ದಾವೋಸ್ ಪ್ರವಾಸ ಫಲಪ್ರದ: ಸಿಎಂ ಸಂತಸ
Team Udayavani, Jan 25, 2020, 3:07 AM IST
ಬೆಂಗಳೂರು: ಸ್ವಿಡ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ 50ನೇ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಶುಕ್ರವಾರ ಬೆಂಗಳೂರಿಗೆ ಹಿಂತಿರುಗಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಾವೋಸ್ ಪ್ರವಾಸ ಫಲಪ್ರದವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಮಧ್ಯಾಹ್ನ ಬಂದಿಳಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸೇರಿ ಉನ್ನತ ಅಧಿಕಾರಿಗಳ ತಂಡದ ವಿಶೇಷ ಪರಿಶ್ರಮದಿಂದ 40ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳೊಂದಿಗೆ ಪ್ರತ್ಯೇಕವಾಗಿ ಅರ್ಧ ಗಂಟೆ ಚರ್ಚಿಸಲು ಅನುಕೂಲವಾಯಿತು ಎಂದು ತಿಳಿಸಿದರು.
ದಾವೋಸ್ ಸಭೆಯಲ್ಲಿ ಎಲ್ಲರ ಬಾಯಲ್ಲೂ ಬೆಂಗಳೂರು, ಕರ್ನಾಟಕದ ವಿಚಾರವೇ ಕೇಳಿಬಂತು. ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಾವೋಸ್ ಪ್ರವಾಸ ಕೈಗೊಂಡಿದ್ದರು. 16 ವರ್ಷಗಳ ಬಳಿಕ ನಾನು ಪ್ರವಾಸ ಹೋಗಿ ಬಂದಿದ್ದೇನೆ. ಬಹಳಷ್ಟು ವಿದೇಶಿ ಕಂಪೆನಿಗಳು ಹೂಡಿಕೆಗೆ ಆಸಕ್ತಿ ತೋರಿದ್ದು, ಎಲ್ಲರೊಂದಿಗೆ ಚರ್ಚಿಸಲಾಗಿದೆ. ನವೆಂಬರ್ನಲ್ಲಿ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಭೆಯೂ ಉತ್ತಮವಾಗಿ ನಡೆದಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಪಾಲ್ಗೊಂಡಿದ್ದರು ಎಂದು ಹೇಳಿದರು.
ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಭೆ, ಮುನ್ನೋಟ ಪರಿಚಯವು ಸಾಕಷ್ಟು ಲಾಭ ತಂದು ಕೊಡಲಿದೆ. ದಾವೋಸ್ ಸಭೆಯಲ್ಲಿ ಪಾಲ್ಗೊಂಡಿದ್ದರ ಲಾಭ ಮುಂದಿನ 2-3 ವರ್ಷಗಳಲ್ಲಿ ಎಲ್ಲರಿಗೂ ಗೊತ್ತಾಗಲಿದೆ ಎಂದು ಭಾವಿಸಿದ್ದೇನೆ. ಲುಲು ಕಂಪೆನಿ ರಾಜ್ಯದಲ್ಲಿ ಸಾಗಣೆ ಕ್ಷೇತ್ರದಲ್ಲಿ 2000 ಕೋಟಿ ರೂ. ಹೂಡಿಕೆಗೆ ಮುಂದೆ ಬಂದಿದೆ. ಇದರಿಂದ ಹಾಲು, ಹಣ್ಣು, ತರಕಾರಿ ಸಾಗಣೆಗೆ ಅನುಕೂಲ ವಾಗಿ ರೈತರಿಗೆ ನೆರವಾಗುವ ನಿರೀಕ್ಷೆ ಇದೆ. ದಾವೋಸ್ ಪ್ರವಾಸದಿಂದ ರಾಜ್ಯದ ಅಭಿವೃದ್ಧಿ ಚುರುಕುಗೊಳ್ಳುವುದಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉದ್ಯಮಿಗಳು, ಹೂಡಿಕೆದಾರರು, ಪ್ರತಿಷ್ಠಿತ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿರಂತರವಾಗಿ ಸಂಪರ್ಕ, ಸಮನ್ವಯ ಮುಂದುವರಿಸಬೇಕಿದೆ. ಹೂಡಿಕೆದಾರರು ಕೆಲ ಸಮಸ್ಯೆ, ಕೊರತೆಗಳ ಬಗ್ಗೆಯೂ ಪ್ರಸ್ತಾಪಿಸಿದ್ದು, ಅವುಗಳನ್ನು ನಿವಾರಿಸಲು ಸಿದ್ಧವಿರುವುದಾಗಿ ಭರವಸೆ ನೀಡಿದ್ದೇವೆ. ಒಟ್ಟಾರೆ ದಾವೋಸ್ ಪ್ರವಾಸ ಫಲಪ್ರದವಾಗಿದೆ ಎಂದು ಸಂತಸದಿಂದ ನುಡಿದರು. ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಇತರರು ಬೆಂಗಳೂರಿಗೆ ಹಿಂತಿರುಗಿದರು.
ಮುಖ್ಯಮಂತ್ರಿ ನೇತೃತ್ವದ ತಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಶುಕ್ರವಾರ ಮಧ್ಯಾಹ್ನ ಬಂದಿಳಿಯುತ್ತಿದ್ದಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್, ಪ್ರಭು ಚೌಹಾಣ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಸಂಸದ ಭಗವಂತ ಖೂಬಾ ಇತರರು ಆತ್ಮೀಯವಾಗಿ ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.