ಸಭೆಗೆ ಸಮರ್ಪಕ ಮಾಹಿತಿ ತರಬೇಕು

ಅಧಿಕಾರಿಗಳಿಗೆ ಜಿಪಂ ಶಿಕ್ಷಣ-ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್‌ ಸೂಚನೆ

Team Udayavani, Jan 24, 2020, 3:45 PM IST

24-Jnauary-18

ಚಿಕ್ಕಮಗಳೂರು: ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಜೊತೆಗೆ ಸಭೆಗಳಿಗೆ ಹಾಜರಾಗುವಾಗ ಸಂಬಂಧಪಟ್ಟ ಇಲಾಖೆಯ ಸರಿಯಾದ ಮಾಹಿತಿ ತರಬೇಕು ಎಂದು ಜಿಲ್ಲಾ ಪಂಚಾಯತ್‌ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್‌ ಸೂಚನೆ ನೀಡಿದರು.

ಗುರುವಾರ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಜೊತೆಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿಯನ್ನು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ
ಪಡೆಯುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಶ್ರಮ ವಹಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ರಜೆ ನೀಡದೆ ಪರೀಕ್ಷಾ ಪೂರ್ವ ವಿಶೇಷ ತರಗತಿಗಳನ್ನು ನೀಡಬೇಕೆಂದು ಸೂಚಿಸಿದರು.

ಆರೋಗ್ಯ ಇಲಾಖೆ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಇದೇ ರೀತಿ ಎಲ್ಲಾ ಇಲಾಖೆಯವರು ತಮ್ಮ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ರಾಮಸ್ವಾಮಿ ಶೆಟ್ಟಿಗದ್ದೆ ಮಾತನಾಡಿ, ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾಲೂಕು ಕೇಂದ್ರಗಳಲ್ಲೂ ಸಹ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಓಪನ್‌ ಜಿಮ್‌ ಸಾಮಗ್ರಿಗಳನ್ನು ನೀಡಬೇಕು. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಯಲು ರಂಗ ಮಂದಿರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಅವರಿಗೆ ಮನವಿ ನೀಡಲಾಗುವುದು. ಇಲಾಖೆಯವರು ಸಹ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ತಿಳಿಸಿದರು.

ಕೊಪ್ಪದಲ್ಲಿ ಸರ್ಕಾರಿ ನೌಕರನೊಬ್ಬ ಅವರ ಹೆಂಡತಿ ಹೆಸರಿನಲ್ಲಿ ಒಂದೇ ಸಂಖ್ಯೆಯ ವಾಹನವನ್ನು ಮೆಸ್ಕಾಂ ಮತ್ತು ಆರೋಗ್ಯ ಇಲಾಖೆ ಬಾಡಿಗೆಗೆ ಬಿಟ್ಟು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಬೇಕೆಂದು ತಿಳಿಸಿದರು.

ಶೃಂಗೇರಿ ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿಯ ಸಿಬ್ಬಂದಿ ಶಿಕ್ಷಕರು ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿಲ್ಲ ಎಂದು ದೂರು ಬರುತ್ತಿವೆ. ಆರೋಗ್ಯ ಇಲಾಖೆಯವರು ಲ್ಯಾಬ್‌ ಟೆಕ್ನಿಶೀಯನ್‌ ಕೆಲಸ ಕೊಡುತ್ತೇವೆಂದು 20 ಸಾವಿರ ರೂ. ಲಂಚ ತೆಗೆದುಕೊಂಡು 1 ವರ್ಷ ಕೆಲಸ ಮಾಡಿಸಿ ಈಗ ಕೆಲಸದಿಂದ ತೆಗೆದು ಹಾಕಿದ್ದಾರೆ. ಎನ್‌.ಎಚ್‌.ಆರ್‌. ಸ್ಕೀಮ್‌ನಲ್ಲಿ ಅವ್ಯವಹಾರ ಮಾಡಿದ್ದಾರೆ. ಡಿ.ಎಚ್‌.ಒ. ಅವರು ಇದರ ಬಗ್ಗೆ ಸಮಗ್ರ ಮಾಹಿತಿ ನೀಡಬೇಕೆಂದು ತಿಳಿಸಿದರು. ಜಿಲ್ಲಾ ಪಂಚಾಯತ್‌ ಸದಸ್ಯ ಸದಾಶಿವ ಪಿ.ರಾಘವನ್‌ ಮಾತನಾಡಿ, ಶಿಕ್ಷಣ ಇಲಾಖೆಯವರು ಕೋಳಿಫಾರಂ ಮತ್ತು ಮದ್ಯದ ಅಂಗಡಿ ಬಳಿ ಶಾಲಾ-ಕಾಲೇಜುಗಳನ್ನು ತೆರೆಯುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಏನಾಗಬಾರದು
ಎಂದು ಶಿಕ್ಷಣ ಇಲಾಖೆಯ ಅ ಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಮುಖ್ಯ ಶಿಕ್ಷಕರ ಇಂಕ್ರಿಮೆಂಟ್‌ ಮತ್ತು ಪ್ರಭಾರಿ ಭತ್ಯೆ ನೀಡುತ್ತಿಲ್ಲ ಎಂದು ದೂರುಗಳು ಬಂದಿವೆ. ಎನ್‌.ಆರ್‌.ಪುರದಲ್ಲಿ ಶಾಲೆಯೊಂದು ಬೀಳುವ ಸ್ಥಿತಿಯಲ್ಲಿದೆ. ಅದನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಜಿಲ್ಲಾ ಪಂಚಾಯತ್‌ ಸದಸ್ಯೆ ಶಶಿಕಲಾ ಅವಿನಾಶ್‌ ಮಾತನಾಡಿ, ಜಿಲ್ಲೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾರ್ನಿಂಗ್‌ ತರಗತಿಯನ್ನು ಮಾಡುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಸದಸ್ಯೆ ಕಾವೇರಿ ಲಕ್ಕಪ್ಪ, ಕೆ.ಎಚ್‌.ವನಮಾಲ ದೇವರಾಜ್‌, ಬಿ.ಎನ್‌.ನಿಖೀಲ್‌ ಚಕ್ರವರ್ತಿ, ಉಪಕಾರ್ಯದರ್ಶಿ ರಾಜ್‌ಗೋಪಾಲ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.