ಕೊರೊನಾವೈರಸ್‌ಗೆ ಬೆಚ್ಚಿಬಿದ್ದ ಚೀನ ಸ್ತಬ್ಧ ; 13 ನಗರಗಳು ಸಂಪೂರ್ಣ ಲಾಕ್‌ಡೌನ್
Team Udayavani, Jan 25, 2020, 2:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬೀಜಿಂಗ್/ಹೊಸದಿಲ್ಲಿ: ಚೀನಗೆ ವಕ್ಕರಿಸಿಕೊಂಡಿರುವ ಡೆಡ್ಲಿ ಕೊರೊನಾವೈರಸ್ ದಿನಕಳೆದಂತೆ ಭೀತಿ ಹೆಚ್ಚಿಸುತ್ತಿದ್ದು, ಇಲ್ಲಿನ 13 ನಗರಗಳು ಅಕ್ಷರಶಃ ಲಾಕ್ ಡೌನ್ ಆಗಿವೆ. ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ 4 ನಗರಗಳಲ್ಲಿ ಸಂಚಾರ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಹೀಗಾಗಿ 4.10 ಕೋ. ಮಂದಿಯ ಜೀವನ ಅಸ್ತವ್ಯಸ್ತವಾಗಿದೆ.
ಸಂಚಾರ ನಿರ್ಬಂಧ ಹೇರಿರುವ ಕಾರಣ ಜನರು ಮನೆಗಳಿಂದ ಹೊರಬರುತ್ತಿಲ್ಲ. ಔಷಧ ಅಂಗಡಿಗಳು ಹೊರತುಪಡಿಸಿ ಬೇರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಸಾರ್ವಜನಿಕ ಸಮಾರಂಭಗಳು, ಕೌಟುಂಬಿಕ ಕಾರ್ಯಕ್ರಮಗಳನ್ನೂ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.
ಚೀನದ ಮಹಾಗೋಡೆಯ ಒಂದು ಭಾಗದ ವೀಕ್ಷಣೆಗೆ ಅವಕಾಶ ನಿರಾಕರಿಸಲಾಗಿದ್ದು, ಪ್ರವಾಸಿ ಗರ ಆಗಮನಕ್ಕೆ ಕಡಿವಾಣ ಹಾಕಲಾಗಿದೆ. ಚೀನದಲ್ಲಿ ಈ ವೈರಸ್‌ಗೆ ಬಲಿಯಾದವರ ಸಂಖ್ಯೆ ಶುಕ್ರವಾರ 26ಕ್ಕೇರಿಕೆಯಾಗಿದೆ. ಒಟ್ಟಾರೆ 830 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನೂ 1,072 ಮಂದಿಗೆ ರೋಗ ಲಕ್ಷಣ ಕಂಡುಬಂದಿದೆ.
ಕಾರ್ಯಕ್ರಮ ರದ್ದು: ವೈರಸ್ ಭೀತಿ ಹಿನ್ನೆಲೆಯಲ್ಲಿ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಣರಾಜ್ಯ ದಿನದ ಕಾರ್ಯಕ್ರಮವನ್ನು ರದ್ದು ಮಾಡಿದೆ.
ಮುಂಬಯಿನಲ್ಲಿ ಇಬ್ಬರ ಮೇಲೆ ನಿಗಾ: ಇದೇ ವೇಳೆ, ಚೀನದಿಂದ ಮುಂಬಯಿಗೆ ಆಗಮಿಸಿರುವ ಇಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ಕಸ್ತೂರ್ ಬಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಅವರ ಮೇಲೆ ನಿಗಾ ವಹಿಸಲಾಗಿದೆ. ಭಾರತದಲ್ಲಿ ಈವರೆಗೆ ಯಾವುದೇ ಕೊರೊನಾವೈರಸ್ ಪ್ರಕರಣ ಪತ್ತೆಯಾಗಿಲ್ಲ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಸಿದ್ಧಪಡಿಸಿ ಇಟ್ಟು ಕೊಳ್ಳಲಾಗಿದೆ.
ಜಾಗತಿಕ ತುರ್ತು ಪರಿಸ್ಥಿತಿ ಇಲ್ಲ: ಕೆಲವು ದೇಶಗಳಲ್ಲಿ ಈ ಸೋಂಕು ಪತ್ತೆಯಾಗಿದ್ದರೂ, ಚೀನ ಕೈಗೊಂಡ ಕ್ರಮಗಳಿಂದಾಗಿ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿಲ್ಲ. ಹೀಗಾಗಿ, ಸದ್ಯಕ್ಕೆ ಜಾಗತಿಕ ತುರ್ತು ಪರಿಸ್ಥಿತಿ ಘೋಷಿ ಸಬೇಕಾದ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ತಿಳಿಸಿದೆ.
ಕೇರಳ ನರ್ಸ್‌ಗೆ ತಗುಲಿಲ್ಲ ಸೋಂಕು
ಸೌದಿ ಅರೇಬಿಯಾದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೇರಳದ ನರ್ಸ್ ಗೆ ಕೊರೊನಾವೈರಸ್ ಸೋಂಕು ತಗುಲಿಲ್ಲ ಎಂದು ಜೆಡ್ಡಾದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಸ್ಪಷ್ಟಪಡಿಸಿದ್ದಾರೆ.
ಅವರಲ್ಲಿ ಕಂಡುಬಂದಿರುವುದು ಕೊರೊನಾವೈರಸ್ ಸೋಂಕು ಅಲ್ಲ. ಈ ಬಗ್ಗೆ ಸುಳ್ಳು ಮಾಹಿತಿ ಹರಡದಿರಿ ಎಂದು ವೈಜ್ಞಾನಿಕ ಪ್ರಾದೇಶಿಕ ಸೋಂಕು ನಿಯಂತ್ರಣ ಸಮಿತಿ ಮುಖ್ಯಸ್ಥ ಡಾ| ತಾರಿಕ್ ಅಜ್ರಾಕಿ ಹೇಳಿದ್ದಾರೆ. ಗುರು ವಾರವಷ್ಟೇ ನರ್ಸ್‌ಗೆ ಸೋಂಕಿರುವುದು ದೃಢಪಟ್ಟಿದೆ ಎಂದು ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.