ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕರಾವಳಿಯ ವಿಜ್ಞಾನ ಪ್ರತಿಭೆ ಸುನೀತಾ ಪ್ರಭು
ಕರಾವಳಿಯ ಪ್ರತಿಭೆಯ ಸಾಧನೆಯನ್ನು ಟ್ವಿಟ್ಟರ್ ನಲ್ಲಿ ಪ್ರಶಂಸಿದ ನಮೋ
Team Udayavani, Jan 24, 2020, 10:24 PM IST
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಬಾಲ ಪುರಸ್ಕಾರ ಗೌರವಕ್ಕೆ ಪಾತ್ರರಾದ ಮಕ್ಕಳನ್ನು ಭೇಟಿಯಾಗಿ ಅವರೊಂದಿಗೆ ಸಂವಾದವನ್ನು ನಡೆಸಿದರು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಚಿಣ್ಣರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಅವರೆಲ್ಲರಿಗೂ ಪ್ರಧಾನಿ ಅವರು ಉಡುಗೊರೆ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.
ಈ ಪ್ರತಿಭೆಗಳಲ್ಲಿ ನಮ್ಮ ಕರಾವಳಿಯ ಕುವರಿಯೊಬ್ಬಳೂ ಇರುವುದು ನಮಗೆಲ್ಲಾ ಹೆಮ್ಮೆಯ ವಿಚಾರವಾಗಿದೆ. ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರ್ಜೆ ಸುನಿತಾ ಪ್ರಭು. ವಿಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಈ ಬಾಲ ಪ್ರತಿಭೆ ಮಾಡಿರುವ ವಿಶೇಷ ಸಾಧನೆಗಾಗಿ ಸುನಿತಾ ಅವರಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಲಭಿಸಿದೆ.
ತಮ್ಮನ್ನು ಭೇಟಿಯಾದ ಬಾಲ ಪ್ರತಿಭೆಗಳ ಸಾಧನೆಯ ಕುರಿತಾಗಿ ಪ್ರಧಾನಿ ಮೋದಿ ಅವರು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ. ಸುನಿತಾ ಪ್ರಭು ಅವರ ಕುರಿತಾಗಿ ಮೋದಿ ಅವರು ಹೀಗೆ ಬರೆದುಕೊಂಡಿದ್ದಾರೆ, ‘ಭಾರತದ ಪರಿಸರಕ್ಕೆ ಸಂಬಂಧಿಸಿದಂತೆ ಸೊಳ್ಳೆಗಳಿಂದ ಹರಡುವ ಕಾಯಿಲೆಗಳನ್ನು ನಿಗ್ರಹಿಸುವ ವಿಚಾರದಲ್ಲಿ ಸುನಿತಾ ಪ್ರಭು ಮೂರ್ಜೆ ಅವರು ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ.’
‘ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾಗಿರುವ ಅವರನ್ನು ನಾನು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸುತ್ತೇನೆ ಮತ್ತು ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸುತ್ತೇನೆ’ ಎಂದು ಮೋದಿ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಕರಾವಳಿ ಬಾಲಕಿಯ ಪ್ರತಿಭೆಯನ್ನು ಪ್ರಶಂಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಮುಖದ ಹೊಳಪಿನ ಗುಟ್ಟೇನು? ಮಕ್ಕಳೊಂದಿಗೆ ಗುಟ್ಟು ಬಿಟ್ಟುಕೊಟ್ಟ ನಮೋ!
Suneetha Murje Prabhu is making a valuable contribution as far as lowering vector borne diseases in India is concerned.
I congratulate her on winning the Bal Shakti Puraskar 2020 and wish her the very best for her future endeavours. pic.twitter.com/n1MoK4Jzq2
— Narendra Modi (@narendramodi) January 24, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.