ವರ್ಲ್ಡ್ ಎಕನಾಮಿಕ್ ಫೋರಂ ಗೋಷ್ಠಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Team Udayavani, Jan 23, 2020, 7:36 PM IST
ದಾವೊಸ್ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India ” ಎಂಬ ಗೋಷ್ಠಿಯಲ್ಲಿ ಭಾಗವಹಿಸಿ ಗಮನ ಸೆಳೆದರು.
ಸಂವಾದ ಕಾರ್ಯಕ್ರಮದ ಅಂತ್ಯದಲ್ಲಿ ದೇಶದ ಬೆಳವಣಿಗೆಯಲ್ಲಿ ರಾಜ್ಯಗಳ ಪಾತ್ರದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲ ಆರ್ಥಿಕ ಚಟುವಟಿಕೆಗಳೂ ರಾಜ್ಯಗಳಲ್ಲಿ ನಡೆಯುವುದರಿಂದ, ದೇಶದ ಆರ್ಥಿಕತೆಯ ಬೆಳವಣಿಗೆಗೆ ರಾಜ್ಯಗಳ ಬೆಳವಣಿಗೆ ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಕನಸನ್ನು ಸಾಕಾರಗೊಳಿಸಲು ರಾಜ್ಯಗಳು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದು ತಿಳಿಸಿದರು.
“ನನ್ನ ರಾಜ್ಯ ಕರ್ನಾಟಕ 250 ಬಿಲಿಯನ್ ಡಾಲರ್ ಜಿಡಿಪಿಯನ್ನು ಹೊಂದಿದ್ದು, ಶೇ. 9 ರ ಬೆಳವಣಿಗೆ ದರ ಹೊಂದಿದೆ. ಈ ಸಮಾವೇಶದಲ್ಲಿ ನಾವು ಹೂಡಿಕೆದಾರರು ಮತ್ತು ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದ್ದೇವೆ. ಇದಕ್ಕೆ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸವಿದೆ” ಎಂದು ತಿಳಿಸಿದರು.
ಹೂಡಿಕೆದಾರರೂ ಸಹ ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಆಶಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟ ಅವರು, ಸಂವಾದದ ಕುರಿತು ಅಭಿಪ್ರಾಯ ತಿಳಿಸಲು ಅವಕಾಶ ದೊರೆತುದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಪಿಯುಷ್ ಗೋಯಲ್ ವಿಷಯ ಮಂಡಿಸಿ, ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.