ಮಂಗಳೂರು: ನಿರ್ದಿಷ್ಟ ಸಮುದಾಯವನ್ನು ವಿನಾ ಕಾರಣ ಗುರಿ ಮಾಡದಿರಿ: ಮಿಥುನ್ ರೈ
Team Udayavani, Jan 25, 2020, 3:58 PM IST
ಮಂಗಳೂರು: ಮಂಗಳೂರು ಏರ್ ಪೋರ್ಟ್ ನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಸಂದರ್ಭದಲ್ಲಿ ಕೆಲ ಸಚಿವರು ಮತ್ತು ಬಿಜೆಪಿ ಮುಖಂಡರು ನಿರ್ದಿಷ್ಟ ಸಮುದಾಯವನ್ನು ನಿಂದಿಸಿದ್ದಾರೆ. ಆರೋಪಿಯ ಪತ್ತೆಯಾದೊಡನೆ ಈ ನಾಯಕರು ತದ್ವಿರುದ್ಧ ಹೇಳಿಕೆ ನೀಡತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಕ್ಕೆ ಸಂಬಂಧಿಸಿ ನಿರ್ದಿಷ್ಟ ಸಮುದಾಯವನ್ನು ವಿನಾ ಕಾರಣ ಗುರಿ ಮಾಡುವುದನ್ನು ಮುಂದುವರಿಸಿದರೆ ಅಂತಹ ಸಚಿವರು, ಬಿಜೆಪಿ ಮುಖಂಡರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಮಂಗಳೂರು ಏರ್ ಪೋರ್ಟ್ ನಲ್ಲಿ ಸ್ಫೋಟಕ ಪತ್ತೆ ಪ್ರಕರಣ ಕುರಿತು ಅವರು ಶನಿವಾರದಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬಿಜೆಪಿಗರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಸೂಕ್ತ ಕ್ರಮ ಜರುಗಿಸಲಿ. ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮುಗಲಭೆ ಪೀಡಿತ ಪ್ರದೇಶವನ್ನಾಗಿಸಲು ಬಿಡುವುದಿಲ್ಲ. ಬಿಜೆಪಿಗರ ಈ ಷಡ್ಯಂತ್ರದ ವಿರುದ್ಧ ಯುವ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.