ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 41ಕ್ಕೆ ಏರಿಕೆ: 1,300 ಜನರಲ್ಲಿ ವೈರಾಣು ಪತ್ತೆ
Team Udayavani, Jan 25, 2020, 8:40 AM IST
ವುಹಾನ್ : ಚೀನಾದಲ್ಲಿ ಆವರಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 41 ಕ್ಕೆ ಏರಿದೆ. ಸರಿಸುಮಾರು 1300 ಜನರು ಈ ವೈರಾಣುವಿಗೆ ತುತ್ತಾಗಿದ್ದಾರೆ ಎಂದು ವೈದ್ಯಾಧಿಕಾರಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೊದಲ ಬಾರಿಗೆ ವೈರಸ್ ಪತ್ತೆಯಾದ ವುಹಾನ್ ನಗರದಲ್ಲೇ ಹೊಸದಾಗಿ 15 ಜನರು ಈ ಸೋಂಕುವಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಈ ನಗರದಲ್ಲಿ ಮತ್ತೆ 444 ಜನರಿಗೆ ವೈರಾಣು ಇರುವುದು ಧೃಢಪಟ್ಟಿದ್ದು , 1,287 ಜನರು ಈ ಮಾರಾಣಾಂತಿಕ ವೈರಸ್ ಗೆ ತುತ್ತಾಗಿದ್ದಾರೆ ಎನ್ನುವ ಶಂಕೆ ವ್ಯಕ್ತಪಡಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.
ಚೀನಗೆ ವಕ್ಕರಿಸಿಕೊಂಡಿರುವ ಡೆಡ್ಲಿ ಕೊರೊನಾವೈರಸ್ ದಿನಕಳೆದಂತೆ ಭೀತಿ ಹೆಚ್ಚಿಸುತ್ತಿದ್ದು, ಇಲ್ಲಿನ 13 ನಗರಗಳು ಅಕ್ಷರಶಃ ಲಾಕ್ ಡೌನ್ ಆಗಿವೆ. ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ 4 ನಗರಗಳಲ್ಲಿ ಸಂಚಾರ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಹೀಗಾಗಿ 4.10 ಕೋ. ಮಂದಿಯ ಜೀವನ ಅಸ್ತವ್ಯಸ್ತವಾಗಿದೆ.
ಸಂಚಾರ ನಿರ್ಬಂಧ ಹೇರಿರುವ ಕಾರಣ ಜನರು ಮನೆಗಳಿಂದ ಹೊರಬರುತ್ತಿಲ್ಲ. ಔಷಧ ಅಂಗಡಿಗಳು ಹೊರತುಪಡಿಸಿ ಬೇರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಸಾರ್ವಜನಿಕ ಸಮಾರಂಭಗಳು, ಕೌಟುಂಬಿಕ ಕಾರ್ಯಕ್ರಮಗಳನ್ನೂ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.
ಚೀನದ ಮಹಾಗೋಡೆಯ ಒಂದು ಭಾಗದ ವೀಕ್ಷಣೆಗೆ ಅವಕಾಶ ನಿರಾಕರಿಸಲಾಗಿದ್ದು, ಪ್ರವಾಸಿಗರ ಆಗಮನಕ್ಕೆ ಕಡಿವಾಣ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.