ಸಂಚಾರ ನಿಯಮ ಪಾಲಿಸುವಂತೆ ಸಂಬಂಧಿಕರಿಗೆ ಪತ್ರ
31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಶಾಲಾ ವಿದ್ಯಾರ್ಥಿಗಳಿಂದ ವಿನೂತನ ಕಾರ್ಯಕ್ರಮ
Team Udayavani, Jan 23, 2020, 5:38 PM IST
ದೇವನಹಳ್ಳಿ: ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಅಪಘಾತ ತಡೆಯಲು ಸಾಧ್ಯ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ
ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಚಂದ್ರಶೇಖರ್ ತಿಳಿಸಿದರು.
ನಗರದ ಹೊಸ ಕುರುಬರ ಕುಂಟೆ ರಸ್ತೆಯಲ್ಲಿರುವ ಎಸ್‌ಎಲ್‌ಎಸ್ ಶಾಲಾ ಆವರಣದಲ್ಲಿ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸ್ ಠಾಣೆ, ಎಸ್‌ಎಲ್‌ಎಸ್ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ 31 ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಸಾಪ್ತಾಹ ಅಂಗವಾಗಿ ಶಾಲಾ ಮಕ್ಕಳಿಂದ ತಮ್ಮ ಸಂಬಂಧಕರಿಗೆ ಪತ್ರ ಬರೆಯುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದಲ್ಲಿ ಏನಾದರೂ ಬದಲಾವಣೆ ಕಾಣ ಬೇಕಾದರೆ ಯುವಕರಿಂದ ಹಾಗೂ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ. ಪ್ರತಿ ವರ್ಷ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ವಾಹನ ಚಾಲಕರು ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು. ಮೊಬೈಲ್ ನಲ್ಲಿ ಮಾತನಾಡುತ್ತ ಚಾಲನೆ ಮಾಡಬಾರದು. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತದೆ. ಚಾಲಕರು ತೋರುವ ಅಜಾಗೃತೆಗೆ ಅಮಾಯಕರು ಬಲಿಯಾಗಬೇಕಾಗುತ್ತದೆ. ಯಾವುದೇ
ಸಂದರ್ಭದಲ್ಲಿ ಅಪಘಾತಗಳು ಸಂಭವಿಸಿದಾಗ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಪಘಾತಗಳ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವ ಸಾರ್ವಜನಿಕರನ್ನು ಹೆಚ್ಚಿನ ವಿಚಾರಣೆ ಮಾಡುವಂತಿಲ್ಲ. ಇದರಿಂದ ಸಾರ್ವಜನಿಕರು ಭಯ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಬಾರದು ಎಂದು ವಿವರಿಸಿದರು.
ಎಸ್‌ಎಲ್ ಎಸ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಡಿ.ಎಸ್ ಧನಂಜಯ ಮಾತನಾಡಿ,
ಶಾಲೆಯ ಸುಮಾರು 800 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಾಹನ ಹೊಂದಿರುವ ತಮ್ಮ ನೆಂಟರಿಷ್ಟರಿಗೆ ರಸ್ತೆ ಸಂಚಾರ ನಿಯಮ ಪಾಲಿಸುವಂತೆ ಅಂಚೆ ಕಾರ್ಡ್ನಲ್ಲಿ ಪತ್ರ ಬರೆದು ಅಂಚೆಯ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಉತ್ತಮವಾಗಿದೆ. ಅಜಾಗೃಕತೆ ಚಾಲನೆಯು ಜೀವ ಹಾನಿಗೆ ಕಾರಣವಾಗುತ್ತದೆ. ಚಾಲಕರು ಯಾವುದೇ ರೀತಿ ವಾಹನ ಚಲಾಯಿಸುವಾಗ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಪ್ರತಿಯೊಬ್ಬರೂ ಜಾಗರೂಕರಾಗಿ ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಧನಂಜಯ, ಹಾಗೂ ಪೋಲೀಸ್ ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.