ತಪಡಿಸಿದರು.

ಪ್ರಾಂಶುಪಾಲ ಡಾ| ಎಂ.ಜಿ ವಿಜಯ ಪ್ರಸ್ತಾವನೆಗೈದರು, ಪದವಿ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಮೇಶ್‌ ಕಾರ‌್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾಜಿ ರಾಜ್ಯಪಾಲರ ಪತ್ನಿ ಕವಿತಾ ಆಚಾರ್ಯ, ವಿದ್ಯಾರ್ಥಿಗಳು, ಉಪ ನ್ಯಾಸಕರು ಉಪಸ್ಥಿತರಿದ್ದರು. ಶ್ರೇಯಸ್‌ ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.

ಆ್ಯಪ್‌ನಲ್ಲಿ ಮಾಹಿತಿ ಲಭ್ಯ
ಕಾಲೇಜಿನ ಅಧಿಕೃತ ಆ್ಯಪ್‌ ನೋಟಿಫೈನಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಬಂಧಿಸಿದ ಸೂಚನೆ, ಮಾಹಿತಿ ಟಿಪ್ಪಣಿಗಳನ್ನು ಹಾಕಲಾಗುತ್ತದೆ. ಇದರಿಂದ ನೋಟಿಸ್‌ ಬೋರ್ಡ್‌ನಲ್ಲಿ ಸೂಚನೆಗಳನ್ನು ಅಂಟಿಸುವ ಭಾರ ತಪ್ಪುತ್ತದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ಗ‌ಳಲ್ಲೆ ಕಾಲೇಜಿನ ಸೂಚನೆ ಮಾಹಿತಿಯನ್ನು ನೇರ ಪಡೆಯಲು ಆ್ಯಪ್‌ ಸಹಕಾರಿಯಾಗುತ್ತದೆ. 17 ಅಂಶಗಳು ಆ್ಯಪ್‌ನಲ್ಲಿ ಲಭ್ಯವಾಗಲಿದೆ.

ಯೋಜನೆಯನ್ನು ಜನರಿಗೆ ತಲುಪಿಸಿ
ವಿದ್ಯಾರ್ಥಿಗಳು ಶಿಕ್ಷಣ ಪಡೆಯುದರ ಜತೆಗೆ ಸೇವಾ ಮನೋಭಾವನೆ, ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಳ್ಳಬೇಕು. ಪ್ರಧಾನಿಯವರು ಬಡವರ ಸಶಕ್ತೀಕರಣಕ್ಕೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಒಬ್ಬ ವಿದ್ಯಾರ್ಥಿ ಸರಕಾರದ ಯೋಜನೆಗಳನ್ನು 5 ಮಂದಿಗೆ ತಲುಪಿಸಿದಲ್ಲಿ ಯೋಜನೆಗಳು ಸಾಕಾರ ಪಡೆದುಕೊಂಡು ಸಮಾಜ ಸುಧಾರಣೆ ಸಾಧ್ಯವಾಗುತ್ತದೆ ಪದ್ಮನಾಭ ಆಚಾರ್ಯ ಎಂದರು.

ಟಾಪ್ ನ್ಯೂಸ್

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.