ಮತಗಟ್ಟೆಗಳ ಸ್ಥಿತಿಗತಿ ಪರಿಶೀಲಿಸಿ ವರದಿ ಸಲ್ಲಿಸಿ

37,109 ಅರ್ಜಿಗಳು ಸ್ವಿಕೃತಸಾಫ್ಟ್‌ವೇರ್‌ ಸುಧಾರಣೆಗೆ ಚುನಾವಣಾ ಆಯೋಗಕ್ಕೆಪ್ರಸ್ತಾವನೆ

Team Udayavani, Jan 25, 2020, 4:38 PM IST

25-January-21

ಚಿತ್ರದುರ್ಗ: ಮತದಾರರ ಪರಿಷ್ಕರಣೆಯಲ್ಲಿ ಅತಿ ಹೆಚ್ಚು ಮತ್ತು ಅತೀ ಕಡಿಮೆ ಮತದಾರರು ನೋಂದಣಿಯಾಗಿರುವ ಮತಗಟ್ಟೆಗಳ ಸ್ಥಿತಿಗತಿ ಪರಿಶೀಲಿಸಿ, ಸಮಗ್ರ ವರದಿ ಸಲ್ಲಿಸುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್‌ ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.16 ರಿಂದ ಜ.15ರವರೆಗೂ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೆ 20,731 ಅರ್ಜಿ, ಹೆಸರು ತೆಗೆದು ಹಾಕಲು-8751, ತಿದ್ದುಪಡಿ-6488, ಕ್ಷೇತ್ರ ವ್ಯಾಪ್ತಿಯೊಳಗೆ ಸ್ಥಳಾಂತರಕ್ಕಾಗಿ 1139 ಅಸೇರಿ ಒಟ್ಟು 37,109 ಅರ್ಜಿಗಳು ಸ್ವೀಕೃತಗೊಂಡಿವೆ ಎಂದರು.

ಅತೀ ಕಡಿಮೆ ಹಾಗೂ ಹೆಚ್ಚು ನೋಂದಣಿ ಆಗಿರುವ ಸ್ಥಳಗಳಿಗೆ ಖುದ್ದು ತಹಶೀಲ್ದಾರ್‌ ಹಾಗೂ ಉಪವಿಭಾಗಾಧಿ ಕಾರಿ ಭೇಟಿ ನೀಡಿ ಪರಿಶೀಲಿಸಬೇಕು. ಈ ವರದಿಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿ, ಮುಂದಿನ ಸಭೆಯಲ್ಲಿ ಮಂಡಿಸಬೇಕು ಹೇಳಿದರು.

ದಾಖಲೆ ಪರಿಶೀಲಿಸಿ: ಮರಣ ಹೊಂದಿದವರ ಹೆಸರು ತೆಗೆದು ಹಾಕುವಾಗ ಮರಣ ಹೊಂದಿರುವ ಬಗ್ಗೆ ಸೂಕ್ತ ದಾಖಲೆ ಪರಿಶೀಲಿಸಿ ನಂತರ ಕ್ರಮ ತೆಗೆದುಕೊಳ್ಳಬೇಕು. ಜತೆಗೆ 22 ವರ್ಷ ಮೇಲ್ಪಟ್ಟವರನ್ನು ಸೇರಿಸುವಾಗಲೂ ಈ ಹಿಂದೆ ಎಲ್ಲಿ ನೋಂದಣಿ ಮಾಡಿಸಿದ್ದರು, ಅಲ್ಲಿ ಹೆಸರು ತೆಗೆದು ಹಾಕಲು ನಮೂನೆ-7 ಅರ್ಜಿ ಸಲ್ಲಿಸಿದ ಕುರಿತ ಸ್ವೀಕೃತಿ ಪತ್ರ, ಸ್ಥಳಾಂತರ ಆಗಿದ್ದಲ್ಲಿ ಮಾಹಿತಿ, ಒಂದು ವೇಳೆ ಎಲ್ಲಿಯೂ ನೋಂದಣಿ ಮಾಡಿಸದಿದ್ದಲ್ಲಿ ಕಾರಣ ಪರಿಶೀಲಿಸಿ ನಂತ ಅರ್ಜಿ ಪರಿಗಣಿಸಿ ಎಂದು ಹೇಳಿದರು.

