ಅವೈಜ್ಞಾನಿಕ ಕಟ್ಟಡಕ್ಕೆ ವಿರೋಧ
Team Udayavani, Jan 25, 2020, 12:01 PM IST
ಜಮಖಂಡಿ: ನೂತನ ಕೇಂದ್ರ ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಕಟ್ಟಡ ನಿರ್ಮಿಸುವುದನ್ನು ವಿರೋಧಿಸಿ ಸಾರ್ವಜನಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ದಿ| ಸಿದ್ದು ನ್ಯಾಮಗೌಡರು ಸಿಂಗಾಪೂರ ಮಾದರಿಯಲ್ಲಿ ಬಸ್ ನಿರ್ಮಾಣಗೊಳಿಸಲು ಸಾಕಷ್ಟು ಶ್ರಮಪಟ್ಟಿದ್ದು, ಬಸ್ ನಿಲ್ದಾಣದ ಪ್ರಮುಖ ಸ್ಥಳದಲ್ಲಿ ನೀರಿನ ಟ್ಯಾಂಕ್ ಕಟ್ಟಲು ಮುಂದಾಗಿದೆ.
ಈ ಬಗ್ಗೆ ಸ್ಥಳೀಯ ಘಟಕದ ಅಧಿಕಾರಿಗಳಿಗೆ ಹಾಗೂ ನಗರದ ಪ್ರಮುಖರ ಗಮನಕ್ಕೂ ಬಾರದೇ ಬೇಕಾಬಿಟ್ಟಿ ಕಾಂಕ್ರೀಟ್ ರಸ್ತೆಯನ್ನು ಹಡ್ಡಿ ಹಾಳು ಮಾಡಲಾಗುತ್ತಿದೆ. ನಿಲ್ದಾಣದ ಮಧ್ಯಭಾಗದಲ್ಲೇ ನೀರಿನ ಟ್ಯಾಂಕ್ ನಿರ್ಮಿಸುವುದರಿಂದ ಹೊಸದಾಗಿ ಕಟ್ಟಿದ ಕಟ್ಟಡಕ್ಕೆ ಧಕ್ಕೆ ಆಗಲಿದೆ. ರಸ್ತೆಯಲ್ಲಿ ನೀರು ಹರಿದಾಡುವುದರಿಂದ ವಾಹನ ಹಾಗೂ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತದೆ ಎಂದು ಆರೋಪಿಸಲಾಗಿದೆ.
ಮಳೆ ಬಂದರೆ ಕೆರೆ: ಭಾರಿ ಮಳೆ ಬಂದರೆ ಬಸ್ ನಿಲ್ದಾಣದಲ್ಲಿ ಸಣ್ಣದೊಂದು ಕೆರೆ ನಿರ್ಮಾಣವಾಗುತ್ತದೆ. ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಈ ಟ್ಯಾಂಕ್‌ದಲ್ಲಿ ಮಳೆನೀರು, ಗಟಾರ ನೀರು ಸೇರಿ ರೋಗ-ರುಜಿಣಿ ಹರಡುವ ಸಾಧ್ಯತೆ ಇದೆ. ಬಸ್ ನಿಲ್ದಾಣದಲ್ಲಿ ಈಗಾಗಲೇ ಸಾಕಷ್ಟು ಗಲೀಜು ನೀರು ನಿಂತು ಸಂಚಾರಕ್ಕೆ ಅಡಚಣೆ ಆಗಲಿದೆ. ಕಾಮಗಾರಿ ಕೂಡಲೇ ನಿಲ್ಲಿಸದಿದ್ದರೆ ಬಸ್ ನಿಲ್ದಾಣದಲ್ಲಿ ಉಗ್ರ ಹೋರಾಟ ನಡೆಸಿ, ರಸ್ತಾ ರೋಕೋ ಚಳವಳಿ ನಡೆಸುವುದಾಗಿ ನಗರಸಭೆ ಸದಸ್ಯರಾದ ದಾನೇಶ ಘಾಟಗೆ, ಪರಮಾನಂದ ಗೌರೋಜಿ, ಮಹಾದೇವ ಕಲೂತಿ, ಅಬುಬಕರ ಕುಡಚಿ, ಪುಟ್ಟು ಪಾನಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.