ಇನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲೇ ಗಣರಾಜ್ಯ ದಿನದ ಪುಷ್ಪನಮನ
ಅಮರ್ ಜವಾನ್ ಜ್ಯೋತಿಯಲ್ಲಿ ನಡೆಯಲ್ಲ ಈ ಪ್ರಕ್ರಿಯೆ;ಇದೇ ಮೊದಲ ಬಾರಿಗೆ ಸಂಪ್ರದಾಯ ಮುರಿಯಲಿರುವ ಪ್ರಧಾನಿ
Team Udayavani, Jan 23, 2020, 8:06 PM IST
ನವದೆಹಲಿ:ಪ್ರತಿ ವರ್ಷದ ಸಂಪ್ರದಾಯವನ್ನು ಮುರಿದು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಗಣರಾಜ್ಯ ದಿನದ ಪರೇಡ್ ಆರಂಭವಾಗುವ ಮುನ್ನ ಅಮರ್‌ಜವಾನ್ ಜ್ಯೋತಿಯ ಬದಲಿಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಪುಷ್ಪನಮನ ಸಲ್ಲಿಸಲಿದ್ದಾರೆ. ಇವರಿಗೆ ರಕ್ಷಣಾ ಪಡೆಗಳ ಮುಖ್ಯಸ್ಥರು ಹಾಗೂ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರು ಸಾಥ್ ನೀಡಲಿದ್ದಾರೆ.
ಹೀಗೆಂದು ಗಣರಾಜ್ಯ ದಿನದ ಪರೇಡ್ ಕಮಾಂಡರ್ ಮೇಜರ್ ಜನರಲ್ ಅಲೋಕ್ ಕಕ್ಕರ್ ತಿಳಿಸಿದ್ದಾರೆ. ಈವರೆಗೆ ಇದ್ದ ಸಂಪ್ರದಾಯದ ಪ್ರಕಾರ, ಪ್ರಧಾನಿಯು ಗಣರಾಜ್ಯ ದಿನದಂದು ಬೆಳಗ್ಗೆ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸುತ್ತಿದ್ದರು. ಆದರೆ, ಇನ್ನು ಮುಂದೆ ಅಮರ್ ಜವಾನ್‌ನಲ್ಲಿ ಈ ಪ್ರಕ್ರಿಯೆ ನಡೆಯುವುದಿಲ್ಲ. ಬದಲಿಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲೇ ಹುತಾತ್ಮರಿಗೆ ನಮನ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪಾಕಿಸ್ತಾನೀಯರ ಉದ್ಧಟತನ:
ಗಣರಾಜ್ಯ ದಿನದಂದೇ ಲಂಡನ್‌ನಲ್ಲಿ ಭಾರತದ ಸಂವಿಧಾನಕ್ಕೆ ಬೆಂಕಿ ಹಚ್ಚಲು ಪಾಕಿಸ್ತಾನದ ಗುಂಪೊಂದು ನಿರ್ಧರಿಸಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಯುಕೆ ಗೃಹ ಸಚಿವೆ ಪ್ರೀತಿ ಪಟೇಲ್‌ಗೆ ಕರೆ ಮಾಡಿ ಕಳವಳ ವ್ಯಕ್ತಪಡಿಸಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಭಾರತೀಯ ಸಮುದಾಯದ ಹಲವರು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.