ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ಫೋನ್
Team Udayavani, Jan 24, 2020, 3:22 PM IST
ಚಿಕ್ಕೋಡಿ: ಅಂಗನವಾಡಿ ಕೇಂದ್ರಗಳ ಮಕ್ಕಳ ದಾಖಲಾತಿ, ಹಾಜರಾತಿ, ವಿವರಗಳನ್ನು ದಾಖಲಿಸಲು ಫೆಬ್ರುವರಿ ಮೊದಲ ವಾರದಲ್ಲಿ ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ವಿತರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿ ಮನೆಗೆ ಇಲಾಖೆಯ ಯೋಜನೆಗಳನ್ನು ಮುಟ್ಟಿಸುವ ಕಾರ್ಯಗಳನ್ನು ಮಾಡಲಾಗುತ್ತಿದ್ದು, ನನ್ನ ಜವಾಬ್ದಾರಿ ನನ್ನ ಮನೆ ಅಷ್ಟೇ ಅಲ್ಲದೇ ಇಡೀ ರಾಜ್ಯದಲ್ಲಿರುವ ಪ್ರತಿ ಮನೆಯೂ ನನ್ನ ಕುಟುಂಬವೆಂದು ತಿಳಿದುಕೊಂಡು ಎಲ್ಲರೂ ಸುಖ-ಸಮಾಧಾನದಿಂದ ಇರಬೇಕೆಂದು ಬಯಸುತ್ತೇವೆ.
ಸರ್ಕಾರದ ಯೋಜನೆಗಳನ್ನು ನಿಮ್ಮ ಮನೆಗೆ ಮುಟ್ಟಿಸುವ ಕಾರ್ಯವನ್ನು ಎಲ್ಲರೂ ಕೂಡಿ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮೇಲ್ವಿಚಾರಕಿಯರು ಧೈರ್ಯದಿಂದ ಕೆಲಸ ಮಾಡಬೇಕು ಎಂದರು. ತಾಯಿ ಎರಡು ಪಟ್ಟು ಆಹಾರ ಸೇವಿಸಿದರೆ ಹೊಟ್ಟೆಯಲ್ಲಿ ಮಗುವಿಗೂ ಅದರ ಅಂಶ ದೊರೆಯುತ್ತದೆ. ತರಕಾರಿ ಸೊಪ್ಪು, ಹಣ್ಣು, ಮೊಳಕೆ ಕಾಳುಗಳನ್ನು ತಿನ್ನಬೇಕು. ಇದರಿಂದ ಪೌಷ್ಟಿಕ ಆಹಾರ ದೇಹಕ್ಕೆ ದೊರೆಯುತ್ತದೆ. ಮಗು ಆರೋಗ್ಯವಾಗಿಬೆಳೆಯುತ್ತದೆ. ಪೌಷ್ಟಿಕಾಂಶದ ಕೊರತೆಯಿಂದ ಮಗು ಜನಿಸುವ ಸಮಯದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇದನ್ನು ನಿವಾರಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರು ಇದರ ಸದುಪಯೋಗಪಡೆದುಕೊಳ್ಳಬೇಕು. ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ 6000 ರೂ ನೀಡುವ ಕೆಲಸ ರಾಜ್ಯ ಸರ್ಕಾರ ಮಾಡಿದೆ ಎಂದರು.
ನಂತರ ಶಿವಮೊಗ್ಗ ಸಮನ್ವಯ ಟ್ರಸ್ಟ್ ಕಲಾತಂಡದಿಂದ ಪೋಷಣ ಅಭಿಯಾನ,ಬಾಲ್ಯವಿವಾಹ ಬೇಟಿ ಬಚಾವೋ ಬೇಟಿ ಪಢಾವೋ ಹಾಗೂ ಮಾತೃವಂದನಾ ಯೋಜನೆ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಉಪನಿರ್ದೇಶಕರಾದ ಬಸವರಾಜ ವರವಟ್ಟಿ, ಜ್ಯೋತಿ ಸಂಸ್ಥೆಯ ನಿರ್ದೇಶಕರಾದ ಕಲ್ಲಪ್ಪ ಜಾಧವ, ಆಶಾಜ್ಯೋತಿ ವಿಶೇಷ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಸಾವಿತ್ರಿ ಗುಗ್ಗರಿ, ಮಂಜುಶ್ರೀ ಕಟ್ಟಿಕರ, ಶಿವಮೊಗ್ಗ ಬೀದಿನಾಟಕ ಮುಖ್ಯಸ್ಥರಾದ ಮಂಜುಳಾ ಹಿರೇಮಠ, ಹಾಗೂ ಚಿಕ್ಕೋಡಿ ನಿಪ್ಪಾಣಿ ವಲಯದ ಎಲ್ಲಾ ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.