ಹಸಿ-ಒಣ ಕಸ ವಿಂಗಡಿಸದೇ ಕೊಟ್ಟರೆ ದಂಡ ಖಚಿತ
Team Udayavani, Jan 25, 2020, 10:43 AM IST
ಬೆಂಗಳೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಂಗ್ರಹ ವಾಗುವ ಹಸಿ ಮತ್ತು ಒಣ ಕಸವನ್ನು ವಿಂಗಡಿಸದೇ ಪೌರ ಕಾರ್ಮಿಕರಿಗೆ ನೀಡಿದರೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ಕಸ ವಿಂಗಡಣೆ ಮಾಡದೆ ಉದಾಸೀನ ತೋರುವ ಸಾರ್ವಜನಿಕರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಪಾಲಿಕೆ ಚುರುಕುಗೊಳಿಸಿದೆ. ಈ ಸಂಬಂಧ “ಉದಯವಾಣಿ’ ಜತೆ ಮಾತನಾಡಿದ ಬಿಬಿಎಂಪಿ ವಿಶೇಷ (ಘನತ್ಯಾಜ್ಯ)ಆಯುಕ್ತ ರಂದೀಪ್, “ಬಿಬಿಎಂಪಿ ಕಸ ನಿರ್ವಹಣೆ ಉಪನಿಯಮ-2019′ ಕರಡು ಪ್ರಕಾರ ದಂಡ ವಿಧಿಸಲಾಗುತ್ತಿದೆ ಎಂದರು.
ಎಲ್ಲೆಂದರಲ್ಲಿ ಕಸ ಎಸೆದರೆ, ಉಗುಳಿದರೆ, ಮಲ- ಮೂತ್ರ ವಿಸರ್ಜನೆ ಮಾಡಿದರೆ ಮೊದಲ ಬಾರಿಗೆ 500 ರೂ. ಹಾಗೂ ಎರಡನೇ ಬಾರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ. ಅದೇ ರೀತಿ ಹಸಿ ಮತ್ತು ಒಣ ಕಸ ವಿಂಗಡಣೆ ಮಾಡದಿದ್ದರೆ, ಮೊದಲ ಬಾರಿ 500 ರೂ, ಎರಡನೇ ಬಾರಿ ಪುನರಾವರ್ತನೆಯಾದರೆ, 1,000 ರೂ. ದಂಡ ವಿಧಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಕಸದ ಪ್ರಮಾಣ ಹೆಚ್ಚಾಗಿದ್ದರೆ ಒಂದು ಸಾವಿರದಿಂದ ಐದು ಸಾವಿರ ರೂ.ವರೆಗೆ ದಂಡ ವಿಧಿಸಬಹುದಾಗಿದೆ ಎಂದು ವಿವರಿಸಿದರು. ಕಸ ವಿಂಗಡಣೆ ಮಾಡದ ಹಿನ್ನೆಲೆಯಲ್ಲಿ ಜ.1ರಿಂದ ಜ.17ರವರೆಗೆ ಪಾಲಿಕೆ ವ್ಯಾಪ್ತಿಯ ಆರು ವಲಯಗಳಲ್ಲಿ 470 ಜನರಿಂದ 1.37 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ರಂದೀಪ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.