ವಾರಾಹಿ ಕುಡಿಯುವ ನೀರು ಯೋಜನೆ ಶೀಘ್ರ ಪೂರ್ಣಗೊಳಿಸಿ: ಎಸ್.ಎಲ್. ಧರ್ಮೇಗೌಡ
Team Udayavani, Jan 23, 2020, 7:06 AM IST
ಸಾಂದರ್ಭಿಕ ಚಿತ್ರ
ಉಡುಪಿ: ವಾರಾಹಿಯಿಂದ ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಜನತೆಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಮತ್ತು ವಿಧಾನ ಪರಿಷತ್‌ನ ಅರ್ಜಿ ಸಮಿತಿಯ ಅಧ್ಯಕ್ಷ ಎಸ್.ಎಲ್. ಧರ್ಮೇಗೌಡ ತಿಳಿಸಿದರು.
ಜಿಲ್ಲೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಪರಿಷತ್‌ನ ಅರ್ಜಿ ಸಮಿತಿಯಲ್ಲಿ ದಾಖಲಾಗಿ ರುವ ಅರ್ಜಿಯ ವಿಚಾರಣೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಅನಂತರ ಸಮಿತಿಯ ಸದಸ್ಯರೊಂದಿಗೆ ಯೋಜನೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಪ್ರಸ್ತಾವಿಸಿದ್ದ ಯೋಜನೆಯಲ್ಲಿ, ವಾರಾಹಿಯಿಂದ ನೀರನ್ನು ಬಜೆ ಜಲಾಶಯಕ್ಕೆ ತಂದು ಶುದ್ಧೀಕರಿಸಿ ಉಡುಪಿ ನಗರಕ್ಕೆ ಕುಡಿಯುವ ನೀರು ಒದಗಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಆ ವಿಧಾನದಲ್ಲಿ ನೀರನ್ನು ತರುವುದರಿಂದ ಮಾರ್ಗಮಧ್ಯೆ ಇರುವ ಗ್ರಾಮಗಳಿಗೆ ಕುಡಿಯುವ ನೀರು ನೀಡಲು ಸಾಧ್ಯವಿಲ್ಲದಿರುವುದನ್ನು ಮನಗಂಡ ಸಮಿತಿಯು, ಹಾಲಾಡಿ ಬಳಿ ನೀರನ್ನು ಶುದ್ಧೀಕರಿಸಿ, ಬಜೆವರೆಗಿನ ಮಾರ್ಗ ಮಧ್ಯದ 13 ಗ್ರಾಮ ಪಂಚಾಯತ್‌ಗಳ 23 ಗ್ರಾಮಗಳಿಗೆ ಹಾಗೂ ಮೇಲ್ಭಾಗದ ಹಾಲಾಡಿ ಮತ್ತು ಶಂಕರನಾರಾಯಣ ಗ್ರಾಮಗಳಿಗೂ ಕುಡಿಯುವ ನೀರು ಒದಗಿಸುವ ರೀತಿಯಲ್ಲಿ ಯೋಜನೆ ಅನುಷ್ಠಾನಗೊಳಿಸಲು ಮತ್ತು ಈ ಗ್ರಾಮಗಳ ವ್ಯಾಪ್ತಿಯಲ್ಲಿ ಪೈಪ್‌ಲೈನ್ ಕಾಮಗಾರಿ ಮುಗಿದ ಬಳಿಕವೇ ರಸ್ತೆ ನಿರ್ಮಾಣ ಮಾಡುವಂತೆ ಸೂಚಿಸಿರುವುದಾಗಿ ತಿಳಿಸಿದರು.
50 ವರ್ಷ ಪ್ರಯೋಜನ ದೊರೆಯಲಿ
300 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾರಾಹಿ ಯೋಜನೆಯ ಕಾಮಗಾರಿಯಲ್ಲಿ ಉನ್ನತ ಗುಣ ಮಟ್ಟದ ಯಂತ್ರೋಪಕರಣಗಳನ್ನು ಬಳಸಿ, ಯಾವುದೇ ಅಡ್ಡಿಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಿ ಕನಿಷ್ಠ 50 ವರ್ಷಗಳ ವರೆಗೆ ಉಡುಪಿಯ ಜನತೆಗೆ ಇದರ ಪ್ರಯೋಜನ ದೊರೆಯುವಂತೆ ಕಾಮಗಾರಿ ಅನುಷ್ಠಾನಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಕಾಮಗಾರಿಯ ಪ್ರಗತಿ ಬಗ್ಗೆ ಪ್ರತಿ 3 ತಿಂಗಳಿಗೊಮ್ಮೆ ಸಮಿತಿಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದ ಅವರು ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 2022ನೇ ಸಾಲಿನೊಳಗೆ ಶುದ್ದ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ಸಮಿತಿಗೆ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿನ ಜಲ ಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಬಾಕಿ ಇರುವ ನೀರಾವರಿ ಯೋಜನೆಗಳನ್ನೂ ಸಹ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆಯಿಂದ ಉಡುಪಿ ನಗರಕ್ಕೆ 24ಗಿ7 ಕುಡಿಯುವ ನೀರು ಸೌಲಭ್ಯ ದೊರೆಯಲಿದ್ದು, ಯೋಜನೆಯ ಅನುಷ್ಠಾನದಲ್ಲಿದ್ದ ಗೊಂದಲ ಗಳನ್ನು ಬಗೆಹರಿಸಿ, ಕಾಮಗಾರಿ ತ್ವರಿತವಾಗಿ, ಅವಧಿಯೊಳಗೆ ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನ ಪರಿಷತ್‌ನ ಅರ್ಜಿ ಸಮಿತಿಯ ಸದಸ್ಯರಾದ ಶಾಸಕ ಎಸ್.ವಿ. ಸಂಕನೂರ್, ಮರಿ ತಿಬ್ಬೇಗೌಡ , ಪ್ರಕಾಶ್ ರಾಥೋಡ್, ರಘುನಾಥ್ ಮಲ್ಕಾಪುರ, ಪಿ.ಆರ್. ರಮೇಶ್, ಮೋಹನ್ ಕೊಂಡಾಜಿ, ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ವಾರಾಹಿ, ನೀರಾವರಿ , ನಗರಾಭಿವೃದ್ಧಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.