ಆರ್ ಎಸ್ ಎಸ್, ಬಜರಂಗದಳ ನಿಷೇಧ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಬೊಮ್ಮಾಯಿ ಹೇಳಿಕೆ
Team Udayavani, Jan 23, 2020, 2:06 PM IST
ದಾವಣಗೆರೆ: ರಾಜ್ಯದಲ್ಲಿ ಆರ್ ಎಸ್ ಎಸ್ ಮತ್ತು ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಈ ಸಂಘಗಳು ದೇಶಭಕ್ತ ಸಂಘಟನೆಗಳು. ನೆರೆ ಪರಿಹಾರ ಸೇರಿದಂತೆ ಹಲವು ಒಳ್ಳೆಯ ಕೆಲಸ ಮಾಡಿವೆ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಏನು ಹೇಳುತ್ತಾರೊ ಅವರಿಗೆ ಗೊತ್ತಿರುವುದಿಲ್ಲ. ಹೆಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ವಿಚಾರಣೆ ವಿಚಾರವಾಗಿ ಮಾತನಾಡಿದ ಅವರು, ಆತ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ. ಈಗಾಗಲೇ ಮಂಗಳೂರು ಕಮಿಷನರ್ ಡಾ. ಹರ್ಷ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ಎಲ್ಲಾ ವಿಚಾರಗಳನ್ನು ಹೇಳಿದ್ದಾರೆ. ಪೊಲೀಸರ ತನಿಖೆ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದರು.
ಮೌಢ್ಯ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರದಲ್ಲಿ ಗೊಂದಲ ಇತ್ತು. ಈಗ ಸರಿಯಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.