ನನಗೆ ಡಿಸಿಎಂ ಸ್ಥಾನ ನೀಡಬೇಕೆಂಬುದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ: ಶ್ರೀರಾಮುಲು

Team Udayavani, Jan 25, 2020, 1:54 PM IST

ramulu

ಬಳ್ಳಾರಿ: ಕಳೆದ ಉಪಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದು, ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದು ಪಕ್ಷದ ಹೈಕಮಾಂಡ್ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟ ವಿಚಾರ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳುತ್ತಾರೆ. ಇತ್ತೀಚೆಗೆ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವುದನ್ನು ಹೈಕಮಾಂಡ್ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ನಾನು (ಶ್ರೀರಾಮುಲು) ಉಪಮುಖ್ಯಮಂತ್ರಿ  ಆಗಬೇಕು ಅನ್ನೋದು ಜನರ ಬೇಡಿಕೆ. ಜನರ ಬೇಡಿಕೆಯನ್ನು ನಾನು ಅಲ್ಲಗೆಳೆಯುವುದಿಲ್ಲ. ಆದರೆ, ನನಗೆ ಡಿಸಿಎಂ ಹುದ್ದೆ ನೀಡುವ ವಿಷಯ ಪಕ್ಷದ ಹೈಕಮಾಂಡ್, ಸಿಎಂ ಬಿಎಸ್ ವೈ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ  ವೀಲ್ ಚೇರ್ ನೀಡದ ಅಮಾನವೀಯ ಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ. ಇಂತಹ ಘಟನೆಗಳನ್ನು ಬಿಹಾರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ನೋಡಿದ್ದೇವೆ. ಈಗ ಬಳ್ಳಾರಿಯಲ್ಲಿ ಇಂತಹ ಘಟನೆ ನಡೆದಿದೆ. ತಪ್ಪಿತಸ್ಥರು ಯಾರೇ ಇದ್ದರೂ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆ ಇದೆ. ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದಾಗ ನಾನು ಇದನ್ನು ಗಮನಿಸಿದ್ದೇನೆ. ಬೆಡ್ ಕೊರತೆ ಇರೋ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ಇಲ್ಲ ಎಂದ ಸಚಿವ ರಾಮುಲು, ಇತ್ತೀಚೆಗೆ ರಾಜ್ಯವನ್ನು ಆವರಿಸಿದ್ದ ನೆರೆ ಹಾವಳಿಯನ್ನು ಸಮರ್ಥವಾಗಿ ಎದುರಿಸಿದ್ದೇವೆ. ಕೇಂದ್ರ ಮತ್ತು ರಾಜ್ಯ  ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಯಾವುದೇ ಆರ್ಥಿಕ ಬಿಕ್ಕಟ್ಟು  ಇಲ್ಲ ಎಂದರು.

ಶಾಸಕರ ಮೂರು ತಿಂಗಳ ಸಂಬಳ ಆಗಿಲ್ಲ ಎನ್ನುವುದು ವಿರೋಧ ಪಕ್ಷದವರ ಆರೋಪವಷ್ಟೇ. ಈ ಬಗ್ಗೆ ನನಗೂ ಗೊತ್ತಿಲ್ಲ ಎಂದ ಸಚಿವ ರಾಮುಲು ತಿಳಿದುಕೊಂಡು ಮಾತನಾಡ್ತೇನೆ. ನನ್ನ ವೇತನ ನೋಡಿಲ್ಲ. ನೋಡಿ ಪರಿಶೀಲನೆ ಮಾಡುತ್ತೇನೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

High-Court

Punjalakatte: ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.