ಆಯುಷ್‌ ಇಲಾಖೆ ಮಹತ್ವ ತಿಳಿಸಿ

ಜನರಿಗೆ ಯೋಜನೆಗಳ ಮಾಹಿತಿ ನೀಡಿತಪ್ಪು ಭಾವನೆಗಳನ್ನು ಹೋಗಲಾಡಿಸಿ

Team Udayavani, Jan 25, 2020, 5:03 PM IST

25-January-23

ಅಫಜಲಪುರ: ಅನೇಕರಲ್ಲಿ ಆಯುಷ್‌ ಇಲಾಖೆ ಬಗ್ಗೆ ತಪ್ಪು ತಿಳಿವಳಿಕೆಯಿದೆ. ಆದರೆ ಆಯುಷ್‌ ವೈದ್ಯ ಪದ್ಧತಿ ಸಾವಿರಾರು ವರ್ಷಗಳಷ್ಟು ಹಳೆಯದು. ಅಡ್ಡಪರಿಣಾಮವಿಲ್ಲದ ಪದ್ಧತಿಯಾಗಿದೆ. ಹೀಗಾಗಿ ಆಯುಷ್‌ ಇಲಾಖೆ ಮಹತ್ವ ಎಲ್ಲರಿಗೂ ತಿಳಿಸಬೇಕು ಎಂದು ವೈದ್ಯೆ ಡಾ| ಸುಜಾತಾ ಪಾಟೀಲ ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ಜಿಲ್ಲಾ ಆಯುಷ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಯುಷ್‌ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಜನರಲ್ಲಿನ ತಪ್ಪು ಭಾವನೆಗಳನ್ನು ಹೋಗಲಾಡಿಸುವ ಸಲುವಾಗಿ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರನ್ನು ಕಾರ್ಯಾಗಾರಕ್ಕೆ ಕರೆದು ಆಯುಷ್‌ ಇಲಾಖೆಯ ಕುರಿತು ಮಾಹಿತಿ ನೀಡಲಾಗುತ್ತಿದೆ. ಅಂಗನವಾಡಿಗೆ ಬರುವ ಮಕ್ಕಳು ಹಾಗೂ ಮಕ್ಕಳ ಪಾಲಕರಿಗೆ ಆಯುಷ್‌ ಇಲಾಖೆಯ ಕುರಿತು, ಯೋಜನೆಗಳ ಕುರಿತು ಮಾಹಿತಿ ನೀಡುವ ಕೆಲಸ ಮಾಡಿ ಎಂದು ಮನವಿ ಮಾಡಿದರು.

ಆಯುಷ್‌ ಇಲಾಖೆ ಜಿಲ್ಲಾ ವೈದ್ಯಾಧಿ ಕಾರಿ ಡಾ| ರವೀಂದ್ರ ಗಿರಿ ಮಾತನಾಡಿ, ಆಯುರ್ವೇದ, ಯೋಗ, ಯುನಾನಿ, ಸಿದ್ಧಿ, ಹೋಮಿಯೋಪತಿ ಎಲ್ಲವೂ ಸೇರಿ ಆಯುಷ್‌ ಇಲಾಖೆಯಾಗಿದೆ. ಆಯುಷ್‌ ಚಿಕಿತ್ಸಾ ಪದ್ಧತಿಯಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಅಲ್ಲದೆ ಕಡಿಮೆ ಚಿಕಿತ್ಸಾ ವೆಚ್ಚದಲ್ಲಿ ರೋಗಗಳನ್ನು ಗುಣಪಡಿಸುವ ಕೆಲಸ ಆಯುಷ್‌ ಇಲಾಖೆ ಮಾಡುತ್ತಿದೆ ಎಂದರು.

ತಾಲೂಕು ವೈದ್ಯಾಧಿ ಕಾರಿ ಡಾ| ವಿ.ಎಸ್‌ ಸಾಲಿಮಠ, ಡಾ| ಎಂ.ಬಿ. ಪಾಟೀಲ ಮಾತನಾಡಿ, ಜನರಲ್ಲಿ ಆಯುಷ್‌ ಇಲಾಖೆ ಬಗ್ಗೆ ಇರುವ ತಪ್ಪು ತಿಳಿವಳಿಕೆ ದೂರವಾಗಿಸುವ ಸಲುವಾಗಿ ಇಂತಹ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಈ ಕಾರ್ಯಾಗಾರ ಇಲ್ಲಿಗೆ ನಿಲ್ಲುವುದಿಲ್ಲ. ಇಂತಹ ಅನೇಕ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದರು.

ಡಾ| ಮಲ್ಲೇರಾವ್‌ ಮಲ್ಲೆ ಮಾಹಿತಿ ನೀಡಿದರು. ಮುಖಂಡ ಸದ್ದಾಂಹುಸೇನ್‌ ನಾಕೇದಾರ, ಸಿಡಿಪಿಒ ಇಲಾಖೆಯ ಸರಳಾ ದೊಡ್ಮನಿ, ಡಾ| ಮನೋರಮಾ ಕಕ್ಕಳಮೇಲಿ, ಡಾ| ಮಲ್ಲಣ್ಣ, ಡಾ| ಶ್ರೀಶೈಲ ಪಾಟೀಲ, ಡಾ| ನಾಜಿಯಾ, ಡಾ| ಸುಧಿಧೀರ, ಡಾ| ಉಮಾಶಂಕರ, ಡಾ| ಪ್ರದೀಪ ಪಾಟೀಲ, ಸಿಡಿಪಿಒ ಇಲಾಖೆ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆರು ಮತ್ತು ಆಯುಷ್‌ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.