ವಿಧಾನ ಪರಿಷತ್‌ನ ಭರವಸೆಗಳ ಸಮಿತಿ ಪ್ರವಾಸಿ ತಾಣಗಳಿಗೆ ಭೇಟಿ

Team Udayavani, Jan 24, 2020, 3:12 PM IST

bk-tdy-1

ಬಾಗಲಕೋಟೆ: ರಾಜ್ಯ ಸರ್ಕಾರ ಅಧಿವೇಶನದ ವೇಳೆ ಚುಕ್ಕೆ ಗುರುತಿಲ್ಲದ ಪ್ರಶ್ನೆಯಡಿ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿ ಕುರಿತು ನೀಡಿದ್ದ ಭರವಸೆಗಳ ಕುರಿತು ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿ ಗುರುವಾರ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ತೆರಳಿ ಪರಿಶೀಲನೆ ನಡೆಸಿತು.

ಸಮಿತಿ ಸದಸ್ಯರೂ ಆಗಿರುವ ವಿಧಾನ ಪರಿಷತ್‌ ಸದಸ್ಯರಾದ ಕೆ.ಸಿ. ಕೊಂಡಯ್ಯ, ಬಸವರಾಜ ಹೊರಟ್ಟಿ, ಕೆ.ಟಿ. ಶ್ರೀಕಂಠೇಗೌಡ, ಎಂ.ಎ. ಗೋಪಾಲಸ್ವಾಮಿ ಹಾಗೂ ಪ್ರವಾಸೋದ್ಯಮ ಇಲಾಖೆ, ವಿಧಾನ ಪರಿಷತ್‌ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳನ್ನು ವೀಕ್ಷಿಸಿದರು.

ಮೊದಲಿಗೆ ಬಾದಾಮಿಯ ಗುಹಾಂತರ ದೇವಾಲಯಗಳಿಗೆ ಭೇಟಿ ನೀಡಿ ವೀಕ್ಷಿಸಿ, ಅಲ್ಲಿಂದ ಬನಶಂಕರಿಗೆ ತೆರಳಿ ಬನಶಂಕರಿದೇವಿ ದರ್ಶನ ಪಡೆದರು. ಬಳಿಕ ಶಿವಯೋಗ ಮಂದಿರಕ್ಕೆ ತೆರಳಿ ಶ್ರೀ ಹಾನಗಲ್‌ ಕುಮಾರ ಶಿವಯೋಗಿಗಳ ಗದ್ದುಗೆ ದರ್ಶನ ಪಡೆದು ಅಭಿವೃದ್ಧಿ ಕಾರ್ಯಗಳ ಮಾಹಿತಿ ಪಡೆದರು.

ದಕ್ಷಿಣಕಾಶಿ ಮಹಾಕೂಟಕ್ಕೂ ಭೇಟಿ ನೀಡಿದ ಸಮಿತಿ ಸದಸ್ಯರು ಮಹಾಕೂಟೇಶ್ವರ ದೇವಸ್ಥಾನ, ವರ್ಷದ 12 ತಿಂಗಳೂ ನೀರಿನಿಂದ ತುಂಬಿಕೊಂಡು ಕಂಗೊಳಿಸುವ ಹೊಂಡ ವೀಕ್ಷಿಸಿದರು.

ಬಳಿಕ ಬಾದಾಮಿ ಚಾಲುಕ್ಯರ ಪಟ್ಟಾಧಿಕಾರ ಸ್ಥಳ, ವಿಶ್ವ ಪಾರಂಪರಿಕ ತಾಣ ಪಟ್ಟದಕಲ್ಲುಗೆ ತೆರಳಿ, ಅಲ್ಲಿನ 6, 7 ಹಾಗೂ 9ನೇ ಶತಮಾನದಲ್ಲಿ ನಿರ್ಮಾಣಗೊಂಡ ದೇವಾಲಯಗಳನ್ನು ವೀಕ್ಷಿಸಿದರು. ವಿಶ್ವ ಪಾರಂಪರಿಕತಾಣದಲ್ಲಿ ಸರ್ಕಾರ ಕೈಗೊಂಡ, ಈ ಹಿಂದೆ ನೀಡಿರುವ ಭರವಸೆಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲಿಂದ ಐಹೊಳೆಗೆ ಆಗಮಿಸಿದ ಸಮಿತಿ ದುರ್ಗಾ ದೇವಾಲಯ ಸಹಿತ ಎಲ್ಲ ಪಾರಂಪರಿಕ ಕಟ್ಟಡಗಳನ್ನು ವೀಕ್ಷಿಸಿದರು.

ಪ್ರವಾಸೋದ್ಯಮ ಇಲಾಖೆಯ ಆಯುಕ್ತ ನವೀನಕುಮಾರ, ವಿಧಾನ ಪರಿಷತ್ತಿನ ಸಚಿವಾಲಯದ ಕಾರ್ಯದರ್ಶಿ ಕೆ.ಆರ್‌.ಮಹಾಲಕ್ಷ್ಮೀ, ಬಾದಾಮಿ ತಹಶೀಲ್ದಾರ್‌ ಸುಭಾಸ ಇಂಗಳೆ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮೈಬೂಬಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಂ.ಎನ್‌. ಮೇಲಿನಮನಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ಪ್ರವಾಸೋದ್ಯಮ ಇಲಾಖೆಯ ಅನೀಲಕುಮಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.