“ಧಾರ್ಮಿಕ ಕ್ಷೇತ್ರಗಳು ಸಂಸ್ಕೃತಿಯ ಪ್ರತೀಕ’
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಬ್ರಹ್ಮಕಲಶೋತ್ಸವ ಸಂಭ್ರಮ
Team Udayavani, Jan 23, 2020, 6:06 PM IST
ಕಟೀಲು : ಧಾರ್ಮಿಕ ಕ್ಷೇತ್ರಗಳು ನಾಡಿನ ಸಂಸ್ಕೃತಿಯ ಪ್ರತೀಕ ದಂತಿದ್ದು ಅವುಗಳ
ಪರ್ವಕಾಲಗಳು ನಿರಂತರವಾಗಿ ನಡೆಯುತ್ತಿರಬೇಕು. ಇದರಿಂದ ಧಾರ್ಮಿಕ ಜಾಗೃತಿ ಮೂಡಲು ಸಹಕಾರಿ ಎಂದು ಮೈಸೂರಿನ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ
ಒಡೆಯರ್ ಹೇಳಿದರು.
ಜ. 22ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಭ್ರಾಮರೀ ಸಭಾಮಂಟಪದಲ್ಲಿ ಉಗ್ರಾಣ ಮುಹೂರ್ತ, ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದಿನ ರಾಜ ಪರಂಪರೆಯ ಕಾಲಖಖದಲ್ಲಿಯೂ ಕಟೀಲು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿ ಧಾರ್ಮಿಕ
ಕೈಂಕರ್ಯಕ್ಕೆ ಒತ್ತು ಕೊಡುವ ಕೆಲಸ ಮಾಡಲಾಗಿದೆ. ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಮುಕ್ತ ಪ್ರದೇಶ ಮಾಡಿರು ವುದು ಹೆಮ್ಮೆಯ ಹಾಗೂ ಇತರ ಕಡೆಗಳಿಗೂ ಮಾದರಿಯಾಗಿದೆ ಎಂದರು.
ನಾವು ದೇಶೀ ತಳಿ ಹಾಗೂ ದೇಶೀಯ ಅಕ್ಕಿ, ಬಟ್ಟೆ ಮುಂತಾದುಕ್ಕೆ ಹೆಚ್ಚಿನ ಮಹತ್ವ ನೀಡಿ ನಮ್ಮ ದೇಶಿಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.
ಗುರುಪುರ ವಜ್ರ ದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಾರ್ಕಳ ಬಲ್ಯೊಟ್ಟು ಶ್ರೀ
ವಿಖ್ಯಾತಾನಂದ ಸ್ವಾಮೀಜಿ, ಕೇಮಾರು ಸಾಂದೀಪನೀ ಸಾಧನಾಶ್ರಮದ ಶ್ರೀ ಈಶ ವಿಟ್ಠಲದಾಸ ಸ್ವಾಮೀಜಿ ಆಶೀರ್ವವಚನಗೈದರು. ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು, ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿಯ ಅಧ್ಯಕ್ಷ ಸನತ್‌ಕುಮಾರ್ ಶೆಟ್ಟಿ, ಎಲ್. ಸುಬ್ರಹ್ಮಣ್ಯ ಮೈಸೂರು, ಆನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದ ಆನುವಂಶಿಕ ಮೊಕ್ತೇಸರ ವಾಸುದೇವ ಶಿಬರಾಯ, ಶಿಬರೂರು ಗುತ್ತು ಗುತ್ತಿನಾರ್ ಉಮೇಶ್ ಎನ್. ಶೆಟ್ಟಿ, ಅತ್ತೂರುಬೈಲು ಮಹಾಗಣಪತಿ ಮಂದಿರದ ವೆಂಕಟರಾಜ ಉಡುಪ,
ಶಂಭು ಮುಕ್ಕಾಲ್ದಿ ಅತ್ತೂರು ಭಂಡಾರಮನೆ, ವೇದವ್ಯಾಸ ಉಡುಪ ದೇವಸ್ಯ ಮಠ ಕೊಡೆ
ತ್ತೂರು, ಜಯರಾಮ ಮುಕ್ಕಾಲ್ದಿ ಕೊಡೆ ತ್ತೂರು, ನಿತಿನ್ ತಿಮ್ಮ ಕಾವ ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನ ಉಪಸ್ಥಿತ ರಿದ್ದರು. ಅರ್ಚಕ ಶ್ರೀಹರಿ ನಾರಾ ಯಣ ದಾಸ ಆಸ್ರಣ್ಣ ಸ್ವಾಗತಿಸಿದರು. ಡಾ| ಸೋಂದಾ ಭಾಸ್ಕರ ಭಟ್ ನಿರೂಪಿಸಿದರು. ಉಪನ್ಯಾಸಕ
ದಯಾನಂದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.