7845 ಯುವ ಮತದಾರರ ಅರ್ಜಿ: 18 ರಿಂದ 19 ವರ್ಷದೊಳಗಿನ ಒಟ್ಟು 7845 ಯುವ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದಾರೆ. ಮೊಳಕಾಲ್ಮೂರು-1092, ಚಳ್ಳಕೆರೆ-1206, ಚಿತ್ರದುರ್ಗ-1692, ಹಿರಿಯೂರು-860, ಹೊಸದುರ್ಗ-733, ಹೊಳಲ್ಕೆರೆ-2262 ಅರ್ಜಿ ಸಲ್ಲಿಕೆಯಾಗಿವೆ. ಪ್ರತಿ ವರ್ಷ ಲಭ್ಯವಾಗಬಹುದಾದ ಯುವಜನರ ಸಂಖ್ಯೆ ಪರಿಗಣಿಸಿದರೆ ಈ ಸಂಖ್ಯೆ ಇನ್ನೂ ಹೆಚ್ಚಾಗಬೇಕಿತ್ತು. ಈ ಬಗ್ಗೆ ಪರಿಶೀಲಿಸಿ ಎಂದು ಹೇಳಿದರು.

ಕನ್ನಡ ತಂತ್ರಾಂಶ ಸಮಸ್ಯೆ ಪರಿಹಾರಕ್ಕೆ ಕ್ರಮ: ಆನ್‌ಲೈನ್‌ನಲ್ಲಿ ಮತದಾರರ ಹೆಸರು ಸೇರ್ಪಡೆಗೆ ಕೇವಲ 372 ಅರ್ಜಿಗಳು, ತೆಗೆದು ಹಾಕಲು-27, ತಿದ್ದುಪಡಿ-623, ಸ್ಥಳಾಂತರಕ್ಕೆ 34 ಸೇರಿದಂತೆ ಒಟ್ಟು 1056 ಅರ್ಜಿಗಳು ಸಲ್ಲಿಕೆಯಾಗಿವೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲಿ ವಿವರಗಳನ್ನು ನಮೂದಿಸಲು ಸಾಫ್ಟ್‌ವೇರ್‌ನಲ್ಲಿ ಸಮಸ್ಯೆಯಾಗುತ್ತಿದೆ ಎಂದು ದೂರು ಬಂದಿವೆ ಎಂದು ಜಿಲ್ಲಾ ಧಿಕಾರಿ ಗಮನಕ್ಕೆ ತಂದರು.

ಪ್ರತಿಕ್ರಿಯಿಸಿದ ಮಹೇಶ್ವರರಾವ್‌, ಆನ್‌ಲೈನ್‌ನಲ್ಲಿ ಕನ್ನಡ ಭಾಷೆಯಲ್ಲಿ ಅರ್ಜಿ ಭರ್ತಿ ಮಾಡಲು ಇರುವ ತೊಂದರೆ ನಿವಾರಣೆಗೆ ಸಾಫ್ಟ್‌ವೇರ್‌ ಸುಧಾರಿಸುವಂತೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಸಲಹೆ ನೀಡಿದರು. 13,43,207 ಮತದಾರರು: ಜಿಲ್ಲೆಯಲ್ಲಿ
ಸದ್ಯ 13,43,207 ಮತದಾರರರಿದ್ದು, 1648 ಮತಗಟ್ಟೆಗಳಿವೆ. ಪುರುಷ-6,75,771, ಮಹಿಳೆ-6,67,348 ಹಾಗೂ ಇತರೆ-88 ಮತದಾರರಿದ್ದಾರೆ. ಹೊಸದಾಗಿ ಸಲ್ಲಿಸಲಾಗಿರುವ
20731 ಅರ್ಜಿಗಳ ಪರಿಶೀಲನೆ ಕಾರ್ಯ ನಡೆಯುತ್ತಿದ್ದು, ಈಗಾಗಲೆ ಡಾಟಾ ಎಂಟ್ರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಧಿಕಾರಿ ವಿನೋತ್‌ ಪ್ರಿಯಾ ಮಾಹಿತಿ ನೀಡಿದರು.

ಪ್ರತಿಜ್ಞಾ ವಿಧಿ ಸ್ವೀಕಾರ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಪರ ಜಿಲ್ಲಾ ಧಿಕಾರಿ ಸಂಗಪ್ಪ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಅಧಿ ಕಾರಿ ಮಹೇಶ್ವರ ರಾವ್‌, ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಜಿಪಂ ಸಿಇಒ ಸತ್ಯಭಾಮಾ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ಪೌರಾಯುಕ್ತ ಜೆ.ಟಿ. ಹನುಮಂತರಾಜು, ಚುನಾವಣಾ ವಿಭಾಗದ ಸಂತೋಷ್‌, ತಹಶೀಲ್ದಾರರು ವಿವಿಧ ಇಲಾಖೆಗಳ  ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.